ಬೆಂಗಳೂರಿನಲ್ಲಿ 2 ದಿನ ಅದ್ಧೂರಿ ಕುಂದಾಪ್ರ ಕನ್ನಡ ಹಬ್ಬ :ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಜೋಡಾಟ
ಆ. 17 ಮತ್ತು 18 ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ನಸೆಯಲಿದೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್ ಪೆಟಲ್ಸ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಂಗಳೂರು : ಕುಂದಾಪ್ರ ಕನ್ನಡ ಪ್ರತಿಷ್ಠಾನ, ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ʼಕುಂದಾಪ್ರ ಕನ್ನಡ ಹಬ್ಬಕ್ಕೆ ಆ.17ರ ಸಂಜೆ 5 ಗಂಟೆಗೆ ಚಾಲನೆ ಸಿಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್ ಪೆಟಲ್ಸ್‌ನಲ್ಲಿ ಆ. 17 ಮತ್ತು 18 ಎರಡು ದಿನಗಳ ಕಾಲ ಈ ಹಬ್ಬ ನಡೆಯಲಿದೆ.
ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ.
ಇದನ್ನೂ ಓದಿ : ಬೆಂಗಳೂರಿನ ರಸ್ತೆ ಗುಂಡಿ ಸರಿ ಪಡಿಸಲು ನೂತನ ಆ್ಯಪ್ ಬಿಡುಗಡೆ ಮಾಡಿದ ಬಿಬಿಎಂಪಿ..! ನೀವು ಕೂಡ ದೂರು ನೀಡಬಹುದು..!
ಒಂದು ಲಕ್ಷ ಜನರು ಸೇರುವ ನಿರೀಕ್ಷೆ :
ಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸಲಾಗುತ್ತಿದೆ ಎಂದು ಕಾರ್ಯಕ್ರಮ ಆಯೋಜಕರು ಹೇಳಿದ್ದಾರೆ. ಎರಡು ದಿನಗಳ ಹಬ್ಬದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ.ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ.
ಹಬ್ಬಕ್ಕೆ ತಾರಾ ಮೆರುಗು :
ಕುಂದಾಪುರ ಕನ್ನಡ ಹಬ್ಬದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.
ಇದನ್ನೂ ಓದಿ : ಮೋದಿ ಟೀಕಿಸಿ ಸಿದ್ದರಾಮಯ್ಯ ಹೊಗಳಿದ ಯುವಕ:ಹಿಗ್ಗಾಮುಗ್ಗ ಥಳಿಸಿದ ಗುಂಪು
ಸಾಂಸ್ಕೃತಿಕ ಸೊಗಡು :
ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಿ ಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆ ಆಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ನಡೆಯಲಿದೆ. ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ.
ದಿನವಿಡೀಯ ವಿಶೇಷ :
ʼಹೊಟ್ಟಿ ಕಂಡದ್ದ್ ನಾವೇ ಸೈʼ ಎಂಬ ಹೆಸರಿನಲ್ಲಿ ಕರಾವಳಿ ಖಾದ್ಯಮೇಳ ಇರಲಿದ್ದು, ವಿಶೇಷ ತಿಂಡಿ-ತಿನಿಸುಗಳು ಲಭ್ಯ ಇರಲಿವೆ. ಅಲ್ಲದೆ ಕಡಲೂರಿನ ವಸ್ತು, ಒಡವೆ, ವಸ್ತ್ರಪ್ರದರ್ಶನ ಮತ್ತು ಮಾರಾಟದ ʼಕುಂದಾಪ್ರ ಸಂತಿʼ ಕೂಡ ಇರಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.