ಅನರ್ಹರು ಪಡೆದ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಲು ಆಗಸ್ಟ್ 31 ಕೊನೆಯ ದಿನ: ತಪ್ಪಿದಲ್ಲಿ ಕ್ರಿಮಿನಲ್ ಮೊಕದ್ದಮೆ
ನೌಕರರು ವಿಳಂಬ ಮಾಡದೇ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚಿಸಲಾಗಿದೆ. ಈ ಹಿಂದೆ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ನಂತರದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ನೌಕರರು ಕೂಡಾ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸರ್ಕಾರ ಆದೇಶಿಸಿದೆ.
ಧಾರವಾಡ: ಅನರ್ಹರು ಪಡೆದ ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಲು ಆಗಸ್ಟ್ 31 ಕೊನೆಯ ದಿನ ಒಂದು ವೇಳೆ ತಪ್ಪಿದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ಆದೇಶದನ್ವಯ ಕೆಲ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯದ ಅಧಿಕಾರಿ, ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗೆ ಕೆಳಗಿರುವ ಪಡಿತರ ಚೀಟಿಯನ್ನು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಪಡೆದುಕೊಂಡಿದ್ದಲ್ಲಿ ತಕ್ಷಣ ಅದನ್ನು ಆಹಾರ ಇಲಾಖೆಗೆ ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಈಗಾಗಲೇ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಮೋದಿ ಟೀಕಿಸಿ ಸಿದ್ದರಾಮಯ್ಯ ಹೊಗಳಿದ ಯುವಕ:ಹಿಗ್ಗಾಮುಗ್ಗ ಥಳಿಸಿದ ಗುಂಪು
ಕಾರಣ ಅಂತಹ ಅಧಿಕಾರಿ, ನೌಕರರು ವಿಳಂಬ ಮಾಡದೇ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚಿಸಲಾಗಿದೆ. ಈ ಹಿಂದೆ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ನಂತರದಲ್ಲಿ ಸರ್ಕಾರಿ ಸೇವೆಗೆ ಸೇರಿದ್ದ ನೌಕರರು ಕೂಡಾ ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಸರ್ಕಾರ ಆದೇಶಿಸಿದೆ.
ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಅಗಸ್ಟ 31, 2024 ರೊಳಗಾಗಿ ಸ್ವಯಂ ಪ್ರೇರಣೆಯಿಂದ ಆಯಾ ತಾಲೂಕಿನ ತಹಶೀಲದಾರ ಕಚೇರಿಯಲ್ಲಿ ಹಾಗೂ ಆಹಾರ ಇಲಾಖೆಯ ಹುಬ್ಬಳ್ಳಿ, ಧಾರವಾಡ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.
ಇದನ್ನೂ ಓದಿ : ಬೆಂಗಳೂರಿನ ರಸ್ತೆ ಗುಂಡಿ ಸರಿ ಪಡಿಸಲು ನೂತನ ಆ್ಯಪ್ ಬಿಡುಗಡೆ ಮಾಡಿದ ಬಿಬಿಎಂಪಿ..! ನೀವು ಕೂಡ ದೂರು ನೀಡಬಹುದು..!
ಸರ್ಕಾರವು ನೀಡಿರುವ ಆಗಸ್ಟ್ 31, 2024 ರ ಕಾಲಾವಕಾಶದಲ್ಲಿ ಅನರ್ಹರು ಪಡೆದ ಬಿಪಿಎಲ್ ಕಾರ್ಡಗಳನ್ನು ಸ್ವಯಂ ಪ್ರೇರಣೆಯಿಂದ ಸರಕಾರಕ್ಕೆ ಮರಳಿಸದೇ ಇದ್ದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.