ಜನ ಸಾಮಾನ್ಯರಿಗೆ ಶಾಕ್ ಮೇಲೆ ಶಾಕ್ ಆಟೋ ದರದಲ್ಲೂ ಏರಿಕೆ ! ಸಭೆ ಬಳಿಕ ಏರಿಕೆ ದರ ಸ್ಪಷ್ಟ ನಿರ್ಧಾರ !
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಆಟೋ ಸಂಘಟನೆಗಳು ಹಾಗೂ ಅಧಿಕಾರಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ದರ ಏರಿಕೆಯ ಬಗ್ಗೆ ಸಿಗಲಿದೆ ಸ್ಪಷ್ಟ ಚಿತ್ರಣ ಸಿಗಲಿದೆ.
ಬೆಂಗಳೂರು : ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಪ್ರತಿ ಒಂದು ಕಿ.ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಆಟೋ ಸಂಘಟನೆಗಳು ಹಾಗೂ ಅಧಿಕಾರಿಗಳ ಸಭೆ ಡಿಸೆಂಬರ್ 23 ರಂದು ನಡೆಯಲಿದೆ. ಈ ಸಭೆಯಲ್ಲಿ ಆಟೋ ದರ ಏರಿಕೆ ಬಗ್ಗೆ ಸ್ಪಷ್ಟ ನಿರ್ಧಾರ ಹೊರ ಬೀಳಲಿದೆ.
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಆಟೋ ಸಂಘಟನೆಗಳು ಹಾಗೂ ಅಧಿಕಾರಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ದರ ಏರಿಕೆಯ ಬಗ್ಗೆ ಸಿಗಲಿದೆ ಸ್ಪಷ್ಟ ಚಿತ್ರಣ ಸಿಗಲಿದೆ. ಸದ್ಯ ಪ್ರತಿ ಒಂದು ಕಿ.ಮೀಟರ್ ಗೆ 15 ರೂ, 2 ಕಿ.ಮೀ 30 ರೂ ದರ ಇದೆ. ಇದನ್ನು ಪ್ರತಿ ಕಿ.ಮೀ ಗೆ 5 ರೂಪಾಯಿವರೆಗೆ ಏರಿಕೆ ಮಾಡಬೇಕು ಎನ್ನುವ ಬೇಡಿಕೆ ಇದೆ.
ಇದನ್ನೂ ಓದಿ : ಕೊಪ್ಪಳದಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ
ಯಾರೆಲ್ಲ ಈ ಸಭೆಯಲ್ಲಿ ಭಾಗವಹಿಸುತ್ತಾರೆ ? :
1. ಬೆಂ. ನಗರ ಜಿಲ್ಲಾಧಿಕಾರಿ - ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ
2. ಜಯನಗರ ಆರ್ ಟಿ ಓ ಓರ್ವ ಅಧಿಕಾರಿ- ಕಾರ್ಯದರ್ಶಿಯಾಗಿರುತ್ತಾರೆ
ಕಮಿಟಿ ಸದಸ್ಯರುಗಳಾಗಿ
1. ಟ್ರಾಫಿಕ್ ಡಿಸಿಪಿ( ಯಾವುದಾದರು ಒಂದು ವಿಭಾಗ)
2. ತೂಕ ಮತ್ತು ಅಳತೆ ಇಲಾಖೆಯ ಅಧಿಕಾರಿ
3. ಗ್ರಾಹಕರ ವೇದಿಕೆಯಿಂದ ಓರ್ವ ಅಧಿಕಾರಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.