ಅಯೋಧ್ಯೆ ತೀರ್ಪು: ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

ಶನಿವಾರ ಅಯೋಧ್ಯೆ ತೀರ್ಪು ಹೊರಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Last Updated : Nov 9, 2019, 06:50 AM IST
ಅಯೋಧ್ಯೆ ತೀರ್ಪು: ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ title=

ಬೆಂಗಳೂರು: ಶನಿವಾರ(ನವೆಂಬರ್ 9) ಅಯೋಧ್ಯೆ ತೀರ್ಪು ಹೊರಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶತಮಾನಗಳಿಂದಲೂ ವಿವಾದದ ಸ್ವರೂಪದಲ್ಲಿದ್ದ ಅಯೋಧ್ಯೆಯ ಭೂ ವಿಷಯಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯದ ​ಸಂವಿಧಾನಿಕ ಪೀಠ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ. ಸುಪ್ರೀಂಕೋರ್ಟ್ ನಿಂದ ಇಂದು ಐತಿಹಾಸಿಕ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸುಪ್ರೀಂ ಕೋರ್ಟ್ ಹಾದಿಯಾಗಿ ಸಂವಿಧಾನಿಕ ಪೀಠ ಸುದೀರ್ಘವಾಗಿ ವಿಚಾರಣೆ ನಡೆಸಿ 2019ರ ಅಕ್ಟೋಬರ್ 16ರಂದು ತೀರ್ಪನ್ನು ಕಾಯ್ದಿರಿಸಿಲಾಗಿತ್ತು. ಅಂತಿಮ ಘಟ್ಟದಲ್ಲಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ​ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಎ. ಬೋಬ್ಡೆ, ಡಾ. ಡಿ.ವೈ. ಚಂದ್ರಚೂಡ್, ಎಸ್. ಅಬ್ದುಲ್ ನಜೀರ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ  ಸಂವಿಧಾನ ಪೀಠವು ಇಂದು ತೀರ್ಪನ್ನು ಪ್ರಕಟಿಸಲಿದೆ.

Trending News