ಚಾಮರಾಜನಗರ: ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಜನಮನ್ನಣೆ ಗಳಿಸಿದ್ದ ಬಿ.ಪುಟ್ಟಸ್ವಾಮಿ‌ ತಮ್ಮ ನೌಕರಿಗೆ ರಾಜೀನಾಮೆ ಕೊಟ್ಟಿದ್ದು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಅಖಾಡ ರೆಡಿ ಮಾಡಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಮೈಸೂರಿನ ಐಜಿಪಿ ಕಚೇರಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನ ವಿಭಾಗದಲ್ಲಿ ಸದ್ಯ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಪುಟ್ಟಸ್ವಾಮಿ ಸ್ವಯಂ ನಿವೃತ್ತಿ ತೆಗೆದುಕೊಳ್ಳಲು ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸಂಕ್ರಾಂತಿ ಹಬ್ಬದ ನಂತರ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕುವ ಬಗ್ಗೆ ಮಾತುಗಳು ಕೇಳಿಬಂದಿದೆ.


ಇದನ್ನೂ ಓದಿ: ಜನಸಾಹಿತ್ಯ ಸಮ್ಮೇಳನದ ಪ್ರಮುಖ 9 ನಿರ್ಣಯಗಳು


ಮೈಸೂರು ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ವೃತ್ತಿ ಆರಂಭಿಸಿ ಬಳಿಕ ಪಿಎಸ್ಐ ಹುದ್ದೆಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ರಾಮಾಪುರ, ಕೊಳ್ಳೇಗಾಲ, ಚಾಮರಾಜನಗರದಲ್ಲಿ ಪಿಎಸ್ಐ, ಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದ ಬಿ.ಪುಟ್ಟಸ್ವಾಮಿ‌, ಜನಸ್ನೇಹಿ ಆಡಳಿತದಿಂದ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ.‌ ಅಕ್ರಮ ಮದ್ಯ ಮಾರಾಟದ ವಿರುದ್ಧ ತೆಗೆದುಕೊಂಡ ಕಠಿಣ ಕ್ರಮಗಳಿಂದ ಮಹಿಳಾ ಅಭಿಮಾನಿ ಬಳಗವು ಇವರಿಗೆ ತುಸು ಹೆಚ್ಚಿದ್ದು, ಚುನಾವಣೆಯಲ್ಲಿ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆ ಇದೆ‌.


ಅಭ್ಯರ್ಥಿಗಳ ಹೆಸರು ಬಹಿರಂಗ


ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ವಿಡಿಯೋವೊಂದು Zee Kannada Newsಗೆ ಲಭ್ಯವಾಗಿದ್ದು, ‘ಚಾಮರಾಜನಗರ ಜಿಲ್ಲೆಯ ಅಭ್ಯರ್ಥಿಗಳ ಹೆಸರು ಕ್ಲಿಯರ್ ಆಗಿದೆ, ಕೆಲಸ‌ ಮಾಡಿ‌ ಹೋಗಿ’ ಅವರು ಎಂದು ಹೇಳಿದ್ದಾರೆ. ಹನೂರಿಗೆ ಎಂ.ಆರ್.ಮಂಜುನಾಥ್, ಚಾಮರಾಜನಗರಕ್ಕೆ ಮುಸ್ಲಿಂ ಕೋಟಾದಡಿ ಜೆಡಿಎಸ್ ಮಾಧ್ಯಮ ವಕ್ತಾರ ಸಯ್ಯದ್ ಅಕ್ರಮ್, ಲಿಂಗಾಯತ ಕೋಟಾದಡಿ ಗುಂಡ್ಲುಪೇಟೆ ಕ್ಷೇತ್ರದಿಂದ ಕಡುಬೂರು ಮಂಜುನಾಥ್ ಹಾಗೂ ಕೊಳ್ಳೇಗಾಲಕ್ಕೆ ಬಿ.ಪುಟ್ಟಸ್ವಾಮಿ ಎಂದು ಸಾ.ರಾ.ಮಹೇಶ್ ಹೇಳಿದ್ದಾರೆ.


ಇದನ್ನೂ ಓದಿ: ದಕ್ಷಿಣ ಭಾರತದ ಕುಂಭಮೇಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗಮನ ಸೆಳೆದ ಪುಷ್ಪ ಪ್ರದರ್ಶನ


‘ಎಲ್ಲಾ ಕ್ಲಿಯರ್ ಆಗಿದೆ ಅಂತಾ ಅಣ್ಣಾ ಹೇಳಿದ್ದಾರೆ. ಕೆಲಸ ಮಾಡಲು ಹೋಗಿ ಎಂದು’ ಹನೂರು ಜೆಡಿಎಸ್ ಅಭ್ಯರ್ಥಿ ಮಂಜುನಾಥ್‍ಗೆ ಸಾರಾ ಮಹೇಶ್ ಅವರು  ಮುಖಂಡರ ನಡುವೆಯೇ ಹೇಳಿರುವುದು ಈ ವಿಡಿಯೋದಲ್ಲಿದೆ. ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಜೆಡಿಎಸ್ ರಣಕಣ ಸಿದ್ಧಪಡಿಸಿದ್ದು, ಚುನಾವಣೆ ರಂಗು ಜೋರಾಗಿದೆ. ಇನ್ಸ್‌ಪೆಕ್ಟರ್ ಪುಟ್ಟಸ್ವಾಮಿ ಅವರಿಗೂ ದೊಡ್ಡ ಅಭಿಮಾನಿ ಪಡೆಯೇ ಇದ್ದು, ಕೊಳ್ಳೇಗಾಲದಲ್ಲಿ ಕಾದಾಟ ಜೋರಾಗುವ ಸಾಧ್ಯತೆ ಇದೆ‌.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.