ಹುಟ್ಟೂರು ಬೂಕನಕೆರೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

ಶುಕ್ರವಾರದಂದು ರಾಜಭವನದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಈಗ ಮಂಡ್ಯ ಜಿಲ್ಲೆಯಲ್ಲಿರುವ ತಮ್ಮ ಹುಟ್ಟೂರು ಬೂಕನಕೆರೆಗೆ ಭೇಟಿ ನೀಡಿದ್ದಾರೆ.

Last Updated : Jul 27, 2019, 01:57 PM IST
 ಹುಟ್ಟೂರು ಬೂಕನಕೆರೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ title=
PHOTO:twitter

ಬೆಂಗಳೂರು: ಶುಕ್ರವಾರದಂದು ರಾಜಭವನದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಈಗ ಮಂಡ್ಯ ಜಿಲ್ಲೆಯಲ್ಲಿರುವ ತಮ್ಮ ಹುಟ್ಟೂರು ಬೂಕನಕೆರೆಗೆ ಭೇಟಿ ನೀಡಿದ್ದಾರೆ.

ಮಂಡ್ಯದ ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು 'ಹುಟ್ಟಿ ಬೆಳದಿರುವ ನನ್ನೂರಿಗೆ ಬರುವುದು ಮತ್ತು ಇಲ್ಲಿನ ಅಭಿವೃದ್ದಿ ಬಗ್ಗೆ ಯೋಚಿಸುವುದು ತಮ್ಮ ಕರ್ತವ್ಯ ಆದ್ದರಿಂದ ಇಲ್ಲಿಗೆ ಬಂದಿದ್ದೇನೆ ಎಂದು ಅವರು ಹೇಳಿದರು. ಇನ್ನು ಸಚಿವ ಸಂಪುಟ ರಚನೆ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರ ನೀಡದೆ ಜಾರಿಕೊಂಡರು. ನಂತರ ಬೂಕನ ಕೆರೆಯರುವ ಮನೆ ದೇವರು ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. 

ದೇವಸ್ತಾನಕ್ಕೆ ಭೇಟಿ ನೀಡಿದ ನಂತರ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ' ನನ್ನ ಹುಟ್ಟೂರು ಬೂಕನಕೆರೆಗೆ ಭೇಟಿ ನೀಡಿ ಮನೆ ದೇವರು ಗವಿ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವರ ದರ್ಶನ ಪಡೆಯಲಾಯಿತು. ನಂತರ ನನ್ನ ಮನೆಗೆ ಭೇಟಿ ನೀಡಿದೆ. ಈ ವೇಳೆ ನನ್ನ ಹುಟ್ಟೂರಿನ ಜನತೆಯನ್ನು ಕಂಡು ಸಂತಸವಾಯಿತು' ಎಂದು ಟ್ವೀಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಂಸದ ಬಿ ವೈ. ರಾಘವೇಂದ್ರ, ಶಾಸಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳ ಜೊತೆಗಿದ್ದರು.

Trending News