ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷನ ಹುದ್ದೆಗೆ ಕನ್ನಡಿಗನ ಹೆಸರು ಚಾಲ್ತಿ!

   

Last Updated : Apr 24, 2018, 11:23 PM IST
ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷನ ಹುದ್ದೆಗೆ ಕನ್ನಡಿಗನ ಹೆಸರು ಚಾಲ್ತಿ! title=

ನವದೆಹಲಿ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವವಿರುವ ರಾಜ್ಯಗಳಲ್ಲಿ ಕರ್ನಾಟಕ ಅತಿ ದೊಡ್ಡ ರಾಜ್ಯ, ಆದ್ದರಿಂದ ಕಾಂಗ್ರೆಸ್ ಪಕ್ಷವು ಕೂಡಾ ರಾಷ್ಟ್ರ ಮಟ್ಟದಲ್ಲಿ ಪಕ್ಷಕ್ಕೆ ಯುವಕರನ್ನು ಸೆಳೆಯುವ ನಿಟ್ಟಿನಲ್ಲಿ ಕನ್ನಡಿಗರೊಬ್ಬರಿಗೆ ಮನೆ ಹಾಕಿದೆ. ಈಗ ಅದಕ್ಕೆ ಪೂರಕವಾಗಿ ಈಗಾಗಲೇ ಅವರ ಹೆಸರನ್ನು ಸಂಭವನೀಯರ ಪಟ್ಟಿಯಲ್ಲಿ ಸೇರಿಸಲಾಗಿದೆ.

ಹೌದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೊಮ್ಮೆ ಅಧಿಕಾರದ ಚುಕ್ಕಾಣೆ ಹಿಡಿಯುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ರಾಷ್ಟ್ರಮಟ್ಟದಲ್ಲಿ ಯೂತ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ನಿರ್ವಹಿಸುತ್ತಿರುವ ಕರ್ನಾಟಕದ ಭದ್ರಾವತಿಯವರಾದ ಬಿ.ವಿ.ಶ್ರೀನಿವಾಸ್ ರವರ ಹೆಸರು ಸಂಭವನೀಯರ ಪಟ್ಟಿಯಲ್ಲಿ ಚಾಲ್ತಿಯಲ್ಲಿದೆ. ಕಾಂಗ್ರೆಸ್ ಪಕ್ಷವು ಒಟ್ಟು ಐವರ ಹೆಸರನ್ನು ಈ ಪಟ್ಟಿಯಲ್ಲಿ ಸೇರಿಸಿದೆ, ಅದರಲ್ಲಿ ಶ್ರೀನಿವಾಸ್ ರವರು ಕೂಡ ಒಬ್ಬರು ಎನ್ನುವುದು ಗಮನಾರ್ಹವಾದುದು. 

ಈ ಹಿಂದೆ ಶ್ರೀನಿವಾಸರವರು ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುಜರಾತ್, ಉತ್ತರಪ್ರದೇಶ, ತೆಲಂಗಾಣಗಳ ಉಸ್ತುವಾರಿಯನ್ನು ವಹಿಸಿದ್ದರು. ಇತ್ತೀಚಿಗೆ ನಡೆದ ಗುಜರಾತ್ ಚುನಾವಣೆಯಲ್ಲಿಯೂ ಸಹಿತ ಚುನಾವಣಾ ಉಸ್ತುವಾರಿ ವಹಿಸಿಕೊಂಡು ರಾಹುಲ್ ಗಾಂಧಿಯವರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರೇಮಿಗಳ ದಿನಾಚರಣೆ ದಿನದಂದು ಅಡ್ಡಿಪಡಿಸಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕರವರಿಗೆ ಮಸಿ ಬಳಿದು ಶ್ರೀನಿವಾಸ್  ಸಂಘಟನಾತ್ಮಕವಾಗಿ ಮುನ್ನಲೆಗೆ ಬಂದಿದ್ದರು. 

Trending News