ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಬಹುತೇಕ ಖಚಿತ; ಸಿಎಂ ನಿಂತರೂ ಗೆಲುವು ನಮ್ಮದೇ- ಶ್ರೀನಿವಾಸಪ್ರಸಾದ್

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಬಿ.ವಿ.ವಿಜಯೇಂದ್ರ ಸ್ಪರ್ಧಿಸುವುಡು ಬಹುತೇಕ ಖಚಿತವಾಗಿದೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.

Last Updated : Apr 2, 2018, 03:49 PM IST
ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಬಹುತೇಕ ಖಚಿತ; ಸಿಎಂ ನಿಂತರೂ ಗೆಲುವು ನಮ್ಮದೇ- ಶ್ರೀನಿವಾಸಪ್ರಸಾದ್ title=

ಮೈಸೂರು : ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಬಿ.ವಿ.ವಿಜಯೇಂದ್ರ ಸ್ಪರ್ಧಿಸುವುಡು ಬಹುತೇಕ ಖಚಿತವಾಗಿದೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.

ವರುಣಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್'ಗಾಗಿ 17 ಆಕಾಂಕ್ಷಿಗಳಿದ್ದಾರೆ. ಆದರೆ ಅವರೆಲ್ಲರೂ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮಗ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಒಪ್ಪಿದ್ದಾರೆ. ಹಾಗಾಗಿ ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪರ್ಧಿಸಿದರೂ ಗೆಲುವು ನಮ್ಮದೇ ಎಂದು ಬಿಜೆಪಿ ಹಿರಿಯ ನಾಯಕ ವಿ.ಶ್ರಿನಿವಾಸಪ್ರಸಾದ್ ಹೇಳಿದ್ದಾರೆ.

ಇಂದು ಬೆಳಿಗ್ಗೆ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ವಿ.ಶ್ರೀನಿವಾಸಪ್ರಸಾದ್ ಮನೆಗೆ ಭೇಟಿ ನೀಡಿದ್ದ ವಿಜಯೇಂದ್ರ, ಪ್ರಸಾದ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಅಲ್ಲದೆ, ಚುನಾವಣೆ ಸಂಬಂಧ ಮಾತುಕತೆ ನಡೆಸಿದರು. ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದರು. 

ಈ ಸಂದರ್ಭದಲ್ಲಿ, ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ವರುಣಾ ವಿಧಾನಸಭಾ ಕ್ಷೇತ್ರ ನಂಗೆ ಹೊಸದೇ, ಆದರೆ ಬಿಜೆಪಿಗೆ ಹೊಸದಲ್ಲ. ಯಾರೇ ಅಭ್ಯರ್ಥಿಯಾದರೂ ಬಿಜೆಪಿ ಗೆಲ್ಲಬೇಕು ಎಂಬುದಷ್ಟೇ ನಮ್ಮ ಗುರಿ. ಇನ್ನು, ಟಿಕೆಟ್ ಬಗ್ಗೆ ಪಕ್ಷದ ವರಿಷ್ಟರು ನಿರ್ಧಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಕಳೆದ ಎರಡು ದಿನಗಳಿಂದ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಬೆನ್ನಲೀ, ಬಿಜೆಪಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವರುಣಾ ಕ್ಷೇತ್ರದಲ್ಲಿ ತಮ್ಮ ಮಗ ಬಿ.ವೈ.ವಿಜಯೇಂದ್ರ ಅವರನ್ನು ನಿಲ್ಲಿಸುವುದಾಗಿ ಹೇಳಿದ್ದರು.

Trending News