Pro Pakistan Slogan at College: ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು!

Pro Pakistan Slogan at College: ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ತಮಾಷೆಗಾಗಿ ಪಾಕಿಸ್ತಾನ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳು ಮಾಡಿರುವ ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Written by - Bhavishya Shetty | Last Updated : Nov 19, 2022, 10:08 AM IST
    • ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳು
    • ಮಾರತ್ತಳ್ಳಿಯ ನ್ಯೂ ಹೊರಿಝೋನ್ ಕಾಲೇಜಿನಲ್ಲಿ ಘಟನೆ
    • ವಿದ್ಯಾರ್ಥಿಗಳು ಮಾಡಿರುವ ಎಡವಟ್ಟಿನ ವಿಡಿಯೋ ವೈರಲ್
Pro Pakistan Slogan at College: ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು!  title=
Pro-Pak slogans

Pro Pakistan Slogan at College: ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಈ ಘಟನೆ ಭಾರೀ ಸಂಚಲನ ಮೂಡಿಸಿದೆ. ಮಾರತ್ತಳ್ಳಿಯ ನ್ಯೂ ಹೊರಿಝೋನ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಆ ವಿದ್ಯಾರ್ಥಿಗಳಿಗೆ ಪೊಲೀಸರು ಸ್ಟೇಷನ್ ಬೇಲ್ ಮಂಜೂರು ಮಾಡಿದ್ದಾರೆ.

ಇದನ್ನೂ ಓದಿ: “ಅವರಿಗೆ ಅಪಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಕಲಿ”

ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ತಮಾಷೆಗಾಗಿ ಪಾಕಿಸ್ತಾನ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳು ಮಾಡಿರುವ ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಐಪಿಸಿ 153, 505(1)B ಅಡಿ ಪ್ರಕರಣ ದಾಖಲಿಸಿದ್ದರು. ದಾವಣೆಗೆರೆ ಮೂಲದ ರಿಯಾ (18), ಮುಂಬೈ ಮೂಲದ ಆರ್ಯನ್ (18) ಮತ್ತು ಆಂಧ್ರಪ್ರದೇಶದ ಮೂಲದ ದಿನಕರ್ (17) ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸದ್ಯ ತಾವು ಮಾಡಿರುವ ತಪ್ಪಿಗೆ ಕ್ಷೆಮೆ ಯಾಚಿಸಿದ್ದು, ಇನ್ಮುಂದೆ ಇಂತಹ ತಪ್ಪು ಮಾಡಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಪಾಕ್ ಪರ ಘೋಷಣೆ ಕೂಗಿರುವುದನ್ನು ಬೇರೆ ವಿದ್ಯಾರ್ಥಿಗಳು ವಿಡಿಯೋ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆಗ್ತಿದ್ದ ಬೆನ್ನಲ್ಲೇ ಮೂವರನ್ನೂ ಕಾಲೇಜು ಮಂಡಳಿ ಸಸ್ಪೆಂಡ್ ಮಾಡಿತ್ತು. ನಂತರ ಮಾರತ್ತಹಳ್ಳಿ ಠಾಣೆಗೆ ದೂರು ನೀಡಲಾಗಿದೆ.  

ಕೂಡಲೇ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದ ಮಾರತ್ತಹಳ್ಳಿ ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಉದ್ದೇಶ ಪೂರ್ವಕವಾಗಿ ಪಾಕ್ ಪರ ಘೋಷಣೆ ಕೂಗಿಲ್ಲ ಅನ್ನೋದು ತಿಳಿದುಬಂದಿದೆ. ಕಾಲೇಜು ಫಂಕ್ಷನ್‍ನಲ್ಲಿ ಕ್ರಿಕೆಟ್ ಟೀಂಗಳಿಗೆ ವಿದ್ಯಾರ್ಥಿಗಳು ಜೈಕಾರ ಹಾಕ್ತಿದ್ದರು. ಈ ಸಂದರ್ಭದಲ್ಲಿ ಆರ್ ಸಿಬಿಗೆ ಜೈ, ಮುಂಬೈ ಇಂಡಿಯನ್ಸ್‍ಗೆ ಜೈ, ಇಂಗ್ಲೆಂಡ್‍ಗೆ ಜೈ ಅಂತಾ ಕೂಗಿದ್ದಾರೆ. ಇದೇ ವೇಳೆ ಮೂವರು ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಕಾಲೇಜು ವಿದ್ಯಾರ್ಥಿಗಳು!

ಸದ್ಯ ಎಸಿಪಿ ಕಿಶೋರ್ ಭರಣಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಮೂವರ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿತ್ತು. ತಾವು ತಮಾಷೆಗಾಗಿ ಪಾಕ್ ಪರ ಘೋಷಣೆ ಕೂಗಿದ್ದು ಅಂತಾ ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News