ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಪ್ರಮುಖ ದಾಖಲೆಗಳನ್ನು ಹರಿದು ಹಾಕಿರುವ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್'ಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 


COMMERCIAL BREAK
SCROLL TO CONTINUE READING

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದ ವರದಿ ಆಧರಿಸಿ ಮೂರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದ ನ್ಯಾಯಾಲಯ ಇಂದು(ಮಾರ್ಚ್ 22) ನ್ಯಾಯಾಲಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಇಂದು ಕೋರ್ಟ್ ಮುಂದೆ ಹಾಜರಾದ ಡಿ.ಕೆ. ಶಿವಕುಮಾರ್ ಅವರಿಗೆ 25,000 ಮೊತ್ತದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆ ಆದೇಶಿಸಿರುವ ನ್ಯಾಯಾಧೀಶ ಎಂ.ಎಸ್. ಆಳ್ವಾ, ಸಾಕ್ಷ್ಯ ನಾಶ ಮಾಡಬಾರದು, ಸಾಕ್ಷಿಗಳ ಮೇಲೆ ಒತ್ತಡ ಹೇರಬಾರದು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.


2017ರ ಆಗಸ್ಟ್ 2ರಂದು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದಿದ್ದ ಐಟಿ ದಾಳಿ ವೇಳೆ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಮಹತ್ವದ ದಾಖಲೆಗಳಿರುವ ಪೇಪರ್ ಗಳನ್ನು ಹರಿದುಹಾಕುವ ಮೂಲಕ ಸಾಕ್ಷಿ ನಾಶ ಮಾಡಿದ್ದಾರೆಂದು ಆದಾಯ ತೆರಿಗೆ ಇಲಾಖೆ ದೂರು ದಾಖಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಅರ್ಥಿಕ ಅಪರಾಧಗಳ ನ್ಯಾಯಾಲಯ ಡಿಕೆಶಿ ವಿರುದ್ಧ ಐಪಿಸಿ ಸೆಕ್ಷನ್ 201, 204ರ ಅಡಿ ಸಾಕ್ಷ್ಯನಾಶ ಪ್ರಕರಣ ಹಾಗೂ ಐಟಿ ಕಾಯ್ದೆ 276 ಸಿ1 ಉದ್ದೇಶ ಪೂರ್ವಕ ಆದಾಯ ತೆರಿಗೆ ವಂಚನೆ ಅಡಿಯಲ್ಲಿ ಮೂರು ಪ್ರತ್ಯೇಕ ದೂರುಗಳನ್ನು ದಾಖಲಿಸಿದೆ.