ರಾಜ್ಯದಲ್ಲಿ `ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ`: ಅಧಿವೇಶನದಲ್ಲಿ ಮಂಡನೆ!
`ಗೋಹತ್ಯೆ ನಿಷೇಧ ಕಾಯ್ದೆ` ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು
ಬೆಂಗಳೂರು: ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ 'ಗೋಹತ್ಯೆ ನಿಷೇಧ ಕಾಯ್ದೆ'ಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಸಹ ನಡೆಸಲಾಗಿದ್ದು, ಇದೇ ಡಿಸೆಂಬರ್ 7 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನ(Winter Season)ದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪಕ್ಷ ಸಂಘಟನೆಗೆ ಬಿಜೆಪಿಯಿಂದ 'ಹೊಸ ತಂತ್ರ'! 90 ಸಾವಿರ ಕಾರ್ಯಕರ್ತರಿಗೆ ಅಧಿಕಾರ
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವ ಬೇರೆ ಬೇರೆ ರಾಜ್ಯಗಳಲ್ಲಿ ಅನುಷ್ಠಾನಗೊಂಡ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಹಾಗೂ ಪರಿಣಿತರೊಂದಿಗೆ ಚರ್ಚೆ ಮಾಡಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ ಹೆಚ್ಚು ಬಲವಾಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧವಾಗಲಿದ್ದು, ರಾಜ್ಯದ ಒಳಗೂ ಮತ್ತು ಹೊರಗೂ ಗೋಮಾಂಸ ಆಮದು ಮತ್ತು ರಫ್ತು ಸಂಪೂರ್ಣ ನಿಷೇಧ ಆಗಲಿದೆ.
ಕಾಯ್ದೆ ಜಾರಿಗೆ ಬಂದರೆ ಜಾನುವಾರುಗಳ ವಧೆಗೆ ನಿಷೇಧ, ಗೋಮಾಂಸ ಮಾರಾಟ ಹಾಗೂ ಬಳಕೆಗೆ ನಿಷೇಧ, ವಧೆಗಾಗಿ ರಾಜ್ಯದಲ್ಲಿ ಹಾಗೂ ಹೊರ ರಾಜ್ಯಗಳಿಗೆ ಜಾನುವಾರಗಳ ಅಕ್ರಮ ಸಾಗಾಣಿಕೆ, ವಧೆಗಾಗಿ ಜಾನುವಾರಗಳ ಖರೀದಿ, ಮಾರಾಟ ಅಥವಾ ವಿಲೇವಾರಿಗೆ ಕಡಿವಾಣ ಬೀಳಲಿದೆ.
ಸಿದ್ದರಾಮಯ್ಯಗೆ 'ಭರ್ಜರಿ ಟಾಂಗ್' ನೀಡಿದ ಬಿಜೆಪಿ!
ಈಗಾಗಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅಸ್ಥಿತ್ವಕ್ಕೆ ಬಂದಿದ್ದು, ಅದರ ಅಡಿಯಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯನ್ನು ತಡೆಯಬಹುದಾಗಿದ್ದು. ಗೋ ಹತ್ಯೆ, ಗೋವುಗಳ ಅಕ್ರಮ ಸಾಗಾಟ, ಹಿಂಸೆ ತಡೆಯುವ ಬಗ್ಗೆ ಮಂಡಳಿ ಈಗಾಗಲೇ ಕಾರ್ಯಪ್ರವೃತ್ತವಾಗಿದೆ.
ಅವಳಿ ನಗರಿ ಹುಬ್ಬಳ್ಳಿ-ಧಾರವಾಡದಲ್ಲಿ ಪ್ರತಿಷ್ಠಿತ ಕಂಪನಿಗಳಿಂದ 6 ಸಾವಿರ ಕೋಟಿ ಬಂಡವಾಳ ಹೂಡಿಕೆ!