ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಶಾಂತಿಯುತ ಹಾಗೂ ಮುಕ್ತ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರ್ ಅವರು ತಿಳಿಸಿದ್ದಾರೆ.
ಬಳ್ಳಾರಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಶಾಂತಿಯುತ ಹಾಗೂ ಮುಕ್ತ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರ್ ಅವರು ತಿಳಿಸಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನ, ಮಠ, ಮಂದಿರ, ಜೈನ್ ಬಸದಿಗಳು ಹಾಗೂ ಇವುಗಳ ವ್ಯಾಪ್ತಿಗೆ ಒಳಪಡುವ ಭವನ, ಯಾತ್ರಿ ನಿವಾಸ ಪ್ರದೇಶ, ಕಲ್ಯಾಣ ಮಂಟಪಗಳಲ್ಲಿ ಸಭೆ, ಸಮಾರಂಭ ಅಥವಾ ಇನ್ನೀತರೆ ರಾಜಕೀಯ ಚಟುವಟಿಕೆಗಳ ಆಯೋಜನೆಗೆ ಅನುಮತಿ ಇರುವುದಿಲ್ಲ.
ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?
ನಿಬಂಧನೆಗಳು:
ರಾಜಕೀಯ ಚಟುವಟಿಕೆಗಳಿಗೆ ದೇವಸ್ಥಾನದ ಕೊಠಡಿಗಳು, ಕಲ್ಯಾಣ ಮಂಟಪ, ಸಮುದಾಯದ ಭವನ, ಖಾಲಿ ಜಾಗ, ದೇವಸ್ಥಾನದ ಆವರಣ, ಇತರೆ ಧಾರ್ಮಿಕ ಸ್ಥಳಗಳನ್ನು ನೀಡಲು ಅವಕಾಶ ಇರುವುದಿಲ್ಲ. ದೇವಸ್ಥಾನಗಳಲ್ಲಿ ವ್ಯಕ್ತಿಗಳು ಯಾವುದೇ ಸಮಾರಂಭ, ಸಭೆ, ಇನ್ನಿತರೆ ರಾಜಕೀಯ ಚಟುವಟಿಕೆಗಳು ನಡೆಸುವಂತಿಲ್ಲ.
ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ
ದೇವಸ್ಥಾನ ಆವರಣದಲ್ಲಿ ರಾಜಕೀಯ ವ್ಯಕ್ತಿಗಳಿಂದ ಅನವಶ್ಯಕ ಕಾರ್ಯಕ್ರಮದ ಆಯೋಜನೆಯಲ್ಲಿ ಊಟದ ವ್ಯವಸ್ಥೆ ಮಾಡುವಂತಿಲ್ಲ. ದೇವಸ್ಥಾನ ಧ್ವನಿವರ್ಧಕಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ