ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ.


COMMERCIAL BREAK
SCROLL TO CONTINUE READING

ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು.ಈ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ:Today Vegetable Price : ಹೇಗಿದೆ ಗೊತ್ತಾ ಇಂದಿನ ತರಕಾರಿ ಬೆಲೆ?


ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಸಮಾಲೋಚನೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಾಳೆಯಿಂದಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಆದರೆ, ಈ ನಿಯಮದಿಂದ 18 ವರ್ಷದಿಂದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ವಿನಾಯ್ತಿ ನೀಡಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಇಳಿ ವಯಸ್ಸಿನ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಗ, ತನ್ನವರಿಗಾಗಿ ಕಾಯುತ್ತಿದೆ ಹಿರಿ ಜೀವ


ಹಿಂಬದಿ ಸವಾರರಾಗಿ ಯುವಕರು ದ್ವಿಚಕ್ರ ವಾಹನದಲ್ಲಿ ತೆರಳುವಂತಿಲ್ಲ.ಸದ್ಯಕ್ಕೆ ಒಂದು ವಾರ ಅಥವಾ ಹತ್ತು ದಿವಸ ಈ ನಿಯಮ ಜಾರಿಯಲ್ಲಿರುತ್ತದೆ. ಹಿಂದೆ ಬೇರೆ ರಾಜ್ಯದಲ್ಲಿ ಈ ರೀತಿಯ ನಿಮಯ ಜಾರಿಗೆ ತರಲಾಗಿತ್ತು. ಕೇರಳದ ವಯನಾಡಿನಲ್ಲೂ ಈ ರೀತಿ ನಿಯಮ ತರಲಾಗಿತ್ತು. ಈ ರೀತಿ ಮಾಡುವುದರಿಂದ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಬಹುದು ಎಂದು ಎಡಿಜಿಪಿ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.