ಬೆಂಗಳೂರು: ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಬಕ್ರೀದ್ ಹಬ್ಬ ಆಚರಣೆ/ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಸಾರ್ವಜನಿಕರಲ್ಲಿ ಈ ಮೂಲಕ ತಿಳಿಸುವುದೇನಂದರೇ ರಸ್ತೆಗಳು, ಪಾದಚಾರಿ ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು/ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇದಿಸಲಾಗಿದೆ.


COMMERCIAL BREAK
SCROLL TO CONTINUE READING

•  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020ರ ಪ್ರಕಾರ ಅನಧಿಕೃತವಾಗಿ ಪ್ರಾಣಿವಧೆ ನಿರ್ಭಂಧಿಸಲಾಗಿದೆ ಮತ್ತು ಕಾನೂನು ಉಲ್ಲಂಘಿಸುವವರ ವಿರುದ್ದ ಕ್ರಮ ಜರುಗಿಸಲಾಗುವುದು.


• ಕರ್ನಾಟಕ ರಾಜ್ಯ ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಅಂಥವರಿಗೆ 06 ತಿಂಗಳ ಸಜೆ ಅಥವಾ ದಂಡ ಎರಡೂ ವಿಧಿಸಬಹುದಾಗಿದೆ.


ಇದನ್ನೂ ಓದಿ: CM Siddaramaiah: ಬಡಜನರಿಗೆ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಸಿಎಂ ಸಿದ್ದರಾಮಯ್ಯ


• ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ ಮತ್ತು ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ.


• ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 429ರ ಪ್ರಕಾರ ಯಾವುದೇ ಪ್ರಾಣಿಗಳನ್ನು ಅನಧಿಕೃತವಾಗಿ ಕೊಂದರೆ 05 ವರ್ಷ ಜೈಲು ಶಿಕ್ಷೆ ಇದೆ.


ಇದನ್ನೂ ಓದಿ: Karnataka Government Jobs: ರಾಜ್ಯದಲ್ಲಿ 2.60 ಲಕ್ಷ ಸರಕಾರಿ ಹುದ್ದೆ ಖಾಲಿ- ನೌಕರರ ಸಂಘದ ಅಧ್ಯಕ್ಷ


ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ಯಾವುದೇ ವಯಸ್ಸಿನ ದನ, ಆಕಳು, ಎತ್ತು ಹೋರಿ, ಕರುಗಳನ್ನು ಬಲಿ/ಕುರ್ಬಾನಿ/ವಧೆ ಕೊಡುವುದನ್ನು ನಿಷೇಧಿಸಲಾಗಿದೆ. ಬಲಿ/ ಕುರ್ಬಾನಿ/ ವಧೆಗಾಗಿ ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಹೋರಿ, ಕರುಗಳನ್ನು ಸಾಗಾಟ ಮಾಡುವುದೂ ಸಹ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಲಾಗಿದೆ. ಜೊತೆಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಸಂಖ್ಯೆ 8277100200 ಗೆ ಕರೆ ಮಾಡಿ ದೂರು/ಮಾಹಿತಿ ನೀಡಬಹುದಾಗಿದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ಕೆ.ಪಿ. ರವಿಕುಮಾರ್ ರವರು ತಿಳಿಸಿರುತ್ತಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.