Bandipura Forest: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪರಿಸರವಾದಿಗಳ ಆಕ್ಷೇಪ
Bandipur Tiger Reserve: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಕರ್ನಾಟಕ ಸರ್ಕಾರ ರಾತ್ರಿ ಸಂಚಾರವನ್ನು ನಿಷೇಧಿಸಿದೆ.
Bandipura Forest: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗುವ ಗುಂಡ್ಲುಪೇಟೆ- ವೈನಾಡು ರಸ್ತೆಯಲ್ಲಿ ರಾತ್ರಿ ಸಂಚಾರ ತೆರವಿನ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಪರಿಸರವಾದಿಗಳು ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಮಾತನಾಡಿದ್ದು, ಬಂಡೀಪುರ- ವೈನಾಡು ನಡುವಿನ ರಾತ್ರಿ ಸಂಚಾರ ನಿರ್ಬಂಧ ಇದ್ದು. ಈಗ ಡಿ.ಕೆ.ಶಿವಕುಮಾರ್ ಆ ನಿರ್ಬಂಧವನ್ನು ತೆರವು ಮಾಡುವ ಬಗ್ಗೆ ಮಾತನಾಡಿದ್ದಾರೆ. ಅದು ಸೂಕ್ಷ್ಮ ಪರಿಸರ ವಲಯ ಎಂದು ಅರ್ಥ ಮಾಡಿಕೊಳ್ಳಬೇಕು, ಅರಣ್ಯ ಇಲಾಖೆಯು ಕೇಂದ್ರಕ್ಕೆ ಪತ್ರ ಬರೆದು 24 ಗಂಟೆ ಕೂಡ ಸಂಚಾರ ನಿರ್ಬಂಧಿಸಬೇಕೆಂದು ಹೇಳಿದೆ. ಈ ನಡುವೆ ರಾತ್ರಿ ಸಂಚಾರ ತೆರವಿನ ಬಗ್ಗೆ ಮಾತನಾಡುವುದು ಸರಿಯಲ್ಲʼ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಸುಪ್ರೀಂಕೋರ್ಟ್ ಆದೇಶವಿದ್ದು, ಯಾರೂ ಏನು ಮಾಡಲಾಗಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆ ಕೊಟ್ಟರೂ, ಸರ್ಕಾರ ಪತ್ರ ಬರೆದರೂ ಯಾರೂ ತಲೆ ಕೆಡಿಕೊಳ್ಳಬೇಕಿಲ್ಲ, ಹೆದರಬೇಕಿಲ್ಲ ಎಂದು ಅವರು ಕಿಡಿಕಾರಿದ್ದಾರೆ.
ರಾತ್ರಿ ವಾಹನ ಸಂಚಾರಕ್ಕೆ ಅವಕಾಶ ಭರವಸೆ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇರಳದ ವಯನಾಡಿನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ವಯನಾಡು ಲೋಕಸಭಾ ಉಪ ಚುನಾವಣೆ ಕಾವು ಪಡೆದಿದೆ. ಈ ಚುನಾವಣೆಯಲ್ಲಿ ಕರ್ನಾಟಕ ಮತ್ತು ವಯನಾಡಿನ ಸಂಪರ್ಕಿಸುವ ರಸ್ತೆಗಳ ವಿಷಯವನ್ನ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಒಂದುವೇಳೆ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಗೆದ್ದರೆ ವಯನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ಸರ್ಕಾರದ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದಾರೆ. ಇದರಿಂದ ಬಂಡಿಪುರದಲ್ಲಿ ವನ್ಯ ಜೀವಿಗಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಆತಂಕ ಹೆಚ್ಚಾಗಿದೆ. ಹೀಗಾಗಿ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಜಲಸಂಪನ್ಮೂಲ ಇಲಾಖೆ ರಾಜ್ಯ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ಸಾಧಿಸಿದ ಸುನೀಲ್ ಕುಮಾರ್
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಕರ್ನಾಟಕ ಸರ್ಕಾರ ರಾತ್ರಿ ಸಂಚಾರವನ್ನು ನಿಷೇಧಿಸಿದೆ. ಆದರೆ ಕೇರಳ ಸರ್ಕಾರವು 2009ರಿಂದಲೂ ಈ ಮಾರ್ಗದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಒತ್ತಾಯಿಸುತ್ತಲೇ ಬಂದಿದೆ. ಆದರೆ ವನ್ಯಜೀವಿಗಳ ಸುರಕ್ಷತೆ ಮತ್ತು ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ