ಆಟೋಗೆ ಕಾರ್‌ ಟಚ್ ಆಗಿದ್ದಕ್ಕೆ ಕಾರು ಚಾಲಕನಿಗೆ ಥಳಿಸಿದ ರಿಕ್ಷಾ ಡ್ರೈವರ್‌.. ವಿಡಿಯೋ ವೈರಲ್..!

ಕ್ಷುಲ್ಲಕ ಕಾರಣಕ್ಕೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಇಕೋಸ್ಪೇಸ್ ಸಿಗ್ನಲ್ ಬಳಿ ಕಾರು ಚಾಲಕ ಹಾಗೂ ಆಟೋ ಡ್ರೈವರ್ ನಡುವೆ ರಸ್ತೆಯಲ್ಲೇ ಮಾರಾಮಾರಿ ನಡೆದಿದೆ. ಇಕೋಸ್ಪೇಸ್ ಸಿಗ್ನಲ್ ಬಳಿ ತೆರಳುತ್ತಿದ್ದಾಗ ಆಟೋ ರಿಕ್ಷಾಗೆ ಕಾರು ಟಚ್ ಆಗಿದೆ ಎನ್ನಲಾಗಿದೆ. ಇಷ್ಟಕ್ಕೇ ರೊಚ್ಚಿಗೆದ್ದ ಆಟೋ ಚಾಲಕ ಪಕ್ಕದಲ್ಲಿ ತೆರಳುತ್ತಿದ್ದ ಕಾರು ಚಾಲಕನ ಮೇಲೆ ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. 

Written by - VISHWANATH HARIHARA | Edited by - Krishna N K | Last Updated : Feb 8, 2023, 08:04 PM IST
  • ಕಾರು ಚಾಲಕ ಹಾಗೂ ಆಟೋ ಡ್ರೈವರ್ ನಡುವೆ ರಸ್ತೆಯಲ್ಲೇ ಮಾರಾಮಾರಿ ನಡೆದಿದೆ.
  • ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಇಕೋಸ್ಪೇಸ್ ಸಿಗ್ನಲ್ ಬಳಿ ಘಟನೆ ಜರುಗಿದೆ.
  • ಆಟೋ ರಿಕ್ಷಾಗೆ ಕಾರು ಟಚ್ ಆಗಿದಕ್ಕೆ ಕಾರು ಚಾಲಕನ ಮೇಲೆ ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ.
ಆಟೋಗೆ ಕಾರ್‌ ಟಚ್ ಆಗಿದ್ದಕ್ಕೆ ಕಾರು ಚಾಲಕನಿಗೆ ಥಳಿಸಿದ ರಿಕ್ಷಾ ಡ್ರೈವರ್‌.. ವಿಡಿಯೋ ವೈರಲ್..! title=

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಇಕೋಸ್ಪೇಸ್ ಸಿಗ್ನಲ್ ಬಳಿ ಕಾರು ಚಾಲಕ ಹಾಗೂ ಆಟೋ ಡ್ರೈವರ್ ನಡುವೆ ರಸ್ತೆಯಲ್ಲೇ ಮಾರಾಮಾರಿ ನಡೆದಿದೆ. ಇಕೋಸ್ಪೇಸ್ ಸಿಗ್ನಲ್ ಬಳಿ ತೆರಳುತ್ತಿದ್ದಾಗ ಆಟೋ ರಿಕ್ಷಾಗೆ ಕಾರು ಟಚ್ ಆಗಿದೆ ಎನ್ನಲಾಗಿದೆ. ಇಷ್ಟಕ್ಕೇ ರೊಚ್ಚಿಗೆದ್ದ ಆಟೋ ಚಾಲಕ ಪಕ್ಕದಲ್ಲಿ ತೆರಳುತ್ತಿದ್ದ ಕಾರು ಚಾಲಕನ ಮೇಲೆ ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. 

ಸಾರ್ವಜನಿಕವಾಗಿ ಕಾರು ಚಾಲಕನ ಮೇಲೆ ಆಟೋ ಚಾಲಕ ಹಲ್ಲೆ ಮಾಡುತ್ತಿರುವ ದೃಶ್ಯ ಹಿಂಬದಿಯಲಿದ್ದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಟ್ಯಾಗ್ ಮಾಡಲಾಗಿದೆ‌.

ಇದನ್ನೂ ಓದಿ: ʼಜಾತಿ ಮಾತುಗಳಿಗೆ ಜ‌ನ ಬೆಲೆ ಕೊಡುವುದಿಲ್ಲʼ

ಈ ಟ್ವಿಟ್‌ಗೆ ರಿಟ್ವೀಟ್ ಮಾಡಿರುವ ಪಬೆಳ್ಳಂದೂರು ಪೊಲೀಸರು ಆಟೋದ  ನಂಬರ್ ಪ್ಲೇಟ್ ಅಸ್ಪಷ್ಟವಾಗಿದೆ. ಸದ್ಯ ಕಾರು ಚಾಲಕನ ವಿಳಾಸ ಪತ್ತೆ ಹಚ್ಚಲಾಗಿದೆ. ಆತನ ಹೇಳಿಕೆ ಪಡೆದು ಆಟೋ ಚಾಲಕನ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.ಇತ್ತೀಚೆಗೆ ಬೆಂಗಳೂರಲ್ಲಿ ಹಿಟ್ ಅಂಡ್ ರನ್, ವಾಹನ ಸವಾರರು ಕಿತ್ತಾಡಿಕೊಳ್ಳುವುದು, ಸಂಚಾರ ನಿಯಮ ಉಲ್ಲಂಘಿಸುವುದು ಸಾಮಾನ್ಯವಾಗಿದ್ದು ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News