ಬೆಂಗಳೂರು: ದೋಸ್ತಿ ಸರ್ಕಾರದ ಪತನದ ಹಿನ್ನೆಲೆಯಲ್ಲಿ ಮುಜಾಗ್ರತಾ ಕ್ರಮವಾಗಿ ಬೆಂಗಳೂರು ನಗರಾದ್ಯಂತ ಹೇರಲಾಗಿದ್ದ 2 ದಿನಗಳ ಮದ್ಯ ಮಾರಾಟ ನಿಷೇಧ ಆದೇಶವನ್ನು ಬಹಿಂಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೋಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯ ರಾಜಕೀಯ ಬೆಳವಣಿಗೆಯಿಂದಾಗಿ ಬೆಂಗಳೂರು ನಗರಾದ್ಯಂತ ಮಂಗಳವಾರ ಸಂಜೆ 6 ಗಂಟೆಯಿಂದ ಮತ್ತು ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಅಲ್ಲದೆ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ನಗರಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು.  ಆದರೆ, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದ ಹಿನ್ನೆಲೆಯಲ್ಲಿ ನಗರ ಪೊಲೀಸ್​​ ಆಯುಕ್ತ ಆಲೋಕ್​​ ಕುಮಾರ್​​ ಅವರು ನಿಷೇಧವನ್ನು ಹಿಂಪಡೆದಿದ್ದಾರೆ.


ಆದರೆ, ನಾಳೆ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಪೋಲಿಸ್ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.