ಬೆಂಗಳೂರು: ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಕೋರಿಯರ್ ನಲ್ಲಿ ಬಂದಿದ್ದ ಕೋಟ್ಯಂತರ ರೂ. ಮೌಲ್ಯದ ಹೆರಾಯಿನ್ ಮತ್ತು ಮಾದಕ ದ್ರವ್ಯ(Drugs Seized in Bangalore)ವನ್ನು ವಶಪಡಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ವಿದೇಶದಿಂದ ಕೋರಿಯರ್ ಮೂಲಕ ಬೆಂಗಳೂರಿಗೆ ಬಂದ ಮಾದಕ ದ್ರವ್ಯವನ್ನು ಪತ್ತೆ ಹಚ್ಚುವಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು(Customs Officers) ಯಶಸ್ವಿಯಾಗಿದ್ದಾರೆ. ಬರೋಬ್ಬರಿ 7 ಕೋಟಿ ರೂ. ಮೌಲ್ಯದ ಹೆರಾಯಿನ್ ಹಾಗೂ 2.82 ಕೋಟಿ ರೂ. ಮೌಲ್ಯದ ಎಂಡಿಎಂಎ ಮಾತ್ರೆ(MDMA Drugs)ಗಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.


ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು?: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ


ದೇವನಹಳ್ಳಿಯ ಕೆಂಪೇಗೌಡ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದ ಕೊರಿಯರ್ ಪಾರ್ಸಲ್ ಅನ್ನು ಬೆಂಗಳೂರು ಕಸ್ಟಮ್ಸ್ ನ ಕೇಂದ್ರೀಯ ಗುಪ್ತಚಾರ ಘಟಕದ ಸಿಬ್ಬಂದಿ ತಪಾಸಣೆ ನಡೆಸಿದ್ದು, ಮಾದಕ ದ್ರವ್ಯ(Heroine Drugs)ವನ್ನು ಪತ್ತೆ ಮಾಡಿದ್ದಾರೆ. ಇದರಲ್ಲಿ 7 ಕೋಟಿ ರೂ. ಮೌಲ್ಯದ 1.002 ಕೆಜಿ ಹೆರಾಯಿನ್ ಮತ್ತು 2.82 ಕೋಟಿ ರೂ. ಮೌಲ್ಯದ 4.58 ಕೆಜಿ ಎಂಡಿಎಂಎ ಮಾದಕ ದ್ರವ್ಯ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.


ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.