ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಮುಖ್ಯಮಂತ್ರಿ Siddaramaiah ಅವರು ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಪೂರ್ವ ಸಭೆ ನಡೆಸಿ, ಮಾತನಾಡಿದರು.ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

Written by - Manjunath N | Last Updated : Jan 3, 2024, 04:48 PM IST
  • ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ
  • ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.
  • ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.
ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ title=

ಬೆಂಗಳೂರು: ಮುಖ್ಯಮಂತ್ರಿ Siddaramaiah ಅವರು ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಪೂರ್ವ ಸಭೆ ನಡೆಸಿ, ಮಾತನಾಡಿದರು.ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಸಭೆಯ ಇತರೆ ಅಂಶಗಳು:

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಆಯೋಜಿಸುವ ಕುರಿತು ಸಂಘಟನಾ ಸಮಿತಿಯ ಸಭೆಯನ್ನು ಇಂದು ನಡೆಸಿದ್ದೇನೆ.

ಸಂಘಟನಾ ಸಮಿತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡಿದೆ. ಬೆಲ್ಜಿಯಂನ ಅಂತರರಾಷ್ಟ್ರೀಯ ಚಿತ್ರ ನಿರ್ಮಾಪಕರ ಸಂಘಗಳ ಒಕ್ಕೂಟವಾದ FIAPF ನ ಮಾನ್ಯತೆಯನ್ನು ಪಡೆದುಕೊಂಡಿದೆ.

15ನೇ ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ.

ಪ್ರತಿ ವರ್ಷವೂ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ / ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ.

ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ,

ಮಾರ್ಚ್ 01 ರಿಂದ 07 ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ

ಮಾರ್ಚ್ 07 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ಆಯೋಜಿಸಲಾಗುವುದು.

ಇದನ್ನೂ ಓದಿ : ಅಯೋಧ್ಯೆಯಲ್ಲಿ ನಗರ ಯಾತ್ರೆ ವೇಳೆ ಶ್ರೀರಾಮನ ಕಣ್ಣಿಗೆ ಪಟ್ಟಿ ಕಟ್ಟುವ ಹಿಂದಿನ ಕಾರಣ ಇದು! 

ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು. ಸಮಾರೋಪ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗುವುದು.

ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.

ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ದಿನಾಂಕ : 30.12.2023 ರಂದು ರಚಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ : INDIA Alliance: 9 ರಾಜ್ಯಗಳಲ್ಲಿ ಮೈತ್ರಿ, 290 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧಾರ!? 

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕಮಾಡಲಾಗಿದೆ. ಇದರೊಂದಿಗೆ ಸಂಘಟಕರು / ತಾಂತ್ರಿಕ ಸಲಹೆಗಾರರು / ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News