ಈ ಬಾರಿಯ ಗಣೇಶೋತ್ಸವಕ್ಕೆ ವಿಶ್ವ ದಾಖಲೆ ಬರೆಯಲು ಸಜ್ಜಾದ ಬೆಂಗಳೂರು
ಈ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ ಹತ್ತು ಸಾವಿರ ಗಣೇಶನ ಮೂರ್ತಿ ನಿರ್ಮಿಸಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸಿದ್ಧತೆ ಮಾಡಿಕೊಂಡಿದ್ದು, ಆಗಸ್ಟ್ 28ಕ್ಕೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗಿನ್ನಿಸ್ ದಾಖಲೆಗೆ ವೇದಿಕೆ ಸಜ್ಜಾಗಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಂಗಳೂರು ಗಣೇಶ ಉತ್ಸವ ಸಮಿತಿ ಜಂಟಿಯಾಗಿ ವಿಶ್ವ ದಾಖಲೆ ನಿರ್ಮಿಸಲು ತಯಾರಿ ನಡೆಸಿದೆ.
ಈ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ ಹತ್ತು ಸಾವಿರ ಗಣೇಶನ ಮೂರ್ತಿ ನಿರ್ಮಿಸಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸಿದ್ಧತೆ ಮಾಡಿಕೊಂಡಿದ್ದು, ಆಗಸ್ಟ್ 28ಕ್ಕೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗಿನ್ನಿಸ್ ದಾಖಲೆಗೆ ವೇದಿಕೆ ಸಜ್ಜಾಗಿದೆ.
ಇದನ್ನೂ ಓದಿ- ಎರಡನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ
2019ರಲ್ಲಿ 3 ಸಾವಿರ ಮಣ್ಣಿನ ಗಣಪನ ಮೂರ್ತಿ ತಯಾರಿಸಿ ಗಿನ್ನಿಸ್ ದಾಖಲೆ ಮಾಡಿದ್ದ ಬೆಂಗಳೂರು ಗಣೇಶ ಉತ್ಸವ ಸಮಿತಿ ಇದೀಗ ಈ ಬಾರಿ 10 ಸಾವಿರ ಮಣ್ಣಿನ ಮೂರ್ತಿಗಳನ್ನು ತಯಾರಿಸಲು ಯೋಜನೆ ರೂಪಿಸಿದೆ. ಬೆಂಗಳೂರು ಗಣೇಶೋತ್ಸವ ಸಮಿತಿಯ ಪರಿಸರ ಸ್ನೇಹಿ ಗಣೇಶನ ತಯಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೂಡ ಸಾಥ್ ನೀಡಿದೆ.
ಇದನ್ನೂ ಓದಿ- ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ - ಇಬ್ಬರು ಸಾವು , 15 ಕ್ಕೂ ಹೆಚ್ಚು ಮಂದಿಗೆ ಗಾಯ
ವಿನೂತನ ಮಾದರಿಯಲ್ಲಿ ಮಣ್ಣಿನ ಗಣೇಶ ತಯಾರಿ:-
• ಪ್ರತಿ ಗಣಪತಿಯೂ ಮೂರು ಕೆಜಿ ಮಣ್ಣಿನಿಂದ ತಯಾರಿ
• ಪ್ರತಿ ಗಣಪತಿ ಮೂರ್ತಿಗೂ ಬೀಜಗಳ ಅಳವಡಿಕೆ
• ತುಳಸಿ ಹಾಗೂ ಬಗೆ ಬಗೆಯ ಹೂವುಗಳ ಬೀಜಗಳನ್ನು ಮಣ್ಣಿಗೆ ಮಿಶ್ರಣ
• ಚೌತಿ ಮುಗಿದ ಬಳಿಕ ಮನೆಯಲ್ಲೇ ಸಣ್ಣ ಸಣ್ಣ ಪಾಟ್ ಗಳಲ್ಲಿ ವಿಸರ್ಜನೆ
• ಇದರಿಂದ ಪರಿಸರ ಸ್ನೇಹಿ ಮಣ್ಣಿನ ಗಣಪತಿ ನಿರ್ಮಾಣ
• ಜೊತೆಗೆ ಮನೆಯಲ್ಲೇ ಹೂವು, ಗಿಡಗಳನ್ನು ಬೆಳೆಸಲು ಪ್ರೋತ್ಸಾಹ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.