ಬೆಂಗಳೂರು: ಐಟಿ ಬಿಟಿ ಮೂಲಕ ಜಗದ್ವಿಖ್ಯಾತಿ ಆಗಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರಕಾರವು ಕೊಳ್ಳೆ ಹೊಡೆಯುವ ಎಟಿಎಂ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.


COMMERCIAL BREAK
SCROLL TO CONTINUE READING

ಬೆಂಗಳೂರಿನ ಹೆಬ್ಬಾಳದಲ್ಲಿ ರಾತ್ರಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಕಸ ವಿಲೇವಾರಿಯಲ್ಲಿ ಅಕ್ರಮ, ರಸ್ತೆ ಗುಂಡಿ ಮುಚ್ಚುವುದರಲ್ಲಿ ಅಕ್ರಮ ಸೇರಿದಂತೆ ಎಲ್ಲ ಯೋಜನೆಗಳಲ್ಲಿ ಅಕ್ರಮ ಎಸಗುತ್ತಿದೆ. ಯೋಜನೆಗಳ ಹೆಸರಿನಲ್ಲಿ ಈ ಸರಕಾರ ಕೊಳ್ಳೆ ಹೊಡೆಯುತ್ತಿದೆ ಎಂದು ದೂರಿದರು.


ಬೆಂಗಳೂರು ನಗರ ನೋಡಿದರೆ ಈಗ ಎರಡು ರಾಷ್ಟ್ರೀಯ ಪಕ್ಷಗಳಿಗೆ ದುಡ್ಡು ಮಾಡುವ ಎಟಿಎಂ ಆಗಿದೆ. ಇವರಿಗೆಲ್ಲ ಇಲ್ಲಿ ಒಳ್ಳೆಯ ಆದಾಯ ಬರ್ತಾ ಇದೆ. ಜನರನ್ನು ಲೂಟಿ ಮಾಡುತ್ತಿದ್ದಾರೆ. ವಿಧಾನಸೌಧವು ಇವರ ಕೈಯ್ಯಲ್ಲಿ ಇದೆ, ಬಿಬಿಎಂಪಿ ಕೂಡ ಇವರ ಕೈಯ್ಯಲ್ಲೆಯೇ ಇದೆ. ಹೀಗಾಗಿ ಲೂಟಿ ಮಾಡಲು ಪೊಗದಸ್ತಾದ ಎಟಿಎಂ ಇವರಿಗೆ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಟೀಕಾ ಪ್ರಹಾರ ನಡೆಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.