ಎಕ್ಸ್‌ಪ್ರೆಸ್ ಹೆದ್ದಾರಿಯೋ, ಹೆಮ್ಮಾರಿಯೋ..?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಎಲ್ಲಾ ಬಾಕಿ ಕಾಮಗಾರಿಗಳು ಮುಗಿಯುವ ತನಕ ಟೋಲ್ ಸಂಗ್ರಹ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಅಂಡರ್ ಪಾಸ್ ಗಳಲ್ಲಿ ನೀರು ನಿಲ್ಲದಂತೆ ಮಾಡಬೇಕು ಹಾಗೂ ಇಡೀ ರಸ್ತೆಯ ಕಾಮಗಾರಿಗಳು ಮುಗಿಯುವ ತನಕ ಜನರು ಕೂಡ ಟೋಲ್ ಕಟ್ಟುವ ಅಗತ್ಯ ಇಲ್ಲ ಎಂದಿದ್ದಾರೆ.

Written by - Prashobh Devanahalli | Edited by - Krishna N K | Last Updated : Mar 18, 2023, 09:04 PM IST
  • ಮಳೆಯಲ್ಲಿ ಮತ್ತೆ ಮುಳುಗಿದ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿ.
  • ಎಲ್ಲಾ ಕಾಮಗಾರಿ ಮುಗಿಯುವ ತನಕ ಟೋಲ್ ಕಟ್ಟಬೇಡಿ ಎಂದು ಜನರಿಗೆ ಕರೆ ನೀಡಿದ ಹೆಚ್‌ಡಿಕೆ.
  • ಅಲ್ಲದೆ, ಎಕ್ಸ್‌ಪ್ರೆಸ್ ಹೆದ್ದಾರಿಯೋ, ಹೆಮ್ಮಾರಿಯೋ.. ಎಂದು ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಎಕ್ಸ್‌ಪ್ರೆಸ್ ಹೆದ್ದಾರಿಯೋ, ಹೆಮ್ಮಾರಿಯೋ..?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ title=

ಬೆಂಗಳೂರು: ಇತ್ತೀಚೆಗೆ ಪ್ರಧಾನಮಂತ್ರಿ.ಲೋಕಾರ್ಪಣೆ ಮಾಡಿದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಎಲ್ಲಾ ಬಾಕಿ ಕಾಮಗಾರಿಗಳು ಮುಗಿಯುವ ತನಕ ಟೋಲ್ ಸಂಗ್ರಹ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಜತೆಗೆ, ಅಂಡರ್ ಪಾಸ್ ಗಳಲ್ಲಿ ನೀರು ನಿಲ್ಲದಂತೆ ಮಾಡಬೇಕು ಹಾಗೂ ಇಡೀ ರಸ್ತೆಯ ಕಾಮಗಾರಿಗಳು ಮುಗಿಯುವ ತನಕ ಜನರು ಕೂಡ ಟೋಲ್ ಕಟ್ಟುವ ಅಗತ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿ ಎಕ್ಸ್ ಪ್ರೆಸ್ ಹೆಮ್ಮಾರಿ ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

ಕಳೆದ ವರ್ಷ ಸುರಿದ ಮಹಾಮಳೆಗೆ ಕೊಚ್ಚಿ ಹೋಗಿದ್ದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ, ಬೆಳಗಿನ ಜಾವದ ಸಣ್ಣ ಮಳೆಗೂ ತತ್ತರಿಸಿ ಹೋಗಿದೆ. ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಈ ಎಕ್ಸ್ ಪ್ರೆಸ್ ಹೆಮ್ಮಾರಿ ಈಗ ಜನರ ಪಾಲಿಗೆ ಸಂಕಷ್ಟಗಳ ಸರಮಾಲೆಯನ್ನೇ ಸೃಷ್ಟಿ ಮಾಡುತ್ತಿದೆ. ಇದು ಎಕ್ಸ್ ಪ್ರೆಸ್ ಹೆದ್ದಾರಿಯೋ, ಎಕ್ಸ್ ಪ್ರೆಸ್ ಹೆಮ್ಮಾರಿಯೋ? ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಹೊತ್ತಿ ಉರಿದ ಟಿಶ್ಯೂ ಫ್ಯಾಕ್ಟರಿ : ಬೆಂಕಿ ನಂದಿಸಲು ಹತ್ತು ಗಂಟೆ ಕಾರ್ಯಾಚರಣೆ

ಸಣ್ಣ ಮಳೆಯಿಂದಲೇ ಹೆದ್ದಾರಿಯ ಅಂಡರ್ ಪಾಸ್ ಗಳು ಜಲಾವೃತವಾಗಿವೆ. ವಾಹನಗಳು ಸಿಕ್ಕಸಿಕ್ಕಲ್ಲಿ ನೀರಿನಲ್ಲಿ ಮುಳುಗಿವೆ. ಸರಣಿ ಅಪಘಾತಗಳಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಅವೈಜ್ಞಾನಿಕ ಕಾಮಗಾರಿಯಿಂದಲೇ ಈ ಅವಾಂತರ ಸೃಷ್ಟಿ ಆಗಿದೆ. ಇದಕ್ಕೆ ರಾಜ್ಯ, ಕೇಂದ್ರ ಸರಕಾರಗಳು, ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರೇ ನೇರ ಹೊಣೆ ಎಂದು ಅವರು ಹೇಳಿದ್ದಾರೆ.

ಇವರು ಮಾಡಿದ ಪಾಪಕ್ಕೆ ಜನರು ನೋಯುವಂತಾಗಿದೆ. ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು, ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಬಾಕಿ ಬಿದ್ದಿರುವ ಎಲ್ಲಾ ಕಾಮಗಾರಿಗಳನ್ನು ಕೂಡಲೇ ಮುಗಿಸಬೇಕು. ಅದುವರೆಗೂ ಟೋಲ್ ಸಂಗ್ರಹ ಮಾಡಬಾರದು. ಜನರೂ ಟೋಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಅವರು ಜನರಿಗೆ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News