ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಲು ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗದ ಹೊಸ ರೂಪಾಂತರ ಒಮೀಕ್ರಾನ್ ಹಾವಳಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2022ರ ಜನವರಿ 14ರ ಮಧ್ಯರಾತ್ರಿ 12.00 ಗಂಟೆಯಿಂದ ವಿವಿಧ ನಿಬಂಧನೆಗಳ ಮೇರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿದ್ದಾರೆ.

Written by - Zee Kannada News Desk | Last Updated : Jan 15, 2022, 12:17 AM IST
  • ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶ, ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಿಷೇಧಿಸಲಾಗಿದೆ.
  • ಯಾವುದೇ ಸಾರ್ವಜನಿಕ ಮೈದಾನ, ರೇಸಾರ್ಟ್, ಹೋಟೆಲ್, ಪಾರ್ಟಿ ಹಾಲ್, ಕಲ್ಯಾಣ ಮಂಟಪ ಮತ್ತು ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುಂಪಾಗಿ ಹಬ್ಬಗಳನ್ನು ಆಚರಣೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು,
  • ಈ ಎಲ್ಲಾ ಕಟ್ಟುನಿಟ್ಟಾದ ನಿರ್ಬಂಧಗಳು ಜನರ ಚಲನ-ವಲನಗಳಿಗೆಸಂಬಂಧಿಸಿದವುಗಳಾಗಿದ್ದು, ಅಗತ್ಯ ಸರಕುಗಳಿಗೆ ಸಂಬಂಧಿಸಿರುವುದಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಲು ಜಿಲ್ಲಾಧಿಕಾರಿ ಆದೇಶ title=
file photo

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗದ ಹೊಸ ರೂಪಾಂತರ ಒಮೀಕ್ರಾನ್ ಹಾವಳಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2022ರ ಜನವರಿ 14ರ ಮಧ್ಯರಾತ್ರಿ 12.00 ಗಂಟೆಯಿಂದ ವಿವಿಧ ನಿಬಂಧನೆಗಳ ಮೇರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿದ್ದಾರೆ.

ಇದನ್ನೂ ಓದಿ: ಬಾಲ್ಯವಿವಾಹಕ್ಕೆ ಅವಕಾಶ ನೀಡಿದ ಪೋಷಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಕರ ಸಂಕ್ರಾಂತಿ ಹಬ್ಬದ ಆಚರಣೆಗಳನ್ನು ನಿಷೇಧಿಸಲಾಗಿದೆ ಹಾಗೂ ಮುಂಬರುವ ಯಾವುದೇ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶ, ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಗೆ ಕೊರೊನಾ ಧೃಢ

ಎಲ್ಲಾ ರೀತಿಯ ಸಾಮಾಜಿಕ ರಾಜಕೀಯ, ಕ್ರೀಡೆ, ಮನರಂಜನೆ,  ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ಕಾರ್ಯಕ್ರಮಗಳು ಹಾಗೂ ಗುಂಪು ಸೇರುವುದನ್ನು ನಿರ್ಬಂಧಿಸಿದೆ.ಎಲ್ಲಾ ರೀತಿಯ ಧಾರ್ಮಿಕ ಕಾರ್ಯಗಳನ್ನು ಸಾಂಕೇತಿಕವಾಗಿ ಆಚರಣೆ ಮಾಡಬಹುದಾಗಿದೆ.ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ಪುನೀತ್ ಪೋಟೋ ಹಿಡಿದು ಅಯ್ಯಪ್ಪನ ದರ್ಶನ ಪಡೆದ ಬಾಲಕ..!

ಯಾವುದೇ ಸಾರ್ವಜನಿಕ ಮೈದಾನ, ರೇಸಾರ್ಟ್, ಹೋಟೆಲ್, ಪಾರ್ಟಿ ಹಾಲ್, ಕಲ್ಯಾಣ ಮಂಟಪ ಮತ್ತು ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುಂಪಾಗಿ ಹಬ್ಬಗಳನ್ನು ಆಚರಣೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ಎಲ್ಲಾ ಕಟ್ಟುನಿಟ್ಟಾದ ನಿರ್ಬಂಧಗಳು ಜನರ ಚಲನ-ವಲನಗಳಿಗೆಸಂಬಂಧಿಸಿದವುಗಳಾಗಿದ್ದು, ಅಗತ್ಯ ಸರಕುಗಳಿಗೆ ಸಂಬಂಧಿಸಿರುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

ಯಾವುದೇ ವ್ಯಕ್ತಿ ಈ ಮೇಲಿನ ಕೋವಿಡ್-19ರ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60ರ ಜೊತೆಗೆ, ಭಾರತೀಯ ದಂಡ ಸಂಹಿತೆ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಆದೇಶಿಸಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Trending News