Special train service on May 6 : ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ವೇಳೆ ರಾಜ್ಯದ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ.
ವಿಶೇಷ ರೈಲು ಮೇ 6ರಂದು ರಾತ್ರಿ 9.55ಕ್ಕೆ ಬೆಂಗಳೂರಿನಿಂದ ಹೊರಟು ತುಮಕೂರು- ಅರಸೀಕೆರೆ-ದಾವಣಗೆರೆ- ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ-ಧಾರವಾಡಕ್ಕೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ. ನಂತರ ಇಲ್ಲಿಂದ ಗೋಕಾಕ- ಘಟಪ್ರಭಾ-ರಾಯಭಾಗ- ಕುಡಚಿ ಮಾರ್ಗವಾಗಿ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.
ಇದನ್ನು ಓದಿ : ನಿಸ್ವಾರ್ಥ ತಾಯಂದಿರ ಕಲ್ಪನೆಯನ್ನು ವೈಭವೀಕರಿಸುವ 5 ಭಾರತೀಯ ಸಿನಿಮಾಗಳು !!
ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ವೇಳೆ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಹಾಗೂ ರಾಜ್ಯದ ಗಡಿ ಜಿಲ್ಲೆ ಬೆಳಗಾವಿ ಭಾಗದಲ್ಲಿ ಮತದಾನದ ಹಕ್ಕಿದ್ದು, ಕೆಲಸದ ನಿಮಿತ್ತ ಬೇರೆ ನಗರಗಳಲ್ಲಿ ಇರುವವರಿಗೆ ಪ್ರಯಾಣಿಸಲು ಈ ವಿಶೇಷ ರೈಲು ಸಂಚಾರದಿಂದ ಅನುಕೂಲವಾಗಲಿದೆ.
ಇದನ್ನು ಓದಿ : IPL 2024 : ಆಲೌಟ್ ಆಗಿ RCBಗೆ 148 ಗೆಲುವಿನ ಗುರಿ ನೀಡಿದ ಗುಜರಾತ್ ಟೈಟಾನ್ಸ್
ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಹಾಗೂ ಹೆಚ್ಚಿನ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಈ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದ್ದು, ಜನತೆ ಇದರ ಸದುಪಯೋಗ ಪಡೆದು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದೆ ರೈಲ್ವೆ ಇಲಾಖೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.