ರೈತರಿಗೆ ತೊಂದರೆಯಾಗದಂತೆ ಬ್ಯಾಂಕಗಳು ಸ್ಪಂದಿಸಬೇಕು -ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ.
ಧಾರವಾಡ: ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕರ್ಸ್ ಗಳು ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದ್ದಾರೆ.
ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮತಿ ಸಭೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. ಇದನ್ನು ಬ್ಯಾಕರ್ಸ್ ಗಳು ಪಾಲನೆ ಮಾಡಬೇಕು.ಕೇಂದ್ರ ಸರಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರಕಾರ ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ಬ್ಯಾಂಕಗಳು ನಿಗದಿತ ಗುರಿಗೆ ಅನುಗುಣವಾಗಿ ಸಾಲ ಬಿಡುಗಡೆ ಮಾಡಬೇಕು. ಕಾಲಮಿತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ಸಚಿವರು ತಿಳಿಸಿದರು.
ನಾಳೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ..! ಸೋಮವಾರವೂ ರಜೆ, ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು..?
ಸೂಕ್ಷ್ಮ , ಸಣ್ಣ, ಹಾಗೂ ಮಧ್ಯಮ ಉದ್ಯಮಗಳು ಜೂನ್ 2024 ರ ಅಂತ್ಯಕ್ಕೆ 2357.81 ಕೋ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 3312.98 ಕೋ.ರೂ.ಗಳಷ್ಟು ಸಾಧನೆಯಾಗಿದೆ. ಶೇ.140.51 ರಷ್ಟು ತ್ರೈಮಾಸಿಕ ಗುರಿಗೆ ಶೇಕಡಾವಾರು ಸಾಧನೆಯಾಗಿದೆ.ಇತರೆ ಆಧ್ಯತಾ ವಲಯದಲ್ಲಿ ಜೂನ್ 2024 ರ ಅಂತ್ಯಕ್ಕೆ 180.23 ಕೋಟಿ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 147.8 ಕೋಟಿ.ರೂ. ಗಳಷ್ಟು ಸಾಧನೆಯಾಗಿದೆ. ಮತ್ತು ಶೇ 82.01 ರಷ್ಟು ತ್ರೈಮಾಸಿಕ ಗುರಿಗೆ ಶೇಕಡಾವಾರು ಸಾಧನೆಯಾಗಿದೆ.
ಆಧ್ಯತಾ ರಹಿತಾ ವಲಯದಲ್ಲಿ ಜೂನ್ 2024 ರ ಅಂತ್ಯಕ್ಕೆ 1828.76 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 2701.13 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಶೇ.147.7 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ.ಒಟ್ಟಾರೆಯಾಗಿ ಜೂನ್ 2024 ರ ಅಂತ್ಯಕ್ಕೆ 5593.26 ಕೋಟಿ ರೂ.ಗಳ ಗುರಿಯನ್ನು ಹೊಂದಿದ್ದು, 2024 ರ ಅಂತ್ಯಕ್ಕೆ 7453.82 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ.133.26 ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರ್.ಬಿ.ಐ ಜಿಲ್ಲಾ ಅಗ್ರಣೀಯ ಅಧಿಕಾರಿ ಅರುಣಕುಮಾರ, ಬ್ಯಾಂಕ್ ಆಪ್ ಬರೋಡಾ ದ ಜಿಲ್ಲಾ ಪ್ರಾದೇಶಿಕ ವ್ಯವಸ್ಥಾಪಕ ವಿಜಯ ಪಾಟೀಲ, ನಬಾರ್ಡ್ ಎಜಿಎಮ್ ಮಯೂರ ಕಾಂಬ್ಳೆ ಅವರು ಮಾತನಾಡಿದರು.ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ ಪ್ರಭುದೇವ ಎನ್.ಜಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಇದನ್ನೂ ಓದಿ: Daily GK Quiz: ಭಾರತದ ನೆಪೋಲಿಯನ್ ಎಂದು ಯಾರನ್ನು ಕರೆಯಲಾಗುತ್ತದೆ?
ಸಭೆಯಲ್ಲಿ ವಿವಿಧ ಬ್ಯಾಂಕ್ ಗಳ ಪ್ರಾದೇಶಿಕ ವ್ಯವಸ್ಥಾಪಕರು, ಶಾಖಾ ವ್ಯವಸ್ಥಾಪಕರು, ರೈತ ಪ್ರತಿನಿಧಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.