'ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ'

ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿ.ಎಸ್.ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ.  

Written by - Zee Kannada News Desk | Last Updated : May 7, 2022, 02:21 PM IST
  • ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದೆ ಇದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ.
  • ಯತ್ನಾಳ್ ಅವರು ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ.
  • ಅವರನ್ನು ವಿಚಾರಣೆ ನಡೆಸಿ ಆ ಮಾಹಿತಿಯನ್ನು ಪಡೆದರೆ ತನಿಖೆಯೂ ಸಲೀಸಾಗುತ್ತದೆ, ಸತ್ಯವೂ ಹೊರಬರುತ್ತದೆ.
'ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ'  title=
file photo

ಬೆಂಗಳೂರು: ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿ.ಎಸ್.ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ.ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ.ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದೆ ಇದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ. ಅದರ ನಂತರ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ ಯಾವ ನೈತಿಕತೆ ಇರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: 7th Pay Commission : ಕೇಂದ್ರ ನೌಕರರಿಗೆ ಭರ್ಜರಿ ಸಿಹಿ ಸುದ್ದಿ : ಮತ್ತೆ DA ಹೆಚ್ಚಳಕ್ಕೆ ಮುಂದಾದ ಸರ್ಕಾರ

ಯತ್ನಾಳ್ ಅವರು ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ.ಅವರನ್ನು ವಿಚಾರಣೆ ನಡೆಸಿ ಆ ಮಾಹಿತಿಯನ್ನು ಪಡೆದರೆ ತನಿಖೆಯೂ ಸಲೀಸಾಗುತ್ತದೆ, ಸತ್ಯವೂ ಹೊರಬರುತ್ತದೆ.

ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆಯ್ಕೆ ಮಾಡುತ್ತದೆ ಎಂದು ಜನ ತಿಳಿದುಕೊಂಡಿದ್ದರು.ಇದು ಹರಾಜಿನ ಮೂಲಕ ಮಾರಾಟವಾಗುವ ಪೇಮೆಂಟ್ ಸೀಟು ಎನ್ನುವುದು ಶಾಸಕ ಯತ್ನಾಳ್ ಆರೋಪದಿಂದ ಬಯಲಾಗಿದೆ.ಈ ಸೀಟಿಗಾಗಿ ಹಿಂದಿನ ಮತ್ತು ಈಗಿನ ಮುಖ್ಯಮಂತ್ರಿಗಳು ಎಷ್ಟು ದುಡ್ಡು ಕೊಟ್ಟಿದ್ದಾರೆ ಎನ್ನುವುದೂ ಬಹಿರಂಗವಾಗಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: Universe Boss: ಟಿ-20ಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕ್ರಿಸ್ ಗೇಲ್!

ಈ ಪೇಮೆಂಟ್ ಸೀಟುಗಳು ಕೇವಲ ಮುಖ್ಯಮಂತ್ರಿ ಕುರ್ಚಿಗೆ ಸೀಮಿತವಾಗಿಲ್ಲ, ಸಚಿವ ಸ್ಥಾನಗಳನ್ನೂ ಈ ರೀತಿ ಹರಾಜು ಕೂಗಲಾಗಿದೆ ಎನ್ನುವ ಆರೋಪ ಇದೆ. ಬಿಜೆಪಿಗೆ ಪಕ್ಷಾಂತರ ಮಾಡಿದ ಶಾಸಕರು ಯಾರಿಗೆ ಮತ್ತು ಎಷ್ಟು ದುಡ್ಡು ಸಂದಾಯ ಮಾಡಿದ್ದಾರೆ ಎನ್ನುವುದೂ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿ.ಎಸ್.ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ. ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು.

ಇದನ್ನೂ ಓದಿ: RBI : ಆರ್‌ಬಿಐ ರೆಪೋ ದರ ಶೇ.0.40 ಹೆಚ್ಚಳ : ಈಗ ಹೆಚ್ಚಾಗಲಿದೆ ನಿಮ್ಮ ಸಾಲದ EMI 

ಮುಖ್ಯಮಂತ್ರಿ ಮತ್ತು ಸಚಿವರಾಗಲು ಪೇಮೆಂಟ್ ಮಾಡಿದವರು ಅದರ ವಸೂಲಿಗಾಗಿಯೇ ಈಗ ಕಮಿಷನ್ ದಂಧೆ ಮತ್ತು ಅಕ್ರಮ ವ್ಯವಹಾರಕ್ಕೆ ಇಳಿದಿದ್ದಾರೆ.ಇದರಿಂದ ಒಬ್ಬ ಅಮಾಯಕ ಗುತ್ತಿಗೆದಾರ ಜೀವ ಕಳೆದುಕೊಂಡ, ಸಾವಿರಾರು ಅಮಾಯಕ ಪಿಎಸ್‌ಐ ಹುದ್ದೆ ಆಕಾಂಕ್ಷಿಗಳು ಭವಿಷ್ಯ ಕಳೆದುಕೊಂಡರು.ಬಸವನಗೌಡ ಪಾಟೀಲ್ ಯತ್ನಾಳ್ ಆರೋಪ ಹೊಸದೇನಲ್ಲ.ಕಳೆದ ಎರಡು ವರ್ಷಗಳಿಂದ ಇವರು ತಮ್ಮದೇ ಪಕ್ಷದ ಮುಖ್ಯಮಂತ್ರಿಗಳು, ಸಚಿವರು ಮತ್ತು ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ.ಬಿಜೆಪಿ ಹೈಕಮಾಂಡ್ ಮೌನವಾಗಿರುವುದು ಸಮ್ಮತಿಯ ಸೂಚನೆಯೇ? ಎಂದು ಅವರು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News