ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮೇ 10ರೊಳಗೆ ಸಿಎಂ ಬದಲಾವಣೆ ಆಗಬಹುದು ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಲ ಬಿಜೆಪಿ ನಾಯಕರು ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಾಗಲ್ಲ. ಬಸವರಾಜ್ ಬೊಮ್ಮಾಯಿಯವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಲಿದೆ ಎನ್ನುತ್ತಿದ್ದಾರೆ.
‘ನಾಯಕತ್ವ ಬದಲಾವಣೆಯೇ ಬಿಜೆಪಿಯ ಶಕ್ತಿ, ಹೊಸ ಮುಖಗಳಿಗೆ ಮನ್ನಣೆ ನೀಡಲಾಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ಕೇಸರಿ ಪಾಳಯದಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದ್ಯಾ ಅನ್ನೋ ಪ್ರಶ್ನೆಯನ್ನೂ ಮೂಡಿಸಿತ್ತು. ಇದೇ ವಿಚಾರವಾಗಿ ಮಾತನಾಡಿದ್ದ ಸಿಎಂ ಬೊಮ್ಮಾಯಿ ಅಧಿಕಾರ ಯಾವತ್ತೂ ಶಾಶ್ವತವಲ್ಲ, ಜನರ ಪ್ರೀತಿಯೇ ಶಾಶ್ವತ ಎಂದು ಹೇಳಿದ್ದರು.
ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಅವರ ಮುನ್ಸೂಚನೆ ನಿಜವೇ @BJP4Karnataka?
ನಿಜವಲ್ಲ ಎಂದಾದರೆ, ಇತರ ಪಕ್ಷಗಳ ನಾಯಕರಿಗೆ ನೋಟಿಸ್ ಸಲಹೆ ಕೊಡುವ ತಾವು ಯತ್ನಾಳ್ ಅವರಿಗೆ ನೋಟಿಸ್ ಏಕೆ ನೀಡಿಲ್ಲ?
ಬಿಜೆಪಿ ನಾಯಕತ್ವವಿಲ್ಲದೆ ಒದ್ದಾಡುವ ಸ್ಥಿತಿ ಬಂದಿದೆ, ಅದೆಷ್ಟೇ ಬದಲಾವಣೆಯ ಸರ್ಕಸ್ ಮಾಡಿದರೂ ನಾಯಕತ್ವ ಸೃಷ್ಟಿಸಲು ಸಾಧ್ಯವಿಲ್ಲ.
— Karnataka Congress (@INCKarnataka) May 3, 2022
ಇದನ್ನೂ ಓದಿ: "ಉಪ್ಪು ತಿಂದವನು ಯಾರೇ ಆಗಿದ್ದರೂ ನೀರು ಕುಡಿಯಲಿ": ಸಚಿವ ಅಶ್ವತ್ಥನಾರಾಯಣ
ನಾಯಕತ್ವ ಬದಲಾವಣೆ ವಿಚಾರವಾಗಿಯೇ ಮಂಗಳವಾರ ಮಾತನಾಡಿರುವ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ಬೊಮ್ಮಾಯಿಯವರ ನೇತೃತ್ವದಲ್ಲಿಯೇ ಬಿಜೆಪಿ ಮುಂದಿನ ಚುನಾವಣೆಯನ್ನು ಎದುರಿಸಲಿದೆ. ಸಿಎಂ ಬದಲಾಗುತ್ತಾರೆಂದು ಯಾರು ಕನಸು ಕಾಣಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.
'@AmitShah ಅವರೇ,
ನಿಮ್ಮ ಕರ್ನಾಟಕದ ಭೇಟಿಯ ಅಜೆಂಡಾ ಏನು?PSI ಪರೀಕ್ಷೆ ಅಕ್ರಮವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವುದೇ?
ಬಿಟ್ ಕಾಯಿನ್ ಹಗರಣದ ತನಿಖೆಯನ್ನ ಚುರುಕುಗೊಳಿಸುವುದಕ್ಕಾ?
ಕುಸಿದು ಕುಳಿತಿರುವ ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಸರಿಪಡಿಸುವುದಕ್ಕಾ?
ಅಸಮರ್ಥ ಗೃಹಮಂತ್ರಿಯನ್ನು ಬದಲಿಸುವುದಕ್ಕಾ?
ಅಥವಾ ಸಿಎಂ ಬದಲಾವಣೆಗಾ?
— Karnataka Congress (@INCKarnataka) May 3, 2022
ಯತ್ನಾಳ್ ಸೂಚನೆ ನಿಜವೇ..?
‘ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಅವರ ಮುನ್ಸೂಚನೆ ನಿಜವೇ ಬಿಜೆಪಿ? ನಿಜವಲ್ಲ ಎಂದಾದರೆ, ಇತರ ಪಕ್ಷಗಳ ನಾಯಕರಿಗೆ ನೋಟಿಸ್ ಸಲಹೆ ಕೊಡುವ ತಾವು ಯತ್ನಾಳ್ ಅವರಿಗೆ ನೋಟಿಸ್ ಏಕೆ ನೀಡಿಲ್ಲ? ಬಿಜೆಪಿ ನಾಯಕತ್ವವಿಲ್ಲದೆ ಒದ್ದಾಡುವ ಸ್ಥಿತಿ ಬಂದಿದೆ, ಅದೆಷ್ಟೇ ಬದಲಾವಣೆಯ ಸರ್ಕಸ್ ಮಾಡಿದರೂ ನಾಯಕತ್ವ ಸೃಷ್ಟಿಸಲು ಸಾಧ್ಯವಿಲ್ಲ’ವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇದನ್ನೂ ಓದಿ: ‘ಲೂಟಿಕೊರರು ಬಿಜೆಪಿ ಸರ್ಕಾರದ ಮಂತ್ರಿಗಳಾಗಿರುವಾಗ, ಕಳ್ಳರಾದವರೆಲ್ಲ ಪೊಲೀಸರಾಗುತ್ತಿದ್ದಾರೆ!’
ಕೇಂದ್ರ ಗೃಹಸಚಿವರ ರಾಜ್ಯದ ಭೇಟಿ ಕೆಟ್ಟು ನಿಂತ ಡಬಲ್ ಇಂಜಿನ್ ಸರ್ಕಾರವನ್ನು ತಳ್ಳಿ ಸ್ಟಾರ್ಟ್ ಮಾಡುವುದಕ್ಕಲ್ಲ, ಬದಲಾಗಿ ಜೆ.ಪಿ ನಡ್ಡಾ ಅವರನ್ನು ಸೈಡ್ ಲೈನ್ ಮಾಡುವುದಕ್ಕೆ!
ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಆಗುಹೋಗುಗಳನ್ನು ಚರ್ಚಿಸುವ ಬದಲು ಪಕ್ಷದ ಸಭೆ ಮಾಡುತ್ತಿದ್ದಾರೆ.
ಅವರ ಭೇಟಿಯಿಂದ ರಾಜ್ಯಕ್ಕೆ ನಯಾಪೈಸೆ ಉಪಯೋಗವಿಲ್ಲ.
— Karnataka Congress (@INCKarnataka) May 3, 2022
‘ಅಮಿತ್ ಶಾ ಅವರೇ ನಿಮ್ಮ ಕರ್ನಾಟಕದ ಭೇಟಿಯ ಅಜೆಂಡಾ ಏನು? PSI ಪರೀಕ್ಷೆ ಅಕ್ರಮವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವುದೇ? ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಚುರುಕುಗೊಳಿಸುವುದಕ್ಕಾ? ಕುಸಿದು ಕುಳಿತಿರುವ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವುದಕ್ಕಾ? ಅಸಮರ್ಥ ಗೃಹಮಂತ್ರಿಯನ್ನು ಬದಲಿಸುವುದಕ್ಕಾ? ಅಥವಾ ಸಿಎಂ ಬದಲಾವಣೆಗಾ?’ ಎಂದು ಪ್ರಶ್ನಿಸಿದೆ.
‘ಕೇಂದ್ರ ಗೃಹಸಚಿವರ ರಾಜ್ಯದ ಭೇಟಿ ಕೆಟ್ಟು ನಿಂತ ಡಬಲ್ ಇಂಜಿನ್ ಸರ್ಕಾರವನ್ನು ತಳ್ಳಿ ಸ್ಟಾರ್ಟ್ ಮಾಡುವುದಕ್ಕಲ್ಲ, ಬದಲಾಗಿ ಜೆ.ಪಿ.ನಡ್ಡಾ ಅವರನ್ನು ಸೈಡ್ ಲೈನ್ ಮಾಡುವುದಕ್ಕೆ! ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಆಗುಹೋಗುಗಳನ್ನು ಚರ್ಚಿಸುವ ಬದಲು ಪಕ್ಷದ ಸಭೆ ಮಾಡುತ್ತಿದ್ದಾರೆ. ಅವರ ಭೇಟಿಯಿಂದ ರಾಜ್ಯಕ್ಕೆ ನಯಾಪೈಸೆ ಉಪಯೋಗವಿಲ್ಲ’ವೆಂದು ಕಾಂಗ್ರೆಸ್ ಟೀಕಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.