ಬೆಂಗಳೂರು: ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲವೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸ್ವಪಕ್ಷದ ವಿರುದ್ದ ಸಿಡಿದೆದ್ದಿದ್ದಾರೆ. ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡುವವರೆಗೂ ನಾನು ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲವೆಂದು ಖಡಕ್ ಆಗಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆಯಾಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ಟು ನಮ್ಮ ಭಾಗಕ್ಕೆ ಮೋಸ ಮಾಡಿದ್ದಾರೆ. ನಾವು ಆ ಭಾಗದ ನಾಯಕರಿಗೆ ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗುವುದಿಲ್ಲವೆಂದು ಹೇಳಿದ್ದಾರೆ.   


ಇದನ್ನೂ ಓದಿ: ಹೊಗೆನಕಲ್ ನಲ್ಲಿ ಅಂಬಿಗರ ಮುಷ್ಕರ: ಪ್ರವಾಸಿಗರಿಗಿಲ್ಲ ಪ್ರವೇಶ


ಬಹಳಷ್ಟು ಅನಕೂಲವಿದ್ದವರಿಗೆ ರಾಜ್ಯಾಧ್ಯಕ್ಷ, ವಿಪಕ್ಷದ ನಾಯಕನನ್ನಾಗಿ ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ರಾಜ್ಯಾಧ್ಯಕ್ಷ ಹಾಗೂ ವಿಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ಸ್ಥಾನ ಸಿಗಲೇಬೇಕು. ಇದಕ್ಕಾಗಿ ನಾನು ಯಾರಿಗೂ ಹೆದರಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ ಮತ್ತು ವಿಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ವೆಂದು ಅವರು ಹೇಳಿದ್ದಾರೆ.


ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಉತ್ತರ ಕರ್ನಾಟಕದ ಎಮ್ಎಲ್ಎಗಳು, ಎಂಪಿಗಳು ನಿಮಗೆ ಬೇಕು. ಆದರೆ ರಾಜ್ಯಾಧ್ಯಕ್ಷ, ವಿಪಕ್ಷದ ನಾಯಕ ಹಳೆ ಮೈಸೂರು ಭಾಗದವರಾಗಬೇಕಾ? ರಾಜ್ಯಾಧ್ಯಕ್ಷನಾಗುವುದಕ್ಕೆ ನನಗೆ ಎಲ್ಲಾ ರೀತಿಯ ಅರ್ಹತೆಯಿದೆ ಎಂದು ಯತ್ನಾಳ್ ಗುಡುಗಿದ್ದಾರೆ.


ಇದನ್ನೂ ಓದಿ: ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.