300 ಕೋಟಿ ರೂ. ವಶ: ಕಾಂಗ್ರೆಸ್ ರಾಜಕೀಯದಲ್ಲಿ ಅಧೋಗತಿಗೆ ಇಳಿದಿದೆ ಎಂದ ಯತ್ನಾಳ್
Odisha and Jharkhand IT Raid: ಒಡಿಶಾದ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆ ಮೇರೆಗೆ ಡಿ.6ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ದಾಖಲೆಯಿಲ್ಲದ ಬರೋಬ್ಬರಿ 300 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆಯಾಗಿದೆ.
ಬೆಂಗಳೂರು: ಒಡಿಶಾ ಮತ್ತು ಜಾರ್ಖಂಡ್ನ ರಾಂಚಿಯಲ್ಲಿರುವ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹು ಒಡೆತನದ ಸ್ಥಳಗಳು ಮತ್ತು ಡಿಸ್ಟಿಲರಿಗಳು, ಸಂಬಂಧಿತ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಇದುವರೆಗೆ ಬರೋಬ್ಬರಿ 300 ಕೋಟಿ ರೂ.ಗೂ ಅಧಿಕ ನಗದು ವಶಪಡಿಸಿಕೊಳ್ಳಲಾಗಿದೆ. ಇದೇ ವಿಚಾರವಾಗಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಳ್ ಯತ್ನಾಳ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯತ್ನಾಳ್, ‘ಕಾಂಗ್ರೆಸ್ ಪಕ್ಷದೊಳಗಿನ ಭ್ರಷ್ಟಾಚಾರ ಮಟ್ಟ ಎಲ್ಲೆಯನ್ನು ಮೀರಿದೆ. ಈ ಅಕ್ರಮ ಹಣದ ಮೂಲವೇನು..? ಇಷ್ಟೊಂದು ಪ್ರಮಾಣದ ಹಣವನ್ನು ಧೀರಜ್ ಸಾಹು ಹೇಗೆ ಸಂಗ್ರಹಿಸಿದ್ದ? ಇಂತಹ ಭ್ರಷ್ಟಾಚಾರದಿಂದಾಗಿಯೇ ಕಾಂಗ್ರೆಸ್ ಪಕ್ಷ ರಾಜಕೀಯದಲ್ಲಿ ಅಧೋಗತಿಗೆ ಇಳಿದಿದೆ. ಇಂತಹ ಭ್ರಷ್ಟ ವ್ಯಕ್ತಿಗಳ ವಿರುದ್ಧ ಕಾನೂನಿನಡಿ ಕ್ರಮ ಕೈಗೊಳ್ಳುವ ಮೂಲಕ ಸರಿಯಾಗಿ ಬಿಸಿ ಮುಟ್ಟಿಸಬೇಕು’ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಲೇಸ್ ಪ್ಯಾಕೇಟ್‌ನಲ್ಲಿ ಕೇವಲ ಎರಡೇ ಚಿಪ್ಸ್: ವಿಡಿಯೋ ವೈರಲ್!
‘ಧೀರಜ್ ಸಾಹು ಲಿಂಕ್ ಇರುವ ಬಲದೇವ್ ಸಾಹು ಕಂಪನಿಯ ಬೋಲಂಗಿರ್ ಕಚೇರಿಯಿಂದ 30 ಕಿಮೀ ದೂರದಲ್ಲಿರುವ ಸಾತ್ಪುರ ಕಚೇರಿಯಲ್ಲಿ ಪತ್ತೆಯಾದ 230 ಕೋಟಿ ರೂ.ಗೆ ಸಂಬಂಧಿಸಿದ ವಿಡಿಯೋವನ್ನು ಯತ್ನಾಳ್ ಹಂಚಿಕೊಂಡಿದ್ದಾರೆ.
300 ಕೋಟಿ ರೂ. ನಗದು ಪತ್ತೆ..!
Viral Video: ರಸ್ತೆಯಲ್ಲೇ ಪರಸ್ಪರ ಜುಟ್ಟು ಹಿಡಿದು ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು!
ಮದ್ಯ ತಯಾರಿಕಾ ಕಂಪನಿ ಬಲದೇವ್ ಸಾಹು ಅಂಡ್ ಗ್ರೂಪ್ ಕಂಪನಿಗಳೊಂದಿಗೆ ಸಂಸದ ಧೀರಜ್ ಸಾಹು ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ಐಟಿ ಇಲಾಖೆ 10 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ಪೈಕಿ ಬಲದೇವ್ ಸಾಹು ಕಂಪನಿಯ ಬೋಲಂಗಿರ್ ಕಚೇರಿಯಿಂದ 30 ಕಿಮೀ ದೂರದಲ್ಲಿರುವ ಸಾತ್ಪುರ ಕಚೇರಿಯಲ್ಲಿ 230 ಕೋಟಿ ರೂ. ಪತ್ತೆಯಾದರೆ, ಉಳಿದ ಹಣ ತಿತ್ಲಗಢ, ಸಂಬಲ್ಪುರ್ ಮತ್ತು ರಾಂಚಿಯಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.