ಬೆಂಗಳೂರು : ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2024 ಉದ್ಘಾಟಿಸಿದ ನಂತರ ಮಾತನಾಡಿದರು. ಬಸವಣ್ಣನವರ  ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು. 


COMMERCIAL BREAK
SCROLL TO CONTINUE READING

ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಹಾಗೂ  ಅಕ್ಕಮಹಾದೇವಿ   ಶಿಕಾರಿಪುರದವರಾದ್ದರಿಂದ  ಅವರ ಹೆಸರನ್ನೂ  ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈ  ತೀರ್ಮಾನ ಮಾಡಲಾಗಿದೆ ಎಂದರು.  


ತೋಟಗಾರಿಕೆ ಇಲಾಖೆಯವರು ಬೆಳೆಯುವ ಹೂ, ಹಣ್ಣುಗಳು,ಇಲಾಖೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಇದು.  ಎಂದ ಮುಖ್ಯಮಂತ್ರಿಗಳು ತೋಟಗಾರಿಕೆ ಇಲಾಖೆಗೆ ಧನ್ಯವಾದಗಳನ್ನು ಹೇಳಿದರು.


ಇದನ್ನೂ ಓದಿ: ಜೀವನದಲ್ಲಿ ಮರೆಯಲಾರದ ಕ್ಷಣ ಎನ್ನುತ್ತಿರೋ ಪ್ರಶಾಂತ್


ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಇಂದು ಉದ್ಘಾಟಿಸಲಾಗಿದೆ. ಬಸವಾದಿ ಶರಣರ ವಚನ ಸಾಹಿತ್ಯ ಆಧಾರಿತವಾದ ಫಲಪುಷ್ಪ ಪ್ರದರ್ಶನ ಈ ಬಾರಿಯ ವಿಶೇಷತೆ. ಹನ್ನರಡನೆಯ ಶತಮಾನದಲ್ಲಿ ಜಾತಿರಹಿತ ಹಾಗೂ ಮೂಡನಂಬಿಕೆ ಕಂದಾಚಾರಗಳಿಂದ ಮುಖ್ತವಾದ ಸಮ ಸಮಾಜ  ನಿರ್ಮಾಣ  ಮಾಡಲು ಹೋರಾಟ ನಡೆಸಲಾಗಿತ್ತು ಎಂದರು. 


ಈ ವಚನ ಚಳವಳಿಯ ಬಗ್ಗೆ ಜನರಿಗೆ ಪ್ರಚುರಪಡಿಸಲು ಉದ್ದೇಶದಿಂದ ಈ ಬಾರಿಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹಲವಾರು ಬಗೆಯ ಫಲಪುಷ್ಪಗಳ ಮೂಲಕ ಬಸವಾದಿ ಶರಣರ ಸಂದೇಶಗಳನ್ನು ಪ್ರಚುರಪಡಿಸಲಾಗುತ್ತಿದೆ. ಇಂದಿನಿಂದ 28 ನೇ ಜನವರಿ ವರೆಗೆ ಪ್ರದರ್ಶನ ನಡೆಯಲಿದ್ದು, ತೋಟಗಾರಿಕೆ ಇಲಾಖೆ ಮಾಡಿಕೊಟ್ಟಿರುವ ಈ ಅವಕಾಶವನ್ನು ಬೆಂಗಳೂರಿನ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯವರಿಂದ ವಿವಿಧ ಫಲ ಪುಷ್ಪಗಳನ್ನು ಬೆಳೆಯಲಾಗುತ್ತದೆ ಎಂಬ ವಿಸ್ತೃತ ಮಾಹಿತಿಯನ್ನು ಜನರು ಪಡೆಯಬಹುದಾಗಿದೆ ಎಂದರು.


ಇದನ್ನೂ ಓದಿ: ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.