ಬೆಂಗಳೂರು: ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಘೋಷಿಸಿದೆ.
ಈ ಕುರಿತಾಗಿ ತಿಳಿಸಿರುವ ಸಿಎಂ ಸಿದ್ದರಾಮಯ್ಯ "ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ.ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟುಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ ಎಂದು ತಿಳಿಸಿದ್ದಾರೆ.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ.ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದು ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕಡೆಗಣಿಸು, ನಿರ್ಲಕ್ಷಿಸು, ನಿದ್ರಿಸು, ಮತ್ತದನ್ನೇ ಪುನರಾವರ್ತಿಸು; ಇದುವೇ ಪ್ರಧಾನಿ ಮೋದಿ ಮಂತ್ರ!
ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನ ವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಹೇಳಿದರು.
ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟುಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು… pic.twitter.com/eMPDbgtszi
— Siddaramaiah (@siddaramaiah) January 18, 2024
ಭಾರತದ ಇತಿಹಾಸದಲ್ಲಿ ಹನ್ನೆರಡನೆ ಶತಮಾನ ಅತ್ಯಂತ ಮಹತ್ವಪೂರ್ಣವಾದುದು. ಅಜ್ಞಾನ, ಜಾತೀಯತೆ,ಮತಾಂಧತೆ,ಶೋಷಣೆ, ಮೌಡ್ಯಗಳಿಂದ ಮುಳುಗಿಹೋಗಿದ್ದ ಸಮಾಜವನ್ನು ಮೇಲೆತ್ತಲು ಅರಸ ಬಿಜ್ಜಳನಿಗೆ ಹಣಕಾಸು ಸಚಿವರಾಗಿದ್ದ ಬಸವಣ್ಣನವರು, ರಾಜಿ ಇಲ್ಲದ ಬದ್ಧತೆ, ಪ್ರಶ್ನಾತೀತವಾದ ಜನಪರ ಕಾಳಜಿ ಮೂಲಕ ಮಾಡಿದ ಪ್ರಯತ್ನ-ಪ್ರಯೋಗಗಳು ಪ್ರಪಂಚದ ಎಲ್ಲ ಆಡಳಿತಗಾರರ ಆದರ್ಶವೆಂದು ನಾನು ನಂಬಿದ್ದೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ರವಿ ಬಸ್ರೂರು ನಿರ್ದೇಶನದ ಕಡಲ್ ಸಿನಿಮಾ ಜ.೧೯ಕ್ಕೆ ಬಿಡುಗಡೆ
ಕಾಯಕ ಮತ್ತು ದಾಸೋಹ ನನ್ನ ಇಷ್ಟದ ಬಸವಣ್ಣನನವರ ತತ್ವದ ಮೂಲಧಾತುಗಳು. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಸಂಪತ್ತಿನ ಉತ್ಪಾದನೆಯ ಶಕ್ತಿ ಎಲ್ಲರದ್ದಾಗಬೇಕು, ಅದರ ವಿತರಣೆ ಸಮನಾಗಿ ನಡೆಯಬೇಕು ಎಂದು ಬಸವಣ್ಣನವರ ಆಶಯವಾಗಿತ್ತು. ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಇಷ್ಟೊಂದು ಸರಳವಾಗಿ ವಿಶ್ಲೇಷಿಸುವುದು ಸಾಧ್ಯ ಇಲ್ಲ ಎಂದು ಹೇಳಿದರು.
ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.