ಪಟಾಕಿ ದುರಂತ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

Basavaraj Bommai : ಅತ್ತಿಬೆಲೆ ಪಟಾಕಿ ದುರಂತ ಬಹಳ ದೊಡ್ಡ ಘೋರ 14 ಜನ ಮೃತಪಟ್ಟಿದ್ದಾರೆ, ಇದು ಆಘಾತಕಾರಿ ವಿಚಾರ ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಲಿ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಲಿ.  ಹಾವೇರಿಯಲ್ಲೂ ಪಟಾಕಿ ದುರಂತ ಆಗಿತ್ತು ಕಾನೂನಿನಲ್ಲಿ ಪಟಾಕಿಗಳ ಇಷ್ಟೊಂದು ಪ್ರಮಾಣದ ಶೇಖರಣೆಗೆ ಅವಕಾಶ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   

Written by - Prashobh Devanahalli | Last Updated : Oct 8, 2023, 12:48 PM IST
ಪಟಾಕಿ ದುರಂತ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ   title=

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತಕ್ಕೆ ಸ್ಥಳೀಯ‌ ಜಿಲ್ಲಾಡಳಿತದ ನಿರ್ಲಕ್ಷ್ಯ ಕಾರಣ. ಹಣಕಾಸು ವ್ಯವಹಾರ ಮಾಡಿಕೊಂಡು ಅಕ್ರಮವಾಗಿ ಲೈಸೆನ್ಸ್ ಕೊಡುವುದು, ಅಕ್ರಮ ಶೇಖರಣೆಗೆ ಅವಕಾಶ ಮಾಡಿಕೊಟ್ಟಿರುವುದರಿಂದ ಇಷ್ಟು ದೊಡ್ಡ ದುರಂತ ಆಗಿದೆ. ತಪ್ಪಿತಸ್ಥ ಅಧಿಕಾರಗಳ ಮೇಲೆ ಕ್ರಮ ಕೈಗೊಂಡರೆ ಅನಾಹುತಗಳು ತಪ್ಪಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಟಾಕಿ ನಿರ್ವಹಣೆಯ ನಿಯಮಗಳ ಪಾಲನೆ ಆಗುತ್ತಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ. ಇಷ್ಟು ದೊಡ್ಡ ದುರಂತ ಆಗಿದ್ದು, ಸರ್ಕಾರ ಕಣ್ತೆರೆಯದಿದ್ದರೆ ಇನ್ನಷ್ಟು ದುರಂತಗಳು ನಡೆಯಲಿವೆ ಎಂದರು. 

ಅತ್ತಿಬೆಲೆ ಪಟಾಕಿ ದುರಂತ ಬಹಳ ದೊಡ್ಡ ಘೋರ 14 ಜನ ಮೃತಪಟ್ಟಿದ್ದಾರೆ, ಇದು ಆಘಾತಕಾರಿ ವಿಚಾರ ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಲಿ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಲಿ.  ಹಾವೇರಿಯಲ್ಲೂ ಪಟಾಕಿ ದುರಂತ ಆಗಿತ್ತು ಕಾನೂನಿನಲ್ಲಿ ಪಟಾಕಿಗಳ ಇಷ್ಟೊಂದು ಪ್ರಮಾಣದ ಶೇಖರಣೆಗೆ ಅವಕಾಶ ಇಲ್ಲ ಎಂದರು.  

ಇದನ್ನೂ ಓದಿ: Murder Case: ವ್ಯಕ್ತಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿ ಕೃಷ್ಣಾ ನದಿಗೆ ಹಾಕಿದ ಹಂತಕರು! 

ಈ‌ ಒಂದೂವರೆ ತಿಂಗಳಲ್ಲಿ ಎರಡನೇ ಪಟಾಕಿ ದುರಂತ ನಡೆದಿದೆ. ಈ ಮೊದಲು ಹಾವೇರಿಯಲ್ಲಿ ದುರಂತ ನಡೆದು ನಾಲ್ಕು ಜನ ಮೃತಪಟ್ಟಿದ್ದರು. ಈಗ ಅತ್ತಿಬೆಲೆಯಲ್ಲಿ 14 ಜನ ಮೃತಪಟ್ಟಿದ್ದಾರೆ. ಅಂದರೆ, ನಿಯಮಗಳ ಪಾಲನೆ ಆಗುತ್ತಿಲ್ಲ ಅಂತ ಇದರಿಂದ ಗೊತ್ತಾಗುತ್ತದೆ ಎಂದರು. 

ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ ಮೊದಲು ತಪ್ಪು ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಂಡರೆ ಇಂಥ ಘಟನೆಗಳು ನಿಲ್ಲುತ್ತವೆ ಎಂದರು. 

ಒಟ್ಟಿಗೆ ಪ್ರವಾಸ ಬಿಜೆಪಿ ನಾಯಕರ ಪ್ರವಾಸ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷರು, ನಾವು ಎಲ್ಲ ಕೂತು ಚರ್ಚೆ ಮಾಡುತ್ತೇವೆ ಎಲ್ಲರೂ ಚರ್ಚಿಸಿ ಪ್ರವಾಸದ ರೂಪರೇಷೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಲ್ಲರೂ ಒಟ್ಟಾಗಿ ಪ್ರವಾಸ ಮಾಡುತ್ತೇವೆ ಎಂದರು. 

ಶಾಂತಿ ನೆಲೆಸಲಿ ಇಸ್ರೇಲ್ ಮೇಲಿನ ದಾಳಿ  ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇಸ್ರೇಲ್ ಮೇಲೆ ಹಮಾಸ್ ದಾಳಿ ಇತ್ತೀಚಿನ ವರ್ಷಗಳಲ್ಲಿ ಕೇಂದ್ರ, ಮಧ್ಯ ಏಷ್ಯಾ ರಾಷ್ಟ್ರಗಳ ನಡುವೆ ಶಾಂತಿ ಸ್ಥಾಪನೆಗೆ ಭಂಗ ತಂದಿದೆ. ಇಸ್ರೇಲ್ ಮೇಲೆ ಹಮಾಸ್ ದಾಳಿ ಮಾಡಿರುವುದು ಅತ್ಯಂತ ಖಂಡನೀಯ ಎಂದರು.

ಈಗ ಇಸ್ರೇಲ್ ಪ್ರತಿದಾಳಿ ಮಾಡುತ್ತಿದೆ.‌ಮಧ್ಯ ಏಷ್ಯಾದಲ್ಲಿ ಶಾಂತಿ ನೆಲೆಸಬೇಕಿರುವುದು ಬಹಳ ಮುಖ್ಯ ಇಸ್ರೇಲ್, ಮಧ್ಯ ಏಷ್ಯಾ ರಾಷ್ಟ್ರಗಳಲ್ಲಿ ಲಕ್ಷಾಂತರ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಅವರಿಗೂ ಈ ದಾಳಿ ಆತಂಕ ಹುಟ್ಟಿಸಿದೆ, ತೊಂದರೆ ಆಗಿದೆ. ಈ ದಾಳಿಯನ್ನು ಇಡೀ ವಿಶ್ವವೇ ಗಂಭೀರವಾಗಿ ತೆಗೆದುಕೊಳ್ಳಬೇಕು. ದಾಳಿಗೆ ಕಾರಣ ಆಗಿರುವವರ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರಮ ತೆಗೆದುಕೊಳ್ಳಬೇಕು. ಶಾಂತಿ ನೆಲೆಸಬೇಕು, ಯುದ್ಧ ನಿಲ್ಲಬೇಕು ಭಾರತದ ನಿಲುವನ್ನು ನಮ್ಮ ಪ್ರಧಾನಿ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಜತೆ ನಿಲ್ಲುದಾಗಿ ಪ್ರಧಾನಿ ಘೋಷಿಸಿದ್ದಾರೆ. ಇದು ಒಂದು ಒಳ್ಳೆಯ ನಿರ್ಧಾರ ಎಂದು ಹೇಳಿದರು. 

ಇದನ್ನೂ ಓದಿ: ಹೈಪೋಥೈರಾಯ್ಸ್‌ನಿಂದ ಹೆಚ್ಚಾದ ತೂಕವನ್ನು ಕಡಿಮೆ ಮಾಡುವುದು ಹೇಗೆ..? 

ಎಲ್ಲರಿಗೂ ಅನುದಾನ ನೀಡಲಿ ರಾಜರಾಜೇಶ್ವರಿ ವಲಯದ ಒಂಭತ್ತು ವಾರ್ಡ್ ಗಳಿಗೆ ಅನುದಾನ ನೀಡದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಇದ್ದಾಗ ನಾವು ಯಾವುದೇ ಭೇದಭಾವ ಮಾಡಿರಲಿಲ್ಲ. ಸೀನಿಯಾರಿಟಿ ಮೇಲೆ ಅನುದಾನ ಕೊಟ್ಟಿದ್ದೇವು. ಈಗ ಸಿನಿಯಾರಿಟಿ ಇಲ್ಲ. ಈಗಾಗಲೇ ಪಾಲಿಕೆ ವಾರ್ಡ್ ಗಳಿಗೆ ಅನುದಾನ ಕೊಡದೇ ನಿಲ್ಲಿಸಿದ್ದಾರೆ. ಈಗ ಅದರ ಮೇಲೆ ತಾರತಮ್ಯ ಮಾಡುತ್ತಿದ್ದಾರೆ. ತಾರತಮ್ಯ ಮಾಡದೇ ಸರ್ಕಾರ ಕೂಡಲೇ ಅನುದಾನ ಕೊಡಲಿ..ಬೇರೆ ವಾರ್ಡ್ ಗಳಿಗೆ ಅನುದಾನ ಕೊಟ್ಟು ರಾಜರಾಜೇಶ್ವರಿ ವಲಯಕ್ಕೆ ಕೊಟ್ಟಿಲ್ಲ ಅಂದರೆ ಅದು ರಾಜಕೀಯವೇ ಎಂದು ಹೇಳಿದರು.

ಬೆಂಗಳೂರಿನಲ್ಲಿ ಟನೆಲ್ ರಸ್ತೆಗಳ ನಿರ್ಮಾಣ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಟನೆಲ್ ರಸ್ತೆ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ತರಾತುರಿಯಲ್ಲಿ ಮಾಡುತ್ತಿದೆ. ಈಗಾಗಲೇ ನಗರದ ಸಂಚಾರ ವ್ಯವಸ್ಥೆ ಬಹಳ ಹದಗೆಟ್ಟಿದೆ. ಈಗ ಏಳೆಂಟು ರಸ್ತೆಗಳನ್ನು ಅಗೆದು ಸಂಚಾರ ಸಂಪೂರ್ಣ ನಿಲ್ಲಿಸಿದರೆ ಕಷ್ಟ ಪರ್ಯಾಯ ಪರಿಹಾರ ಕಂಡುಕೊಂಡು ಕೆಲಸ ಮಾಡಲಿ ವೈಟ್ ಟ್ಯಾಪಿಂಗ್ ಮಾಡುವುದಕ್ಕಾಗಿ ವರ್ಷಗಟ್ಟಲೆ ಸಮಯ ಹಿಡೀತು, ಆಗ ಸಮಸ್ಯೆ ಆಯಿತು. ಈಗ ಟನೆಲ್ ರಸ್ತೆಗಳ ವಿಚಾರದಲ್ಲಿ ಪೂರ್ವ ಸಿದ್ಧತೆ ಮಾಡಿಕೊಂಡು ಮಾಡಿದರೆ ಉತ್ತಮ ಎಂದು ಸಲಹೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News