Congress and Pakistan Zindabad : ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾರೆ. ಇದು  ಪಾಕಿಸ್ತಾನ ಬೆಂಬಲಿಗರಿಗೆ ಕಾಂಗ್ರೆಸ್ ಪಕ್ಷದ ಸಹಾಯ, ಬೆಂಬಲ‌ ಇದೆ ಎಂಬುದನ್ನು ತೋರಿಸುತ್ತದೆ.


ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ, ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ‌ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ 
ಮಾಡಿ.