ಹತ್ತು ವರ್ಷದ ಹಗರಣಗಳ ತನಿಖೆ‌ ನಡೆಸಿ : ಬಸವರಾಜ ಬೊಮ್ಮಾಯಿ ಆಗ್ರಹ

Karnataka Assembly Session: ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಬೇಕೆಂದರೆ 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.   

Written by - Prashobh Devanahalli | Last Updated : Jul 10, 2023, 09:23 PM IST
  • ಹತ್ತು ವರ್ಷದ ಹಗರಣಗಳ ತನಿಖೆ‌ ನಡೆಸಿ
  • 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ಆಗಲಿ
  • ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹ
ಹತ್ತು ವರ್ಷದ ಹಗರಣಗಳ ತನಿಖೆ‌ ನಡೆಸಿ : ಬಸವರಾಜ ಬೊಮ್ಮಾಯಿ ಆಗ್ರಹ  title=

ಬೆಂಗಳೂರು: ವರ್ಗಾವಣೆಗೆ ಶಾಸಕರ ಭವನ, ಕುಮಾರಕೃಪಾ ಸುತ್ತಮುತ್ತ ಜನಜಂಗುಳಿ, ಹಪ್ತಾ ವಸೂಲಿಗೆ ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿ ಕಾನ್‌ಸ್ಟೇಬಲ್‌ ಆತ್ಮಹತ್ಯೆಗೆ ಯತ್ನ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಚ್ಚಿಟ್ಟ ಪರಿ ಇದು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ‌  ಲೋಕಾಯುಕ್ತ ಇರುವಾಗ ಅದನ್ನು ನಿಷ್ಕ್ರೀಯಗೊಳಿಸಿ ಎಸಿಬಿ ರಚನೆ ಮಾಡಿದ್ದರು. ಭ್ರಷ್ಟಾಚಾರದಿಂದ ರಕ್ಷಣೆ ಪಡೆಯಲು ಎಸಿಬಿ ರಚನೆ ಮಾಡಿದ್ದರು ಅಂತ ಕೋರ್ಟ್ ಆದೇಶದಲ್ಲಿಯೇ ಇದೆ ಎಂದು ಹೇಳಿದರು. 

ಭ್ರಷ್ಟಾಚಾರ ನಿಯಂತ್ರಣ ಮಾಡಲು 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ, ಈ ಸಮಯದಲ್ಲಿ ನಡೆದ‌ ಹಗರಣಗಳ ಬಗ್ಗೆ ಯಾರೇ ದೂರು ಕೊಟ್ಟರೂ ತನಿಖೆ ನಡೆಸಿ. ಹಲವಾರು ಸಂದರ್ಭದಲ್ಲಿ ನ್ಯಾಯಾಂಗ ಆಯೋಗದ ತನಿಖೆಗಳನ್ನು ನೋಡಿದ್ದೇವೆ. ಮುಕ್ತವಾದ ಸತ್ಯ ಹೊರಬೇಕೆಂದರೆ ನಮ್ಮ ಕಾಲದ ನಿಮ್ಮ ಕಾಲದ ಎರಡೂ ಹಗರಣ ಹೊರ ಬರಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರದ ಮಧ್ಯೆ ‘ಅನ್ನಭಾಗ್ಯ’ ಯೋಜನೆ ಜಾರಿ: ಕಾಂಗ್ರೆಸ್

ಅಧಿಕಾರಿಗಳ‌ ಮೇಲೆ, ಕಾನ್‌ಸ್ಟೇಬಲ್‌ಗಳ ಮೇಲೆ  ಒತ್ತಡ ಹೇರಿ ಹಪ್ತಾ ವಸೂಲಿ ಮಾಡಲಾಗುತ್ತಿದೆ. ಬೀದರ್ ನಲ್ಲಿ ಒಬ್ಬ ಏಜೆಂಟ್ ಹಪ್ತಾ ವಸೂಲಿ ಮಾಡಲಿಕ್ಕೆ ಇಟ್ಟುಕೊಂಡಿದ್ದಾರೆ. ಅವನು ಹಪ್ತಾ ವಸೂಲಿ ಮಾಡಿದರೂ, ಮತ್ತೆ ಬೇರೊಬ್ಬರು ಗಾಡಿ ನಿಲ್ಲಿಸಿ ಹಪ್ತಾ ವಸೂಲಿ ಮಾಡುವಂತೆ ಕೊರವಿ ಎನ್ನುವ ಇನ್ಸ್ ಪೆಕ್ಟರ್ ಒತ್ತಡ ಹೇರಿದ್ದಾರೆ ಅಂತ ದೂರು ದಾಖಲಿಸಿದ್ದಾರೆ. ಎಫ್ ಐ ಆರ್‌ ಕೂಡ ಆಗಿದೆ ಎಂದು ಸದಸನದ ಗಮನಸೆಳೆದರು.
 
ಕಲಬುರಗಿಯಲ್ಲಿ ಹಿರಿಯ ಅಧಿಕಾರಿಗಳು ಹಪ್ತಾ ವಸೂಲಿ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಕಾನ್ ಸ್ಟೇಬಲ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವ ಅಧಿಕಾರಿ ಒತ್ತಡ ಹೇರಿದ್ದರು ಅಂತ ಅವರ ಹೆಸರು ಕೂಡ ಪೇದೆ ಹೇಳಿದ್ದಾರೆ. ಅವರ ಮೇಲೆ ಒತ್ತಡ ತಂದು ಹೇಳಿಕೆ ತಿರುಚುವ ಪ್ರಯತ್ನ ಕೂಡ ಮಾಡಲಾಗಿದೆ ಎಂದು ಆರೋಪಿಸಿದರು.  
 
ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಶಾಸಕರ ಭವನ, ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಜನ ತುಂಬಿಕೊಂಡಿದ್ದಾರೆ. ಇವರಿಂದ ಸ್ವಚ್ಚ ಆಡಳಿತ ನಿರೀಕ್ಷಿಸಲಾಗುತ್ತಾ. ವಿಧಾನಸೌಧದ ಸುತ್ತ ಜನವೋ ಜನ ತುಂಬಿ ತುಳುಕುತ್ತಿದೆ. ಎಲ್ಲರೂ ಫುಲ್ ಬಿಜಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪೌರ ಕಾರ್ಮಿಕರನ್ನು ಕಾಯಂ ಮಾಡುವ ಕೆಲಸ ನಮ್ಮ ಅವಧಿಯಲ್ಲಿ ಆರಂಭವಾಗಿತ್ತು. 43 ಸಾವಿರ ಪೌರ ಕಾರ್ಮಿಕರನ್ನು ನಾವು ಗುರುತಿಸಿದ್ದೇವೆ. ರಾಜ್ಯದ ಎಲ್ಲ ನಗರಗಳ ಪೌರ ಕಾರ್ಮಿಕರನ್ನು ಕಾಯಂಗೊಳಿಸಿ ಎಂದು ಸಲಹೆ ನೀಡಿದರು. 

ಇದನ್ನೂ ಓದಿ: ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಈ ಸರ್ಕಾರ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಯಾವುದೇ ಆದ್ಯತೆ‌ ನೀಡಿಲ್ಲ. ನಾವು ಕಲ್ಯಾಣ ಕರ್ನಾಟಕ‌ ಮಂಡಳಿಗೆ 5 ಸಾವಿರ‌ ಕೋಟಿ ಮೀಸಲಿಟ್ಟಿದ್ದೇವು ಅದನ್ನು ಮುಂದುವರೆಸಿರುವುದು ಸ್ವಾಗತ. ಕಿತ್ತೂರು ಕರ್ನಾಟಕ ಅಭಿವೃದ್ಧಿ ಗೆ ಮಂಡಳಿ ಮಾಡಿದ್ದೇವು. ಸರ್ಕಾರ ಬೋರ್ಡ್ ರಚನೆ ಮಾಡಬೇಕು ಇಲ್ಲದಿದ್ದರೆ ಹತ್ತರ ಕರ್ನಾಟಕ ಅಸಮಾನತೆ ಕೂಗು ಕೇಳಿ ಬರುತ್ತದೆ ಎಂದರು. ಜಲ ಜೀವನ್ ಮಿಷನ್ ಅಡಿಯಲ್ಲಿ ನಾವು ಕಳೆದ‌ ಮೂರು ವರ್ಷದಲ್ಲಿ ಮನೆ ಮನೆಗೆ ನೀರು ಕೊಡುವ ಕೆಲಸ ಮಾಡಿದ್ದೇವೆ ಎಂದರು.

ಬಡವರಿಗೆ ಗ್ಯಾರೆಂಟಿ ಕೊಡುವುದಾಗಿ ಒಂದು ಕಡೆ ಹೇಳಿ‌ ಇನ್ನೊಂದು ಕಡೆ ವಿದ್ಯುತ್,  ಅಬಕಾರಿ ದರ ಹೆಚ್ಚಳ ಮಾಡಿ ಜನರ ಮೇಲೆ ಭಾರ ಹಾಕುತ್ತಿದ್ದಾರೆ. ಸುಮ್ಮನೇ ಕೇಂದ್ರ ಸರ್ಕಾರದ‌ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ‌. ಕೇಂದ್ರದಿಂದ ಫಲಾನುಭವಿಗಳಿಗೆ ಬರುವ ನೇರ ನಗದು ಯೋಜನೆ ರಾಜ್ಯ ಸರ್ಕಾರದ‌ ಲೆಕ್ಕಕ್ಕೆ ಬರುವುದಿಲ್ಲ. ನಾವು ಸಾಲ ಮಾಡಿದ್ದರೂ, ಫಿಸಿಕಲ್ ರಿಸ್ಪಾನ್ಸಿಬಿಲಿಟಿ ಆ್ಯಕ್ಟ್ ವ್ಯಾಪ್ತಿಯ ಒಳಗೆ ಮಾಡಿದ್ದೆವು ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News