ರಾಜ್ಯದಲ್ಲಿ ಹಲಾಲ್ ಮಾಂಸ ನಿಷೇಧಿಸಲು ಮುಂದಾದ ಬೊಮ್ಮಾಯಿ ಸರ್ಕಾರ
ರಾಜ್ಯದಲ್ಲಿ ಹಿಜಾಬ್ ವಿವಾದದ ನಡುವೆಯೇ ಇದೀಗ ರಾಜ್ಯದಲ್ಲಿ ಹಲಾಲ್ ಮಾಂಸದ ವಿರುದ್ಧ ಮಸೂದೆಯನ್ನು ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅದರ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಹಿಜಾಬ್ ವಿವಾದದ ನಡುವೆಯೇ ಇದೀಗ ರಾಜ್ಯದಲ್ಲಿ ಹಲಾಲ್ ಮಾಂಸದ ವಿರುದ್ಧ ಮಸೂದೆಯನ್ನು ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅದರ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಸೋಮವಾರದಿಂದ ಆರಂಭವಾಗಲಿರುವ ವಿಧಾನಸಭೆ ಅಧಿವೇಶನದಲ್ಲಿ ಬಸವರಾಜ ಬೊಮ್ಮಾಯಿ ಸರಕಾರ ಸದನದಲ್ಲಿ ಮಂಡಿಸುವ ಸಾಧ್ಯತೆ ಇದೆ.
ಅದೇ ಸಮಯದಲ್ಲಿ, ರಾಜ್ಯದ ಬಿಜೆಪಿ ಸರ್ಕಾರವು ಚುನಾವಣೆಗೆ ಮುನ್ನ ಹಿಂದುತ್ವದ ಕಾರ್ಡ್ ಅನ್ನು ಉಪಯೋಗಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಪ್ರಮಾಣೀಕೃತ ಆಹಾರ ಪದಾರ್ಥಗಳನ್ನು ಹೊರತುಪಡಿಸಿ ಇತರ ವಸ್ತುಗಳನ್ನು ನಿಷೇಧಿಸುವಂತೆ ಎಫ್‌ಎಸ್‌ಎಸ್‌ಎಐ (ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ)ಕ್ಕೆ ಬಿಜೆಪಿ ಶಾಸಕ ಎನ್.ರವಿಕುಮಾರ್ ಒತ್ತಾಯಿಸಿದ್ದಾರೆ. ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯದಲ್ಲಿ ರಾಜಕೀಯ ವಿವಾದ ತಾರಕಕ್ಕೇರಿದ್ದು, ಇದೀಗ ಹಲಾಲ್ ಮಾಂಸ ನಿಷೇಧದ ಬಗ್ಗೆ ಪ್ರತಿಪಕ್ಷಗಳಿಗೆ ಹೊಸ ವಿಷಯ ಸಿಕ್ಕಿದೆ.
ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
ಬಿಜೆಪಿ ಶಾಸಕರಿಂದ ರಾಜ್ಯಪಾಲರಿಗೆ ಪತ್ರ:
ಬಿಜೆಪಿಯ ಈ ಬೇಡಿಕೆಯನ್ನು ಮುಂದಿನ ವರ್ಷ ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ತಳುಕು ಹಾಕಲಾಗುತ್ತಿದೆ. ಚುನಾವಣೆಗೆ ಇನ್ನು 6 ತಿಂಗಳು ಮಾತ್ರ ಬಾಕಿ ಇದೆ. ಹೀಗಿರುವಾಗ ಸದನದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮತಾಂತರದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುವ ನಿರೀಕ್ಷೆ ಇದೆ. ಬಿಜೆಪಿ ಶಾಸಕ ರವಿಕುಮಾರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ರವಿಕುಮಾರ್ ಹಲಾಲ್ ಮಾಂಸ ನಿಷೇಧ ಕುರಿತು ಖಾಸಗಿ ವಿಧೇಯಕ ಮಂಡಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರವನ್ನೂ ಬರೆದಿದ್ದರು. ಆದರೆ, ಈಗ ಅದನ್ನು ಸದನದಲ್ಲಿ ಮಸೂದೆಯಾಗಿ ಮಂಡಿಸಲು ಬಯಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಬಿಜೆಪಿಯ ಎಲ್ಲ ಶಾಸಕರು ಒಪ್ಪಿಗೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇಂದು ಈ ವಿಚಾರದಲ್ಲಿ ಅವರು ತಮ್ಮ ಸಚಿವರು ಹಾಗೂ ಮುಖಂಡರ ಜೊತೆ ಸಭೆ ನಡೆಸಬಹುದು ಎನ್ನಲಾಗಿದೆ.
ಕಾಂಗ್ರೆಸ್ ವಿರೋಧಿಸಲು ಸಿದ್ಧ:
ಮಸೂದೆಗೆ ಅನುಮೋದನೆ ನೀಡದಂತೆ ಪ್ರತಿಪಕ್ಷಗಳು ಒತ್ತಾಯಿಸಿದವು. ಈ ಬಿಜೆಪಿ ಮಸೂದೆ ಕುರಿತು ಸದನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಬಿಸಿಬಿಸಿ ಚರ್ಚೆ ನಡೆಸುವ ನಿರೀಕ್ಷೆಯಿದೆ. ಸದನದ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಹಲಾಲ್ ಮಾಂಸದ ಖಾಸಗಿ ವಿಧೇಯಕಕ್ಕೆ ಅಂಗೀಕಾರ ನೀಡದಂತೆ ವಿಧಾನಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ, ಈ ಮಸೂದೆಯನ್ನು ವಿಧಾನಸಭೆಯಲ್ಲಿ ವಿರೋಧಿಸಲು ಕಾಂಗ್ರೆಸ್ ಸಿದ್ಧವಿದೆ. ಬಿಜೆಪಿಯ ತಂತ್ರಗಾರಿಕೆ ನಮಗೆ ಅರ್ಥವಾಗಿದೆ ಎಂದು ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಹೇಳಿದ್ದಾರೆ. ಅವರ ವೈಫಲ್ಯ, ಭ್ರಷ್ಟಾಚಾರ ಮತ್ತು ಮತದಾರರ ಮಾಹಿತಿ ಕಳ್ಳತನದಂತಹ ವಿಷಯಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ತಿರುಗಿಸಲು ಅವರು ಬಯಸುತ್ತಾರೆ. ಹಲಾಲ್ ವಿರೋಧಿ ಮಸೂದೆಯ ಉದ್ದೇಶವು ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಕೋಮುವಾದ ಧ್ರುವೀಕರಣಗೊಳಿಸುವುದಾಗಿದೆ ಎಂದು ಹೇಳಿದ್ದಾರೆ.ನನಗೆ ಇರೋದು ಒಬ್ಬಳೇ ಹೆಂಡತಿ: ಸಾಕು ಮಗನ ಸಂಸಾರದಿಂದ ಪೊಲೀಸ್ ಠಾಣೆ ಮೆಟ್ಟಿಲೇರಿದೆ..!
ಯುಗಾದಿ ಹಬ್ಬ ಮತ್ತು ಹಲಾಲ್ ಮಾಂಸದ ವಿವಾದ:
ಹಲಾಲ್ ಮಾಂಸದ ವಿವಾದ ಯುಗಾದಿ ಹಬ್ಬದಿಂದಲೇ ಆರಂಭವಾಯಿತು. ಕರ್ನಾಟಕದಲ್ಲಿ ಹಿಂದೂ ಜಾಗೃತಿ ಸಮಿತಿ, ಶ್ರೀರಾಮಸೇನೆ, ಭಜರಂಗದಳ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಬೀದಿಗಿಳಿದಿವೆ. ಮುಸ್ಲಿಂ ಅಂಗಡಿಗಳಿಂದ ಹಲಾಲ್ ಮಾಂಸವನ್ನು ಖರೀದಿಸಬಾರದು ಎಂಬ ಬೇಡಿಕೆ ಇತ್ತು. ಮಾಂಸ ಮಾರಾಟ ಮಾಡುವ ಅಂಗಡಿಗಳು ತಮ್ಮ ಪ್ರದರ್ಶನ ಫಲಕಗಳಿಂದ ಹಲಾಲ್ ಅನ್ನು ತೆಗೆದುಹಾಕಲು ಸಹ ಕೇಳಲಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.