ಹಾವೇರಿ: ರೈತರ ಜಮೀನು ಮುಟ್ಟಿದವರು ಯಾರೂ ಕುರ್ಚಿ ಮೇಲೆ ಕೂಡಲು ಆಗುವುದಿಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ ಆಗಲಿದೆ‌. ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ವಕ್ಪ್ ನೊಟಿಫಿಕಿಷನ್ ರದ್ದು ಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.


COMMERCIAL BREAK
SCROLL TO CONTINUE READING

ರಾಜ್ಯ ಸರ್ಕಾರ ವಕ್ಪ್ ಬೋರ್ಡ್ ಮೂಲಕ ರೈತರಿಗೆ ನೊಟೀಸ್ ನೀಡಿರುವುದನ್ನು ಖಂಡಿಸಿ ಶಿಗ್ಗಾವಿ ಮಂಡಲ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ರ‌್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಶಿಗ್ಗಾವಿ ತಾಲೂಕಿನ ಸರ್ವೆ ನಂಬರ್ 417 ರಲ್ಲಿ ನೂರಾರು ಜನ ಬಡವರಿಗೆ  ಸ್ಲಮ್ ಬೋರ್ಡ್ ನಿಂದ ಮನೆ ಕಟ್ಟಲು ಅನುಮತಿ ನೀಡಿದ್ದೇವೆ. ಅದು ವಕ್ಪ್ ಆಸ್ತಿ ಅಂತ ದಾವೆ ಹೂಡಿದ್ದಾರೆ. ಶಿಗ್ಗಾವಿ ಬಡವರಿಗೆ ತಲೆ ಮೇಲೆ ಸೂರು ಇಲ್ಲದಂತ ವ್ಯವಸ್ಥೆ ಈ ವಕ್ಪ್ ಬೋರ್ಡ್ ನಿಂದ ಆಗಿದೆ ಎಂದು ಆರೋಪಿಸಿದರು.


ಶಿಗ್ಗಾವಿಯಲ್ಲಿ 220 ಕೆವಿ ವಿದ್ಯುತ್ ಸ್ಟೇಷನ್ ಮಾಡಲು ಹೋದಾಗ ಅದು ವಕ್ಪ್ ಆಸ್ತಿ ಎಂದು ಅದರ ವಿರುದ್ದ ಕೊರ್ಟ್ ಗೆ ಹೊಗಿದ್ದಾರೆ. ಅದನ್ನು ಹೋರಾಡಿ ಗೆದ್ದಿದ್ದೇವೆ‌. ವಿದ್ಯುತ್ ಸ್ಟೇಷನ್ ಮಾಡಿದ್ದೇವೆ‌.  ಕಿತ್ತೂರು ರಾಣಿ ಚನ್ನಮ್ಮನ ಮೂರ್ತಿ ಸ್ಥಾಪನೆ ಮಾಡಲು ಅಡ್ಡಿ ಮಾಡಿದರು ಅದರ ವಿರುದ್ದ ಹೋರಾಡಿ ಚೆನ್ನಮ್ಮ ಮೂರ್ತಿ ಸ್ಥಾಪನೆ ಮಾಡಿದ್ದೇನೆ. ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆ ಮಾಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ನಾನು ಕೆಲವೇ ದಿನಗಳಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆ ಮಾಡುತ್ತೇನೆ ಎಂದು ಭರವಸೆ ನೀಡಿದರು.ತಡಸ್ ಬಳಿ ಲಂಬಾಣಿ ತಾಂಡಾ ಇರುವ 19 ಎಕರೆ ಜಮೀನು ವಕ್ಪ್ ಆಸ್ತಿ ಎಂದು ಮಾಡಿದ್ದಾರೆ ಎಂದರು. 


ನಾನು ವಕ್ಪ್ ಬೋರ್ಡ್ ಕಾರ್ಯಕ್ರಮಕ್ಕೆ ಹೋದಾಗ ಅಲ್ಲಿದ್ದವರು ಕಾಂಗ್ರೆಸ್ ನವರು ವಕ್ಪ್ ಆಸ್ತಿ ನುಂಗಿದ್ದಾರೆ ಎಂದು ಚೀಟಿ ಕೊಟ್ಟರು, ಕಾಂಗ್ರೆಸ್ ನ ದೊಡ್ಡ ದೊಡ್ಡ ನಾಯಕರೇ ವಕ್ಪ್ ಆಸ್ತಿ ನುಂಗಿದ್ದಾರೆ ಅದನ್ನು ವಾಪಸ್ ಪಡೆಯಬೇಕು ಎಂದು ವಕ್ಪ್ ಬೋರ್ಡ್  ಗೆ ಹೇಳಿದ್ದೆ, ಅದನ್ನು ಈಗ ತಿರುಚಿ ನಾನು ರೈತರ ಜಮೀನು ವಾಪಸ್ ಪಡೆಯಲು ಹೇಳಿದ್ದೆ ಎಂದು ತಿರುಚುತ್ತಿದ್ದಾರೆ. ನಾನು ಹಾಗೆ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು. 


ಇದನ್ನೂ ಓದಿ: ಆಸ್ತಿ ಕಬಳಿಸುವುದು ವಕ್ಫ್‌ ಬೋರ್ಡ್‌ನ ಒಂದು ದಂಧೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ


ಸಿಎಂ ಸಿದ್ದರಾಮಯ್ಯ ಅವರು ರೈತರಿಗೆ ನೀಡಿರುವ ನೊಟಿಸ್ ವಾಪಸ್ ಪಡೆದರೆ ಸಾಲದು, ವಕ್ಪ್ ಗೆಜೆಟ್ ನೊಟೀಫಿಕೇಶನ್  ವಾಪಸ್ ಪಡೆಯಬೇಕು, ಅಷ್ಟೇ ಅಲ್ಲ, ವಕ್ಪ್ ಕಾಯ್ದೆ ರದ್ದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಪ್ರಧಾನಿ ಮೋದಿಯವರು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ‌ ಎಂದರು.


ಶಿಗ್ಗಾವಿ ಸವಣೂರು ರೈತರು ನಿಮಗೆ ವಕ್ಪ್ ಬೋರ್ಡ್ ನಿಂದ ಬಂದ ನೊಟಿಸನ್ನು  ನನ್ನ ಕಚೇರಿಗೆ ತಂದು ಕೊಡಿ ನಿಮ್ಮ ಪರವಾಗಿ ನಾನು ನ್ಯಾಯಾಲಯದಲ್ಲಿ ಹೊರಾಟ ಮಾಡುತ್ತೇನೆ. ಶಿಗ್ಗಾವಿ ಸವಣೂರಿನ ರೈತರ ಒಂದಿಂಚು ಜಮೀನು ಬಿಡುವುದಿಲ್ಲ. ನಿಮ್ನ ಜಮೀನಿನ ಜವಾಬ್ದಾರಿ ನನಗೆ ಬಿಡಿ, ನಾನು ರಕ್ಚಣೆ ನೀಡುತ್ತೇನೆ ಎಂದು ಭರವಸೆ ನೀಡಿದರು.


ಈಗ ಉಪ ಚುನಾವಣೆ ನಡೆಯುತ್ತಿರುವುದು ಬಿಜೆಪಿ ಹಾಗೂ ಲ್ಯಾಂಡ್ ಜಿಹಾದ್ ನಡೆಸುತ್ತಿರುವ ಕಾಂಗ್ರೆಸ್ ವಿರುದ್ದ, ಈ ಕ್ಷೇತ್ರದಲ್ಲಿ ಸೌಹಾರ್ದತೆ ಇರಬೇಕು, ಹೆಣ್ಣುಮಕ್ಕಳು ಸುರಕ್ಷಿತವಾಗಿ ಶಾಲಾ ಕಾಲೇಜಿಗೆ ಹೋಗಬೇಕು. ಪೊಲಿಸ್ ದೌರ್ಜನ್ಯ ನಿಲ್ಲಬೇಕು. ಅದಕ್ಕಾಗಿ  ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಅವರಿಗೆ ಪಾಠ ಕಲಿಸಬೇಕು‌ ಎಂದರು.


ನಮ್ಮ ಸಣ್ಣ ಸಣ್ಣ ಮಕ್ಕಳನ್ನು ಪೊಲಿಸ್ ಸ್ಟೇಷನ್ ಗೆ ಕರೆದುಕೊಂಡು ಹೋಗುತ್ತಿದ್ದಾರೆ. ಕಡಕೋಳ್ ಪ್ರಕರಣವನ್ನು ಅಷ್ಟು ಸುಲಭವಾಗಿ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ  ಉಳಿಸೇ ಉಳಿಸುತ್ತೇವೆ. ರೈತರ ಭೂಮಿ ಉಳಿಸುತ್ತೇವೆ ಎಂದು ಇದೇ ವೇಳೆ ಪ್ರತಿಜ್ಞೆ ಮಾಡಿದರು.
ಪ್ರತಿಭಟನಾ ರ್‍ಯಾಲಿಯಲ್ಲಿ  ಮಾಜಿ ಸಚಿವರಾದ ಸಿ.ಟಿ‌. ರವಿ, ರಾಜು ಗೌಡ, ಸಿ.ಸಿ‌.ಪಾಟೀಲ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ  ಪಿ. ರಾಜೀವ್ , ದತ್ತಾತ್ರೇಯ ಪಾಟೀಲ್ ರೇವೂರ ಹಾಜರಿದ್ದರು.


ಇದನ್ನೂ ಓದಿ: ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ  ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.