ಹಾವೇರಿ: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ಸಲೀಂ ಅಹ್ಮದ್‌ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..? ಮಂತ್ರಿ ಮಂತ್ರಿಗಳ ನಡುವೆ ಏನಾಗುತ್ತದೆ.? ಸಿಎಂ, ಡಿಸಿಎಂ ನಡುವೇ ಏನಾಗುತ್ತಿದೆ ಎಂದು ತಿಳಿದು ಕೊಳ್ಳಲಿ ಅವರಿಗೆ ಎಲ್ಲವು ಗೊತ್ತಿದ್ದು ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೊ ನನಗೆ ಗೊತ್ತಿಲ್ಲಾ ಸಲೀಂ ಅಹ್ಮದ್‌ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ  ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಹೇಳಿದರು.


ಇದನ್ನೂ ಓದಿ:ಕೆ.ಸಿ ಜನರಲ್ ಜನಪ್ರಿಯ ಆಸ್ಪತ್ರೆಯಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ: ಸಚಿವ ದಿನೇಶ್ ಗುಂಡೂರಾವ್


ಶಾಸಕರಿಗೆ ನೀಡುವ ಬತ್ತೆ ಚಹಾ ಕುಡಿಯಲಿಕ್ಕೆ ಸಾಲುವುದಿಲ್ಲಾ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯು.ಟಿ ಖಾದರ್ ಯಾವ ಆಧಾರದ ಮೇಲೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂದರು.


ಡೆಂಗ್ಯೂ ಮುನ್ನೆಚ್ಚರಿಕೆ ವಹಿಸಿ : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಹಾವಳಿ ಕುರಿತು ಮಾತನಾಡಿದ ಅವರು, ಒಂದು ಕಾಲದಲ್ಲಿ ಹೇಗೆ ಕಾಲರಾ, ಮಲೇರಿಯಾ ಹೇಗೆ ಬಂದಿತ್ತೊ ಹಾಗೆ ಈಗಾ ಡೆಂಗ್ಯೂ ಬಂದಿದೆ
ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳ ಬೇಕು ಅಧಿಕಾರಿಗಳು ಯಾವುದೇ ಮುಂಜಾಗ್ರತ ಕ್ರಮ ತೆಗೆದು ಕೊಳ್ಳುವುದಿಲ್ಲಾ ಹೀಗಾಗಿ ಡೆಂಗ್ಯೂ ಉಲ್ಬಣವಾಗುತ್ತದೆ ಆಗ ಮೇಲಾಧಿಕಾಗಳ ಗಮನಕ್ಕೆ ತರುತ್ತಾರೆ. ನಾನು ಡಿಸಿ, ಡಿಎಚ್ಓ, ಡಿ.ಎಸ್ ಗೆ ಆಗ್ರಹ ಮಾಡುತ್ತೆನೆ ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.


ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ


ಡೆಂಗ್ಯೂ ಡೇತ್ ಕೇಸ್ ಮರೆಮಾಚುತ್ತಿದ್ದಾರೆ ಎಂಬ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡೆಂಗ್ಯೂವಿನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಅಧಿಕಾರಿಗಳು ಸರಕಾರಿ ಆಸ್ಪತ್ರೆಯ ಸಂಖ್ಯೆ ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ. ಡೆಂಗ್ಯೂ ಸೊಂಕಿತರು ಹುಬ್ಬಳ್ಳಿ ದಾವಣಗೆರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಅವುಗಳನ್ನು ಲೆಕ್ಕಕ್ಕೆ ತೆಗೆದು ಕೊಳ್ಳಬೇಕು ಎಂದು ಆಗ್ರಹಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.