ಹಾವೇರಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನವರಿಗೆ ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಹಾವೇರಿ ಜಿಲ್ಲೆಯ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಅರುಣ್ ಕುಮಾರ್ ಪೂಜಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಗಲು ಯಾರೂ ತಯಾರಿಲ್ಲ. ಪ್ರಧಾನಿ ನರೇಂದ್ರ ಮೋದಿ ಹೊಡೆತಕ್ಕೆ ನಾವೆಲ್ಲಾ ಎಲ್ಲಿ ಸಿಲುಕಿ ಸಾಯೋಣ ಅಂತ ಒಬ್ಬ ಮಂತ್ರಿ ನನ್ನ ಬಳಿ ಹೇಳಿದರು. ಹಾವೇರಿಯಲ್ಲಿಯೂ ಒಬ್ಬ ಮಂತ್ರಿಗೆ ಅಭ್ಯರ್ಥಿ ಆಗಿ ಎಂದು ಕಾಂಗ್ರೆಸ್ ನವರು ಕೇಳಿದ್ದಾರೆ. ಆದರೆ, ಚುನಾವಣೆಗೆ ನಿಲ್ಲಲು ಯಾರೂ ತಯಾರಿಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿಯ ಗರ ವೈಭವ ಮರುಕಳಿಸುತ್ತಿದೆ. ಯುವಕರಿಗೆ ಉತ್ಸಾಹ ಬಂದಿದೆ ಎಂದರು. 


ಇದನ್ನೂ ಓದಿ: ಗ್ಯಾರಂಟಿ ಯೋಜನೆ ರದ್ದು, ಕಾಂಗ್ರೆಸ್ ಪಕ್ಷದ ರಹಸ್ಯ ಚರ್ಚೆ ಬಯಲು : ಹೆಚ್‌ಡಿಕೆ


ಹಾವೇರಿ ಜಿಲ್ಲೆಯ ಬಿಜೆಪಿ ಗತ ವೈಭವ ಪುನಃ ನಿರ್ಮಾಣ ಆಗುತ್ತಿದೆ. ಅರುಣ್ ಕುಮಾರ್ ಪೂಜಾರ್ ಜಿಲ್ಲಾದ್ಯಕ್ಷ ಆಗಿದ್ದಾರೆ. ಬರುವ ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸುವ ಜವಾಬ್ದಾರಿ ಇದೆ. ಮತ ಕೇಳುವ ನೈತಿಕ ಹಕ್ಕು ಬಿಜೆಪಿಗೆ ಮಾತ್ರ ಇದೆ ಎಂದು ಹೇಳಿದರು. 


ಹಾವೇರಿ ಜಿಲ್ಲೆಯ ಉದಯಕ್ಕೆ ದಿವಂಗತ ಸಿ.ಎಂ. ಉದಾಸಿಯವರು ಕಾರಣ. ಜಿಲ್ಲೆಯ ಅಭಿವೃದ್ಧಿಗೆ ಕಾರಣೀಭೂತರು ಮಾಜಿ ಸಿಎಂ ಯಡಿಯೂರಪ್ಪನವರು. 2002 ರಲ್ಲಿಯೇ ಕೃಷ್ಣ ಮೇಲ್ದಂಡೆ ಯೋಜನೆ ನೀರು ಹರಿಸುವುದಾಗಿ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದರು. ಆದರೆ 2012 ಬಂದರೂ ಅವರ ಕಡೆಯಿಂದ ನೀರು ಹರಿಸಲು ಆಗಲಿಲ್ಲ. ನಾನು ಹಾಗೂ ಯಡಿಯೂರಪ್ಪನವರು ರೈತರ ಜಮೀನಿಗೆ ನೀರು ಹರಿಸಿದೆವು ಎಂದರು. 


ಇದನ್ನೂ ಓದಿ:ಇಷ್ಟು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್


ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಮ್ಮ ಎಲ್ಲಾ ಯೋಜನೆಗಳನ್ನು ಕಾಂಗ್ರೆಸ್ ನವರು ನಿಲ್ಲಿಸಿದ್ದಾರೆ. ರೈತರ ಪಾಲಿಗೆ ಈ ಸರ್ಕಾರ ಸತ್ತು ಹೋಗಿದೆ ಸರ್ಕಾರದ ಗ್ಯಾರಂಟಿಗಳು ಯಾರಿಗೂ ಮುಟ್ಟಿಲ್ಲ. ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡುತ್ತೇನೆ. 200 ಯುನಿಟ್ ಫ್ರೀ ಕರೆಂಟ್ ಯಾರಿಗೆ ಕೊಟ್ಟಿದಿರಿ ಅವರ ಹೆಸರು  ಕೊಡಿ. ಫಲಾನುಭವಿಗಳ ಹೆಸರುಗಳನ್ನು ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.


ಇವರು ಜನತೆಗೆ ಮೋಸ ಮಾಡಲು ಹೊರಟಿದ್ದಾರೆ. ಒಂದು ಕಾಳು ಅಕ್ಕಿ ಕೊಟ್ಟಿಲ್ಲ. ಇವರು ಕೊಟ್ಟಿರುವುದೆಲ್ಲಾ ಮೋದಿ ಅಕ್ಕಿ. ರಾಜ್ಯ ಸರ್ಕಾರ ಮೋದಿ ಸರ್ಕಾರದ ಋಣದಲ್ಲಿದೆ ಎಂದು ಹೇಳಿದರು. ಸರ್ಕಾರ ಪತನ ಇನ್ನು ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರ ಗೆಲ್ಲಿಸಿದರೆ, ಲೋಕಸಭೆ ಚುನಾವಣೆ ಬಳಿಕ ಕೇವಲ ಎರಡು ಮೂರು ತಿಂಗಳಲ್ಲಿ  ಈ ದರಿದ್ರ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ.  ಇದಕ್ಕೆ ನಾನು ಗ್ಯಾರಂಟಿ ಕೊಡುತ್ತೇನೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.