ಬೆಂಗಳೂರು: ಸಂಪೂರ್ಣ ಬಹುಮತದೊಂದಿಗೆ ಬಂದ ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲಾ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ’ ಎಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

‘ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರಂಟಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ 5 ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ’ವೆಂದು ಕುಟುಕಿದ್ದಾರೆ.


ತಾಳಿ ಕಟ್ಟುವ ವೇಳೆ ವಧು ಹೈಡ್ರಾಮ.. ಮದುವೆ ಗಂಡಿಗೆ ಪಂಗನಾಮ..!


‘ಈ ಮಧ್ಯ ಗ್ಯಾರಂಟಿಗಾಗಿ SC/ST ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂ. ಬಳಕೆ ಮಾಡಿ SC/ST ಮತ್ತು ಒಬಿಸಿ ಜನರಿಗೆ ಸರ್ಕಾರ ಮೋಸ ಮಾಡಿದೆ. ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ವಿಫಲವಾಗಿದೆ. ನಮ್ಮ ಡ್ಯಾಂಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕೊಲೆ-ಸುಲಿಗೆ ಸಾಮಾನ್ಯವಾಗಿದೆ’ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.


ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿಯ ಯಾವೊಬ್ಬ ಶಾಸಕರು ಕಾಂಗ್ರೆಸ್‌ಗೆ ಹೋಗಲ್ಲ : ಕೇಂದ್ರ ಸಚಿವ ಜೋಶಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.