ಬೆಂಗಳೂರು : ರಾವಣನ ಕನ್ನಡಕ ಬಿಟ್ಟು ಭಕ್ತಿಯ ಕನ್ನಡಕ ಹಾಕಿಕೊಂಡು ನೋಡಿದರೆ ಎಲ್ಲೆಡೆ ರಾಮ ಕಾಣಿಸುತ್ತಾನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಮುಖಂಡ ರಾಹುಲ್‌ ವಿರುದ್ಧ ಗುಡುಗಿದರು.


COMMERCIAL BREAK
SCROLL TO CONTINUE READING

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಮನ ಕುರಿತು ಆಡಿರುವ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ರಾವಣನ ಕನ್ನಡಕ ಹಾಕಿಕೊಂಡು ನೋಡಿದರೆ ರಾಮ ರಾಜ್ಯ ಕಾಣಿಸುವುದಿಲ್ಲ. ಭಕ್ತಿಯ ಕನ್ನಡಕದಿಂದ ನೋಡಿದರೆ ಎಲ್ಲೆಡೆಯೂ ರಾಮ ಕಾಣಿಸುತ್ತಾನೆ ಎಂದು ಹೇಳಿದರು.


ಇದನ್ನೂ ಓದಿ:ರಾಮರಾಜ್ಯದಲ್ಲಿ ತೆರಿಗೆ ಸಂಗ್ರಹ ವಿಧಾನ ಹೇಗಿತ್ತು? ತುಳಸೀದಾಸರ ವಿವರಣೆ ಇಲ್ಲಿದೆ


ಅಲ್ಲದೆ, ಕಾಂಗ್ರೆಸ್ ಪಕ್ಷದ ವರ್ತನೆಯಿಂದ ಬೇಸತ್ತು INDIA ಒಕ್ಕೂಟದ ಪಕ್ಷಗಳು ದೂರವಾಗುತ್ತಿದ್ದು, ಮಮತಾ ಬ್ಯಾನರ್ಜಿ ಹೊರಗೆ ಹೋಗಿದ್ದು, ಶರತ್ ಪವ್ವಾರ್, ನಿತೀಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗಿಟ್ಟಿದ್ದು, ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
 
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಯಿಂದ ಹೊರಗೆ ಬಂದಿದ್ದಾರೆ. ಶರತ್ ಪವಾರ್ ಕೂಡ ಹೊರ ಬರಲಿದ್ದಾರೆ. ಬಿಹಾರ ಸಿಎಂ ನಿತಿಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ‌. ಇಂಡಿ ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ‌. ಕಾಂಗ್ರೆಸ್ ನವರ ಕಟಾದಿಂದ ಅವರು ಹೊರಗೆ ಬರುತ್ತಿದ್ದಾರೆ. ಮೊದಿಯವರು 3ನೇ ಬಾರಿಗೆ ಪ್ರಧಾನಿಯಾದ ಮೇಲೆ  ಒಕ್ಕೂಟ ಇರುವುದಿಲ್ಲ. ಮಮತಾ ಬ್ಯಾನರ್ಜಿಯವರಿಗೆ ಭ್ರಮ‌ನಿರಸನ ಆಗಿದೆ ಎಂದು ಹೇಳಿದರು. 


ಇದನ್ನೂ ಓದಿ:ಕೋಕಾ ಕೋಲಾ ಇಂಡಿಯಾ- ರಿಲಯನ್ಸ್ ರೀಟೇಲ್ ಜತೆಯಾಗಿ ಪೆಟ್ ಬಾಟಲಿಗಳ ಸಂಗ್ರಹ, ಮರುಬಳಕೆಗೆ ಮಹತ್ವದ ಹೆಜ್ಜೆ


ಹೈಕಮಾಂಡ್ ನಿರ್ಧಾರಕ್ಕೆ ಬದ್ದ : ಇದೇ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆ ತರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಗದೀಶ್ ಶೆಟ್ಟರ್ ಅವರು ಜನಸಂಘದಿಂದ ಬಂದವರು, ಅವರಿಗೆ ಕಾಂಗ್ರೆಸ್‌ನಲ್ಲಿ ಇರಲು ಕಷ್ಟವಾಗಲಿದೆ. ಅವರನ್ನು ಪಕ್ಷಕ್ಕೆ ಕರೆತರಲು ಯಾರ ಮೂಲಕ ಪ್ರಯತ್ನ ನಡೆಸಲಾಗುತ್ತಿದೆ ಎನ್ನುವುದು ನನಗೆ ಗೊತ್ತಿಲ್ಲ. ಅವರ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದರು.


ಬಿಹಾರದ ಮಾಜಿ ಸಿಎಂ ದಿ. ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ ಎತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತರು, ಒಬಿಸಿ ಕಾಂಗ್ರೆಸ್‌ನ ಗುತ್ತಿಗೆಯಲ್ಲ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿದ್ದು ಯಾರು ? ಕಾಂಗ್ರೆಸ್ ಯಾಕೆ ಕೊಡಲಿಲ್ಲಾ. ಪ್ರಣಬ್ ಮುಖರ್ಜಿ, ಅಬ್ದುಲ್ ಕಲಾಂ ಅವರಿಗೆ ನಾವು ಕೊಟ್ಟಿದ್ದೇವೆ. ಯಾರು ಒಳ್ಳೆಯ ಕೆಲಸ ಮಾಡಿದ್ದಾರೆ ಅವರಿಗೆ ಬಿಜೆಪಿ ಗುರುತಿಸಿ ಭಾರತ ರತ್ನ ಗೌರ‌ವ‌ ಕೊಡುತ್ತಿದೆ ಎಂದರು.
  
ಅಲ್ಲದೆ, ಹಾವೇರಿಯಲ್ಲಿ ಬಿಜೆಪಿ ಗೆಲ್ಲುವ ಅವಕಾಶ ಹೆಚ್ಚಿರುವುದರಿಂದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಬಿ.ಸಿ ಪಾಟೀಲ್, ಸಂದೀಪ್ ಪಾಟೀಲ್, ಈಶ್ವರಪ್ಪ ಮಗ ಬಹಳ ಜನ ಇದ್ದಾರೆ‌ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.