ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಗೆ ರಾಜ್ಯದ ಆರ್ಥಿಕ ವ್ಯವಸ್ಥೆ ಬುಡಮೇಲು: ಬೊಮ್ಮಾಯಿ
Congress Government Guarantee Schemes: ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ ಎಂದು ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿದ್ದು ಗ್ಯಾರಂಟಿ ಯೋಜನೆಗಳ ಜಾರಿ ವಿಚಾರವಾಗಿ ಕಿಡಿಕಾರಿದ್ದಾರೆ.
‘ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ’ ಎಂದು ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ. ‘SCSP/TSP ಕಾಯ್ದೆಯಡಿ SC/ST ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, SC/ST ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ’ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
'ಗೋ ಬ್ಯಾಕ್ ಮಿಸ್ಟರ್ ಕ್ರೈಮ್ ಮಿನಿಸ್ಟರ್’: ಪ್ರಧಾನಿ ಮೋದಿ ಟೀಕಿಸಿದ ಕಾಂಗ್ರೆಸ್
‘ರಾಜ್ಯ ಸರ್ಕಾರ SCSP/TSP ಯೋಜನೆಗೆ 34 ಸಾವಿರ ಕೋಟಿ ರೂ. ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದ್ದು, ಇದು SCSP ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ’ ಎಂದು ಅವರು ಕಿಡಿಕಾರಿದ್ದಾರೆ.
ದುಬಾರಿ ದುನಿಯಾದ ಸೃಷ್ಟಿ. ಜನಸಾಮಾನ್ಯರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ’ ಎಂದು ಕುಟುಕಿದ್ದಾರೆ.
ಇದನ್ನೂ ಓದಿ: Crime: ವಾಟ್ಸಾಪ್, ಫೇಸ್‌ಬುಕ್‌ನಲ್ಲಿ ಹುಡುಗಿಯರಿಗೆ ಹಾರ್ಟ್ ಎಮೋಜಿ ಕಳಿಸಿದ್ರೆ ಜೈಲ್ ಗ್ಯಾರಂಟಿ..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.