ʼತೆಲಂಗಾಣದಲ್ಲಿ 40 ಶೇ. ಸಿಎಂ ಫ್ಲೆಕ್ಸ್ ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರʼ

ತೆಲಂಗಾಣದಲ್ಲಿ 40 ಶೇ. ಸರ್ಕಾರ ಎಂಬ ಫ್ಲೆಕ್ಸ್‌ಗಳನ್ನು ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

Written by - Prashobh Devanahalli | Edited by - Krishna N K | Last Updated : Sep 18, 2022, 04:23 PM IST
  • ತೆಲಂಗಾಣದಲ್ಲಿ 40 ಶೇ. ಸರ್ಕಾರ ಎಂಬ ಫ್ಲೆಕ್ಸ್‌ಗಳನ್ನು ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರ.
  • ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ.
  • ಇಂತಹ ಬೆಳವಣಿಗೆಗಳು ಉಭಯರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುತ್ತವೆ
ʼತೆಲಂಗಾಣದಲ್ಲಿ 40 ಶೇ. ಸಿಎಂ ಫ್ಲೆಕ್ಸ್ ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರʼ title=

ಬೆಂಗಳೂರು : ತೆಲಂಗಾಣದಲ್ಲಿ 40 ಶೇ. ಸರ್ಕಾರ ಎಂಬ ಫ್ಲೆಕ್ಸ್‌ಗಳನ್ನು ಹಾಕಿರುವುದು ಒಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಅವರು ಇಂದು ಕೃಷ್ಣಾದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು.  ತೆಲಂಗಾಣದಲ್ಲಿಯೂ 40 ಶೇ. ಸರ್ಕಾರ ಎಂಬ ಫ್ಲೆಕ್ಸ್‌ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ನನಗೆ ಗೊತ್ತಿಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ? ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ. ಇಂತಹ ಬೆಳವಣಿಗೆಗಳು ಉಭಯರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೇರಳದ ರೈಲ್ವೆ ಯೋಜನೆ ಪ್ರಸ್ತಾಪವನ್ನು ನಿರಾಕರಿಸಿದ ಸಿಎಂ ಬೊಮ್ಮಾಯಿ

ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ

ನಿನ್ನೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಒದಗಿಸುವುದಾಗಿ ಅತ್ಯಂತ ಬದ್ಧತೆಯಿಂದಲೇ ಘೋಷಿಸಿದ್ದೇನೆ. ಕಳೆದ ವರ್ಷ 3,000 ಕೋಟಿ ರೂ. ಅನುದಾನ ಘೋಷಿಸಿದ್ದೆನು. ಅದನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರು ಇದನ್ನು ಸ್ವಾಗತಿಸಬೇಕಾಗಿತ್ತು. ಆದರೆ ಅವರು ವಿರೋಧಿಸಿರುವುದನ್ನು ನೋಡಿದರೆ, ಈ ಪ್ರದೇಶ ಸದಾ ಹಿಂದುಳಿದಿರಲಿ ಎಂಬುದೇ ಅವರ ಇಚ್ಛೆಯಾ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.  ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಮುಂದಾದಾಗ ಎಲ್ಲರೂ ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಇದರಲ್ಲಿ ರಾಜಕಾರಣದ ಮಾತಾಡುವುದು ಸರಿಯಲ್ಲ ಎಂದು ಸಿಎಂ ತಿಳಿಸಿದರು. 

ಎಲ್ಲದಕ್ಕೂ ರಾಜಕಾರಣ ಸಲ್ಲದು

ಬಳ್ಳಾರಿಯ ವಿಮ್ಸ್ ಘಟನೆಗೆ ಸಚಿವ ಡಾ. ಸುಧಾಕರ್ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹಿಂದೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕರ್ನಾಟಕ ಖಾಸಗಿ ವೈದ್ಯರ ಮಸೂದೆಯನ್ನು ಮಂಡಿಸಿತ್ತು. ಇದನ್ನು ವಿರೋಧಿಸಿ, ರಾಜ್ಯದಾದ್ಯಂತ ಖಾಸಗಿ ವೈದ್ಯರು 5 ದಿನಗಳ ಕಾಲ ಮುಷ್ಕರ ನಡೆಸಿದ್ದರಿಂದ ಸುಮಾರು 80 ಜನರು ಮೃತಪಟ್ಟರು. ಆಗ ಅಂದಿನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರಾ? ಎಂದು ತಿರುಗೇಟು ನೀಡಿದರು. ಎಲ್ಲದಕ್ಕೂ ರಾಜಕಾರಣ ಮಾಡುವ ಪ್ರವೃತ್ತಿ ಕಾಂಗ್ರೆಸ್ನದ್ದು ಎಂದು ನುಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News