ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ ಆಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದರು. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೇಟ್ ನೀಡಿದ ಕುರಿತು ಕೇಳಿದ ಪ್ರಶ್ಬೆಗೆ ಪ್ರತಿಕ್ರಿಯಿಸಿದ ಅವರು,  ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ ಅದರಲ್ಲೇನು ಆಶ್ವರ್ಯ ಇಲ್ಲ. ಆದರೆ, ಈ ಬಾರಿ ಇಷ್ಟು ಪ್ರಮಾಣದಲ್ಲಿ ಕುಟುಂಬ ರಾಜಕೀಯ ನಡೆಯಲು ಕಾರಣ ಬೇರೆನೇ ಇದೆ. ಕಾಂಗ್ರೆಸ್ ನಲ್ಲಿ ಎಲ್ಲಾ ಮಂತ್ರಿಗಳಿಗೆ ಚುನಾವೇಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನವರು ಸುಮಾರು ಹತ್ತು ಹನ್ನೆರಡು ಜನ ಮಂತ್ರಿಗಳಿಗೆ ಹೇಳಿದ್ದರು. ಆದರೆ, ಅವರಿಗೆ ಆರಿಸಿ ಬರುವ ವಿಶ್ವಾಸ ಇರಲಿಲ್ಲ. ಹಾಗಾದರೆ ನೀವೆ ಅಭ್ಯರ್ಥಿಯನ್ನು ಕೊಡಿ ಅಂದಾಗ ಅನಿವಾರ್ಯವಾಗಿ ಅವರು ಅವರ ಮಕ್ಕಳು ಅಣ್ಣ ತಮ್ಮಂದಿರಿಗೆ ಟಿಕೇಟ್ ಕೊಡಿಸಿದ್ದಾರೆ‌. ಇದರಿಂದ ಕಾಂಗ್ರೆಸ್ ಗೆ  ರಾಜಕೀಯ ಲಾಭ ಆಗುವುದಿಲ್ಲ.  ಪ್ರಧಾನಿ ನರೇಂದ್ರ ಮೋದಿಗೆ ಮತ ಹಾಕಲು ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.


ಇದನ್ನೂ ಓದಿ:  ಇಂದು ಪ್ರಥಮ ಪಿಯುಸಿ ಫಲಿತಾಂಶ, ರಿಸಲ್ಟ್‌ ನೋಡಲು ಡೈರೆಕ್ಟ್‌ ಲಿಂಕ್‌ ಇಲ್ಲಿದೆ 


ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ. ಒಳ್ಳೆ ಸಮಯ ನೋಡಿ ನಾಮಪತ್ರ ಸಲ್ಲಿಕೆ  ಮಾಡುತ್ತೇವೆ. ಎರಡು ಸಲ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಒಂದು ಸಲ ವಯಕ್ತಿಕವಾಗಿ ಹಾಗೂ ಮೇಲೆ ಸಾರ್ವಜನಿಕವಾಗಿ ಒಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.


ನಾನೂ ಸ್ಟಾರ್ ಪ್ರಚಾರಕನಾಗಿದ್ದೇನೆ. ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ಎರಡನೇ ಹಂತದಲ್ಲೂ ಪ್ರಚಾರ ಮಾಡುತ್ತೇನೆ ಎಂದರು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು ಚುನಾವಣೆ ಗಿಮಿಕ್ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀರಂಗಪಟ್ಟಣದ ಶಾಸಕರೇನು ಡಾಕ್ಟರ್ ಅಲ್ಲ. ಆರೋಗ್ಯದ ವಿಚಾರಗಳನ್ನು ರಾಜಕಾರಣಕ್ಕೆ ಎಳೆದು ತರುವುದು ಸಮಂಜಸ ಅಲ್ಲ. ಅವರು ಚೆನೈಗೆ  ಹೋಗಿದ್ದು, ಚಿಕಿತ್ಸೆ ಪಡೆದಿದ್ದಕ್ಕೆ ಎಲ್ಲಾ ಸಾಕ್ಷಿಗಳಿವೆ ಎಂದರು. 


ಇದನ್ನೂ ಓದಿ: ಎಲ್ಲರಿಗೂ ಬದುಕು ಕಟ್ಟಿ ಕೊಡುವುದು ನರೇಂದ್ರ ಮೋದಿಯವರ ಗ್ಯಾರೆಂಟಿ: ಬಸವರಾಜ ಬೊಮ್ಮಾಯಿ 


ರಾಜಕಾರಣದಲ್ಲಿ ರಾಜಕೀಯ ನೆಲೆಗಟ್ಟಿನಲ್ಲಿ ಹೋರಾಟ ಮಾಡಬೇಕು. ಶ್ರೀರಂಗಪಟ್ಟಣದ ಶಾಸಕರು ಕುಮಾರ್ ಸ್ವಾಮಿ ಜೊತೆ ನಿಕಟ ಸಂಬಂಧ ಹೊಂದಿದ್ದವರು ಆದರೆ, ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ವಯಕ್ತಿಕ ವಿಚಾರ ತರಬಾರದು ಎಂದು ಹೇಳಿದರು. ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ದೆ ಮಾಡುತ್ತಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅವರು ನಿನ್ನೆ ನಮ್ಮ ಪಕ್ಷದ ಅದ್ಯಕ್ಷರನ್ನು ಭೇಟಿಯಾಗಿದ್ದಾರೆ. ಎಲ್ಲವೂ ಸರಿಯಾಗುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.