Basavaraj Bommai: 'ರೆಮ್‌ಡೆಸಿವಿರ್' ಕದ್ದು ಮಾರುವವರಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವ!

ರಾಜ್ಯದಲ್ಲಿ ರೆಮ್‌ಡೆಸಿವಿರ್ ಚುಚ್ಚುಮದ್ದಿನ ಕೊರತೆ ಇಲ್ಲ, ಈ ಕುರಿತು ಸುಳ್ಳು ಸುದ್ದಿ ಸೃಷ್ಟಿ ಮಾಡಿದ್ದಾರೆ

Last Updated : Apr 15, 2021, 05:38 PM IST
  • ರೆಮ್‌ಡೆಸಿವಿರ್ ಇಂಜೆಕ್ಷನ್‌ನ ಕದ್ದು ಮಾರುತ್ತಿರುವ ಬಗ್ಗೆ ವರದಿಗಳು ಕೇಳಿಬರುತ್ತಿವೆ.
  • ಈ ಕುರಿತು ಪ್ರತಿಕ್ರಿಯೆಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ
  • ಈ ಔಷಧದವನ್ನ ಕದ್ದು ಮಾರುವವರ ವಿರುದ್ಧ ಕಠಿಣ ಕ್ರಮ
Basavaraj Bommai: 'ರೆಮ್‌ಡೆಸಿವಿರ್' ಕದ್ದು ಮಾರುವವರಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವ! title=

ಬೆಂಗಳೂರು: ಕರೋನವೈರಸ್ ಚಿಕಿತ್ಸೆಗೆ ಅತ್ಯಗತ್ಯವಾಗಿರುವ ರೆಮ್‌ಡೆಸಿವಿರ್ ಇಂಜೆಕ್ಷನ್‌ನ ಕದ್ದು ಮಾರುತ್ತಿರುವ  ಬಗ್ಗೆ ವರದಿಗಳು ಕೇಳಿಬರುತ್ತಿವೆ. ಇಂದು ಈ ಕುರಿತು ಪ್ರತಿಕ್ರಿಯೆಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಈ ಔಷಧದವನ್ನ ಕದ್ದು ಮಾರುವವರ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುಲಾಗುವುದು ಹೇಳಿದ್ದಾರೆ.

ರಾಜ್ಯದಲ್ಲಿ ರೆಮ್‌ಡೆಸಿವಿರ್(Remdesivir) ಚುಚ್ಚುಮದ್ದಿನ ಕೊರತೆ ಇಲ್ಲ, ಈ ಕುರಿತು  ಸುಳ್ಳು ಸುದ್ದಿ ಸೃಷ್ಟಿ ಮಾಡಿದ್ದಾರೆ ಎಂದರು 

ಇದನ್ನೂ ಓದಿ : Rainfall in Karnataka: ರಾಜ್ಯದ ಹಲವಡೆ ಗುಡುಗು ಸಹಿತ ಭಾರಿ ಮಳೆ: ಕೆಲವು ಜಿಲ್ಲೆಗಳಲ್ಲಿ 'ಯಲ್ಲೋ ಅಲರ್ಟ್'

ಇಂಜೆಕ್ಷನ್ ಅನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ವರದಿಗಳಿವೆ ಎಂದು ಬೊಮ್ಮಾಯಿ(Basavaraj Bommai) ಹೇಳಿದರು.

ಇದನ್ನೂ ಓದಿ : 2021ರಲ್ಲಿ ಇದೆ ಮೊದಲ ಭಾರಿ ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು..!

"ಸರ್ಕಾರ(Govt)ವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಈ ಮುಖ್ಯವಾದ ಔಷಧವನ್ನು ಕದ್ದು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು  ಎಂದು ಹೇಳಿದರು.

ಇದನ್ನೂ ಓದಿ : Karnataka Govt: ಸಾರಿಗೆ ನೌಕರರ ಮುಷ್ಕರದಿಂದ ರಾಜ್ಯ ಸರ್ಕಾರಕ್ಕೆ ₹ 152 ಕೋಟಿ ನಷ್ಟ!

ರಾಜ್ಯ ಸರ್ಕಾರ ಕಳೆದ ವರ್ಷ ಹಲವು ಸವಾಲುಗಳನ್ನು ಎದುರಿಸಿತ್ತು. ಮತ್ತೆ ಅಂತಹ ಸವಾಲುಗಳನ್ನು ಎದುರಿಸಲು ನಾವು ಸಿದ್ದರಿದ್ದೇವೆ. ಅದರಿಂದ ನಾವು ಪಾಠ ಕಲಿಯುತ್ತಿದ್ದೇವೆ. ಈ ವರ್ಷ ಸರ್ಕಾರವು ಮುಂಚಿತವಾಗಿಯೇ ಕೆಲವಿಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೆ ಸರ್ಕಾರಿ ಆಸ್ಪತ್ರೆ(Govt Hospital)ಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆಯಿಲ್ಲ ಎಂದು  ಹೇಳಿದರು.

ಇದನ್ನೂ ಓದಿ : Bus Strike: ಸಾರಿಗೆ ನೌಕರರ ಮುಷ್ಕರಕ್ಕೆ 6 ದಿನಗಳಲ್ಲಿ 60 ಬಸ್ಸುಗಳು ಬಲಿ..!

ಕರೋನವೈರಸ್‌(Coronavirus) ದಿಂದ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ರಕ್ಷಿಸುವ ಕ್ರಮಗಳ ಕುರಿತು  ಚರ್ಚಿಸಲು ನಾಳೆ (ಶುಕ್ರವಾರ) ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ : CBSE 10ನೇ ತರಗತಿ ಪರೀಕ್ಷೆ ರದ್ದಾದ ಬೆನ್ನಲೇ SSLC ಪರೀಕ್ಷೆಗಳ ಬಗ್ಗೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ!

"ನಾವು ರೆಮ್‌ಡೆಸಿವಿರ್‌ನ ವಿತರಣೆ, ಸಂಗ್ರಹಣೆ ಕುರಿತು ಪ್ರತಿಯೊಂದು ಹಂತದಲ್ಲೂ ಮೇಲ್ವಿಚಾರಣೆ ಮಾಡುತ್ತೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿರುವ ಈ ಔಷಧವನ್ನು ನಾವು ಟ್ರ್ಯಾಕ್ ಮಾಡುತ್ತಿದ್ದೇವೆ ಎಡನು ಹೇಳಿದರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News