ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಬಸವರಾಜ್ ಸೋಮಪ್ಪ ಬೊಮ್ಮಾಯಿ (Basavaraj S Bommai) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಮುಖ್ಯಮಂತ್ರಿಗಳಿಗೆ ರಾಜ್ಯಪಾಲ ಥಾವರಚಂದ್​ ಗೆಹ್ಲೋಟ್​ ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಬಸವರಾಜ್ ಎಸ್ ಬೊಮ್ಮಾಯಿ (Basavaraj S Bommai Oath Taking) ಅವರು ಜನವರಿ 28, 1960 ರಂದು ಜನಿಸಿದರು. ಇವರ ತಂದೆ ಎಸ್. ಆರ್. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ), ತಾಯಿ ಗಂಗಮ್ಮ ಎಸ್. ಬೊಮ್ಮಾಯಿ. ಹುಬ್ಬಳ್ಳಿಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಬಸವರಾಜ್ ಎಸ್ ಬೊಮ್ಮಾಯಿ ಬಿ.ವಿ. ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿದ್ದಾರೆ.


ಇದನ್ನೂ ಓದಿ- New DCM : ನೂತನ ಸಿಎಂ ಆಯ್ಕೆ ಬೆನ್ನೆಲೆ ಮೂರುವ ನೂತನ 'ಡಿಸಿಎಂ' ಗಳ ಆಯ್ಕೆ! 


ಕಾಲೇಜು ದಿನಗಳಿಂದಲೇ ಸಾಮಾಜಿಕ ಹಾಗೂ ರಾಜಕೀಯ ಸೇವೆಯಲ್ಲಿ ಆಸಕ್ತಿ ಹೊಂದಿದ್ದ ಬಸವರಾಜ್ ಎಸ್ ಬೊಮ್ಮಾಯಿ, 1993 ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದಾ ರಾಜ್ಯ ಯುವ ಜನತಾ ದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ ವಹಿಸಿದ್ದರು. 


1998 ಮತ್ತು 2004ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಎರಡು ಬಾರಿ ಆಯ್ಕೆಯಾಗಿದ್ದ ಬಸವರಾಜ್ ಎಸ್ ಬೊಮ್ಮಾಯಿ (Basavaraj S Bommai), 2008ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸತತ ಐದು ವರ್ಷಗಳವರೆಗೆ ಜಲಸಂಪನೂಲ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 


ಇದನ್ನೂ ಓದಿ- New CM Of Karnataka: ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ


2013ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ  ಕ್ಷೇತ್ರದಿಂದ ದ್ವಿತೀಯ ಬಾರಿಗೆ ಆಯ್ಕೆಯಾಗಿದ್ದ ಬಸವರಾಜ ಎಸ್. ಬೊಮ್ಮಾಯಿ 2018 ರ ಚುನಾವಣೆಯಲ್ಲಿ ಮತ್ತೆ ಇದೇ ಕ್ಷೇತ್ರದಿಂದ ತೃತೀಯ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ