ರಾಜ್ಯಪಾಲರಿಂದ ಹೇಳಿಸಿದ ಸುಳ್ಳುಗಳ ಮಾಹಿತಿ ನೀಡಿದ ಬಸವರಾಜ ಬೊಮ್ಮಾಯಿ

ಸವಾಲಿಗೆ ಪ್ರತ್ಯುತ್ತರ ನೀಡಿದ ಬಸವರಾಜ ಬೊಮ್ಮಾಯಿ, ಹಾಲು ಉತ್ಪಾದಕರು ಕಳೆದ ಆರು ತಿಂಗಳಿನಿಂದ ಯಾವುದೇ ಪ್ರೋತ್ಸಾಹ ಧನ ಬಂದಿಲ್ಲ ಅಂತ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲೂ ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದೀರಿ ಎಂದು ಹೇಳಿದರು.

Written by - Prashobh Devanahalli | Edited by - Bhavishya Shetty | Last Updated : Feb 20, 2024, 01:04 PM IST
    • ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ
    • ಸುಳ್ಳು ಹೇಳಿಸಿದ್ದರೆ ತೋರಿಸಿ ಎಂದು ಸವಾಲು ಹಾಕಿದ ಸಿಎಂ
    • ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ ಎಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯಪಾಲರಿಂದ ಹೇಳಿಸಿದ ಸುಳ್ಳುಗಳ ಮಾಹಿತಿ ನೀಡಿದ ಬಸವರಾಜ ಬೊಮ್ಮಾಯಿ title=
File Photo

ಬೆಂಗಳೂರು: ರಾಜ್ಯದ 8.65 ಲಕ್ಷ ಹಾಲು ಉತ್ಪಾದಕರಿಗೆ 757 ಕೋಟಿ ರೂ. ಪ್ರೋತ್ಸಾಹ ಧನ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದು, ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: BJP ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ, ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ: ಸಿಎಂ

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತ ರಾಜ್ಯಪಾಲರಿಂದ ಯಾವುದೇ ಸುಳ್ಳು ಹೇಳಿಸಿಲ್ಲ, ಸುಳ್ಳು ಹೇಳಿಸಿದ್ದರೆ ತೋರಿಸಿ ಎಂದು ಸವಾಲು ಹಾಕಿದರು. ಅವರ ಸವಾಲಿಗೆ ಪ್ರತ್ಯುತ್ತರ ನೀಡಿದ ಬಸವರಾಜ ಬೊಮ್ಮಾಯಿ, ಹಾಲು ಉತ್ಪಾದಕರು ಕಳೆದ ಆರು ತಿಂಗಳಿನಿಂದ ಯಾವುದೇ ಪ್ರೋತ್ಸಾಹ ಧನ ಬಂದಿಲ್ಲ ಅಂತ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲೂ ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದೀರಿ ಎಂದು ಹೇಳಿದರು.

ಅಲ್ಲದೇ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ಬಜೆಟ್’ನಲ್ಲಿ ಘೋಷಿಸಿರುವ ಶೇ.97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಅಂತ ಹೇಳಿಸಿದ್ದೀರಿ. ಸರ್ಕಾರ ಅಧಿಸೂಚನೆ ಹೊರಡಿಸಿರುವ ಯೋಜನೆಗಳು ಆರಂಭವೇ ಆಗಿಲ್ಲ ಅದು ಸುಳ್ಳಲ್ಲವಾ ಎಂದು ಪ್ರಶ್ನಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದೂ ಹೊಸ ಬಸ್ ಖರೀದಿ ಮಾಡಿಲ್ಲ ಎಂದು ಸುಳ್ಳು ಹೇಳಿಸಿದ್ದೀರಿ.  ಬಿಜೆಪಿ ಅವಧಿಯಲ್ಲಿ ನಾಲ್ಕು ನಿಗಮಗಳಿಗೆ ಬಸ್ ಖರೀದಿ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು  3,526, ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ನಮ್ಮ ಅವಧಿಯಲ್ಲಿ ಬಿಎಂಟಿಸಿಗೆ 1,311 ಮತ್ತು ಕೆಎಸ್’ಆರ್’ಟಿಸಿಗೆ 50 ಪವರ್ ಪ್ಲಸ್ ಬಸ್ಸುಗಳು ಹಾಗೂ 20 ವೋಲ್ವೊ ಬಸ್’ಗಳನ್ನು ಖರೀದಿಸಿದ್ದು, ಅವುಗಳು ಕಾರ್ಯಾಚರಣೆ ಪ್ರಾರಂಭಿಸಿದ್ದವು ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:  ಖ್ಯಾತ ನಿರ್ದೇಶಕಿ ಅಂಜಲಿ‌ ಮೆನನ್ ಜತೆ KRG ಸ್ಟುಡಿಯೋಸ್ ಸಹಯೋಗ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3000 ಕೋಟಿ ಮೀಸಲಿಟ್ಟಿದ್ದು, ಸರ್ಕಾರ ಈಗಾಗಲೇ  5468 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಮಂಜೂರು ಮಾಡಿ, ನವೆಂಬರ್ ಹೊತ್ತಿಗೆ 1287 ಕಾಮಗಾರಿ ಪೂರ್ಣಗೊಂಡಿವೆ ಎಂದು ಹೇಳಿದ್ದಾರೆ. ನಮ್ಮ ಕಾಲದಲ್ಲಿ ಅನುಮೋದನೆಗೊಂಡ ಯೋಜನೆಗಳನ್ನು ನಿಮ್ಮ ಸಾಧನೆ ಅಂತ ಹೇಳಿಕೊಂಡಿದ್ದೀರಿ ಎಂದು ಪ್ರತ್ಯುತ್ತರ ನೀಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News