ನೀರಿನಂತಹ ಮೂಲಭೂತ ಅವಶ್ಯಕತೆಗಳು ರಾಜಕೀಯದ ಹೊರತಾಗಿರಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ನೀರಿನಂತಹ ಮೂಲಭೂತ ಅವಶ್ಯಕತೆಗಳು ರಾಜಕೀಯದ ಹೊರತಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಗೋವಾದ ಮುಖ್ಯಮಂತ್ರಿ ಮನೋಹರ ಪರಿಕ್ಕರರವರಿಗೆ ವಿನಂತಿಸಿಕೊಂಡಿದ್ದಾರೆ.
ಇತ್ತೀಚಿಗೆ ಪರಿಕ್ಕರ್ ಕರ್ನಾಟಕದ ಬಿಜೆಪಿ ನಾಯಕ ಯಡಿಯೂರಪ್ಪರವರಿಗೆ ಮಹದಾಯಿ ನದಿಯ ಕುಡಿಯುವ ನೀರಿನ ವಿಚಾರವಾಗಿ ಸಕಾರಾತ್ಮಕವಾಗಿ ಸ್ಪಂಧಿಸುತ್ತಾ ಪತ್ರ ಬರೆದಿರುವ ಹಿನ್ನಲೆಯಲ್ಲಿ ಪ್ರತಿಕ್ರಯಿಸಿರುವ ಸಿದ್ದರಾಮಯ್ಯ ಸರ್ಕಾರದ ಮೂಲಕ ಮತ್ತೊಮ್ಮೆ ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದರ ಮೂಲಕ ಈ ವಿಷಯವನ್ನು ಬಗೆ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ, ಈ ಪತ್ರದಲ್ಲಿ ಈ ಹಿಂದೆ ಮಹಾದಾಯಿ ವಿಚಾರವಾಗಿ ಹಲವು ಬಾರಿ ಪತ್ರ ಬರೆದಿರುವ ಬಗ್ಗೆ ಪ್ರಸ್ತಾಪಿಸಿ ಅದಕ್ಕೆ ಗೋವಾದ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡದಿರುವ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ಒಟ್ಟು 199 ಟಿಎಂಸಿ ಹರಿಯುವ ನೀರಿನಲ್ಲಿ 14.98 ನೀರು ಕರ್ನಾಟಕಕ್ಕೆ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲುಬೇಕೆಂದು ಸಿದ್ದರಾಮಯ್ಯನವರು ಪತ್ರದಲ್ಲಿ ಗೋವಾಕ್ಕೆ ಬೇಡಿಕೆಯನ್ನಿಟ್ಟಿದ್ದಾರೆ.