ಬೆಂಗಳೂರು: ಇಂದು ಸಿಟಿ ರೌಂಡ್ಸ್ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ  ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ  ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು. 


COMMERCIAL BREAK
SCROLL TO CONTINUE READING

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. 


ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು. ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು. 


ಅಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೂ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು. 


ಇದನ್ನೂ ಓದಿ- ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹ


ಕಾಮಗಾರಿಗಳನ್ನು ತ್ವರಿತಗೊಳಿಸಲು ಸೂಚನೆ: 
ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ  ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿಸುರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 


ಒಂದು ತಿಂಗಳಲ್ಲಿ ರಸ್ತೆ  ಗುಂಡಿಗಳನ್ನು ಭರ್ತಿ ಮಾಡಬೇಕು! 
ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು  ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್  ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ.  


ಸಿಲ್ಕ್  ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು  ಚರಂಡಿ ನಿರ್ಮಿಸಲು ಸೂಚಿಸಲಾಗಿದೆ. 


ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ. 


ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. 


ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ  ನೀಡಲಾಗಿದೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.  ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು. 


ಇದನ್ನೂ ಓದಿ- ಬೆಂಗಳೂರಿನ ‘ಸ್ಮೋಕಿ ಪಾನ್’ ತಿಂದು 12 ವರ್ಷದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ


ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಲು ಸೂಚನೆ!
ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್ ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಸೂಚಿಸಲಾಗಿದೆ.  


ರಾಜಕಾಲುವೆ ತೆರವು: 
ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಗೊಳಿಸಲು ಸೂಚಿಸಲಾಗಿದೆ.  ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಜೂನ್ ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ,  ಅದರಂತೆ ಪರಿಶೀಲಿಸಲಾಗಿದೆ ಎಂದರು. ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ  (ಕ್ವಾರಿಗಳಿಗೆ) ಹಾಕಲಾಗುತ್ತಿದೆ ಎಂದವರು ತಿಳಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.