ಬಿಬಿಎಂಪಿ ವತಿಯಿಂದ ಪೌರಕಾರ್ಮಿಕರಿಗೆ ನಿವೇಶನ : ಮೋಸದ ಜಾಲದ ಬಗ್ಗೆ ಎಚ್ಚರಿಕೆ ನೀಡಿದ ಪಾಲಿಕೆ
ಮನೆ ದೊರಕಿಸಿಕೊಡುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿರುವ ಪ್ರಕರಣ ಬಗ್ಗೆ ಪಾಲಿಕೆ ತನ್ನ ಹೇಳಿಕೆ ಬಿಡುಗಡೆ ಮಾಡಿದೆ. ಇದು ಅನಾಮಧೇಯ ವ್ಯಕ್ತಿಗಳು ಪಾಲಿಕೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ಮಾಡುತ್ತಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ಹೇಳಿದೆ.
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ನಿವೇಶನ ನೀಡುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎನ್ನುವುದನ್ನು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇದೊಂದು ಮೋಸದ ಜಾಲವಾಗಿದ್ದು ಯಾರೂ ಈ ಮೋಸದ ಬಲೆಗೆ ಬೀಳಬಾರದು ಎಂದು ಪಾಲಿಕೆ ಮನವಿ ಮಾಡಿದೆ. ಅಲ್ಲದೆ ಅನಾಮಧೇಯರ ಮಾತಿನ ಬಿದ್ದು ಯಾರೂ ಹಣ ನೀಡದಂತೆ ಎಚ್ಚರಿಕೆ ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ನಿವೇಶನ ದೊರಕಿಸಿಕೊಡುವುದಾಗಿ ಅಪಪ್ರಚಾರ ನಡೆಸುವ ಕೆಲಸ ಕೆಲವು ದಿನಗಳಿಂದ ನಡೆದಿದೆ. ಈ ಬಗ್ಗೆ ಇದೀಗ ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಮನೆ ದೊರಕಿಸಿಕೊಡುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿರುವ ಪ್ರಕರಣ ಬಗ್ಗೆ ಪಾಲಿಕೆ ತನ್ನ ಹೇಳಿಕೆ ಬಿಡುಗಡೆ ಮಾಡಿದೆ. ಇದು ಅನಾಮಧೇಯ ವ್ಯಕ್ತಿಗಳು ಪಾಲಿಕೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ಮಾಡುತ್ತಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ಹೇಳಿದೆ.
ಇದನ್ನೂ ಓದಿ :ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತಾ? ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ…
ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ಯಾವುದೇ ನಿವೇಶನಗಳನ್ನು ನೀಡುವ ಯೋಜನೆಯನ್ನು ಪ್ರಸ್ತುತ ಕೈಗೆತ್ತಿಕೊಂಡಿಲ್ಲ ಎನ್ನುವುದನ್ನು ಬಿಬಿಎಂಪಿ ಹೇಳಿಕೆ ಮೂಲಕ ಸ್ಪಷ್ಟಪಡಿಸಿದೆ. ನಿವೇಶನ ಹಂಚಿಕೆ ಕುರಿತು ಪಾಲಿಕೆಯಿಂದ ಯಾವುದೇ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿರುವುದಿಲ್ಲ ಎಂದು ಪಾಲಿಕೆ ತಿಳಿಸಿದೆ. ಇಂತಹ ಯಾವುದೇ ಆಮಿಷಗಳಿಗೆ/ಸುಳ್ಳು ವದಂತಿಗಳಿಗೆ ಕಿವಿ ಗೊಟ್ಟು ಮೋಸ ಹೋಗಬಾರದೆಂದು ಪೌರಕಾರ್ಮಿಕರು ಮತ್ತು ಸಾರ್ವಜನಿಕರಲ್ಲಿ ವಿನಂತಿಸಿದೆ.
ಒಂದು ವೇಳೆ ಅನಾಮಧೇಯ ವ್ಯಕ್ತಿಗಳ ಮಾತುಗಳನ್ನು ಕೇಳಿ ಮೋಸ ಹೋದರೆ ಪಾಲಿಕೆಯು ಜವಾಬ್ದಾರಿಯಾಗಿರುವುದಿಲ್ಲವೆಂದು ಜಂಟಿ ಆಯುಕ್ತರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.
ಇದನ್ನೂ ಓದಿ : Karnataka government: ವ್ಯಾಪಾರ ಸಂಬಂಧ ಗಟ್ಟಿಗೊಳಿಸಲು ಅಮೆರಿಕಾದ ಅಮ್’ಚಾಮ್ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರದ ಒಪ್ಪಂದ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.