ಬಿಬಿಎಂಪಿ ಕಾರ್ಪೊರೇಟರ್ ಏಳುಮಲೈ ಇನ್ನಿಲ್ಲ

ಕಳೆದ 28 ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಏಳುಮಲೈ.

Updated: Dec 6, 2018 , 12:08 PM IST
ಬಿಬಿಎಂಪಿ ಕಾರ್ಪೊರೇಟರ್ ಏಳುಮಲೈ ಇನ್ನಿಲ್ಲ

ಬೆಂಗಳೂರು: ಬಿಬಿಎಂಪಿಯ ಸಗಾಯಪುರಂ ವಾರ್ಡಿನ ಪಕ್ಷೇತರ ಸದಸ್ಯ ಏಳುಮಲೈ ಇಂದು ಬೆಳಿಗ್ಗೆ 1:30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. 

ಕಳೆದ 28 ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಏಳುಮಲೈ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂಗಿನಲ್ಲಿ ಗುಳ್ಳೆ ಆಗಿದೆಯೆಂದು ಸಂತೋಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ವೇಳೆ ನೀಡಿದ ಅನಸ್ತೇಷಿಯಾದಿಂದ ಸಮಸ್ಯೆಯಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದೇ ವೇಳೆ ಹೃದಾಯಾಘಾತಕ್ಕೊಳಗಾಗಿದ್ದ ಅವರನ್ನು ಒಂದು ವಾರದ ಹಿಂದೆ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೋಮಾ ಸ್ಥಿತಿಯಲ್ಲಿದ್ದ ಏಳುಮಲೈ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.